Andolana originals

ಹೊಂಗನೂರು: ಸಮರ್ಪಕ ರಸ್ತೆ, ಕುಡಿಯುವ ನೀರಿಲ್ಲದೆ ಸಾರ್ವಜನಿಕರ ಪರದಾಟ

ಯಳಂದೂರು: ಚಾಮರಾಜನಗರ ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಕೆಲ ಬಡಾವಣೆಗಳಿಗೆ ಸರಿಯಾಗಿ ಕುಡಿಯುವ ನೀರು ಸರಬರಾಜಾಗುತ್ತಿಲ್ಲ. ರಸ್ತೆಗಳೆಲ್ಲಾ ಹಳ್ಳಕೊಳ್ಳಗಳಿಂದ ತುಂಬಿವೆ. ಈಚೆಗೆ ಬಿದ್ದ ಮಳೆಯಿಂದ ಉಪ್ಪಾರ, ನಾಯಕ, ಮುಸ್ಲಿಂ ಬಡಾವಣೆಗೆ ತೆರಳುವುದು ಕಷ್ಟವಾಗಿದೆ. ಚರಂಡಿಯಲ್ಲಿ ಹೂಳು ತೆಗೆದಿಲ್ಲದ ಕಾರಣ ಮಳೆ ಬಂದರೆ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದ್ದು ಸಾರ್ವಜನಿಕರು ಪರದಾಡುವಂತಾಗಿದೆ.

ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ದೊಡ್ಡ ಗ್ರಾಮ ಪಂಚಾಯಿತಿಗಳಲ್ಲಿ ಹೊಂಗನೂರು ಕೂಡ ಒಂದಾಗಿದೆ. ಈ ಗ್ರಾಮದ ೫ನೇ ವಾರ್ಡಿನ ಉಪ್ಪಾರ ಬಡಾವಣೆಗೆ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ. ಇಲ್ಲಿ ೨೫೦ಕ್ಕೂ ಹೆಚ್ಚು ಕುಟುಂಬಗಳಿದ್ದು, ಕೇವಲ ಒಂದು ಕೊಳವೆ ಬಾವಿ ಇದೆ. ಆದರೆ ಇಲ್ಲಿ ನೀರು ಸರಿಯಾಗಿ ಬರುತ್ತಿಲ್ಲ. ಗ್ರಾಮದ ೩ನೇ ವಾರ್ಡಿನಲ್ಲಿ ಮುಸ್ಲಿಂ, ಕುರುಬ ಸಮುದಾಯದವರಿದ್ದಾರೆ. ಇಲ್ಲೂ ಕೂಡ ನೀರಿನ ಸಮಸ್ಯೆ ಇದೆ. ಇಲ್ಲಿನ ಮುಖ್ಯರಸ್ತೆಗೆ ಮಣ್ಣನ್ನು ಸುರಿಯಲಾಗಿದೆ. ಈ ರಸ್ತೆ ಹಳ್ಳ-ಕೊಳ್ಳಗಳಿಂದ ಕೂಡಿದೆ.

ಇದನ್ನು ಓದಿ: ಅಪರಾಧ ಕೃತ್ಯ ತಡೆಗಟ್ಟಲಿ; ಸಾಂಸ್ಕೃತಿಕ ನಗರಿಯಲ್ಲಿ ನೆಮ್ಮದಿ ನೆಲೆಸಲಿ

ಮಳೆ ಬಿದ್ದರೆ ಇಡೀ ರಸ್ತೆ ಕೆಸರುಮಯವಾಗುತ್ತದೆ. ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಸಂಚರಿಸು ವುದಕ್ಕೆ ತೊಂದರೆಯಾಗಿದೆ. ಅನೇಕರು ಜಾರಿ ಬಿದ್ದು ಗಾಯಗೊಂಡಿರುವ ಘಟನೆಯೂ ನಡೆದಿದೆ. ರಸ್ತೆಯಲ್ಲಿ ಸಂಗ್ರಹವಾಗಿರುವ ಕಸವನ್ನು ತೆರವುಗೊಳಿಸಲು ಇಲ್ಲಿನ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ವಹಿಸಿದೆ. ಇಲ್ಲಿಗೆ ಜೆಜೆಎಂನಲ್ಲಿ ನಲ್ಲಿಗಳನ್ನು ಅಳವಡಿಸಲಾಗಿದ್ದರೂ ಇದಕ್ಕೆ ಸಂಪರ್ಕ ನೀಡಿಲ್ಲ. ಇಲ್ಲಿರುವ ಅನೇಕ ಕುಟುಂಬಗಳು ಕೂಲಿಯನ್ನೇ ನಂಬಿ ಬದುಕುತ್ತಿವೆ. ಆದರೆ ನಲ್ಲಿಯಲ್ಲಿ ಬರುವ ಅಲ್ಪ ಪ್ರಮಾಣದ ನೀರನ್ನು ಸಂಗ್ರಹಿಸಲು ಕೂಲಿ ಮಾಡುವ ಮಹಿಳೆಯರು ಮನೆಯಲ್ಲೇ ಇರಬೇಕಾದ ಸ್ಥಿತಿ ಇದೆ. ಇಲ್ಲವಾದಲ್ಲಿ ಸೈಕಲ್‌ಗಳಿಗೆ ಬಿಂದಿಗೆ ಕಟ್ಟಿಕೊಂಡು ದೂರದಿಂದ ನೀರು ತರುವ ಸ್ಥಿತಿ ಇದೆ.

ಗ್ರಾಮದ ತುಂಬೆಲ್ಲಾ ಅನೈರ್ಮಲ್ಯ ತಾಂಡವವಾಡುತ್ತಿದೆ. ಇಲ್ಲಿನ ರಸ್ತೆ ಬದಿಗಳಲ್ಲಿ ಕಸ ರಾಶಿರಾಶಿಯಾಗಿ ಬಿದ್ದಿದೆ. ಕಸವನ್ನು ಸಂಗ್ರಹಿಸಲು ಇರುವ ವಾಹನ ಕೆಟ್ಟು ನಿಂತಿದೆ. ಇಲ್ಲಿನ ಕಸ ವಿಲೇವಾರಿಯಾಗುವುದೇ ಇಲ್ಲ. ಚರಂಡಿಯಲ್ಲಿ ಹೂಳು ತುಂಬಿದ್ದು, ಇದನ್ನು ನಿಯಮಿತವಾಗಿ ಸ್ವಚ್ಛಗೊಳಿಸದಿರುವುದ ರಿಂದ ಮಳೆ ಬಂದರೆ ಕಲುಷಿತ ನೀರೆಲ್ಲಾ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿ ರಾಡಿಯಾಗುತ್ತದೆ. ಕೆಲ ಬೀದಿಗಳಿಗೆ ಇನ್ನೂ ಕೂಡ ಚರಂಡಿ ನಿರ್ಮಿಸದೆ ಸಾರ್ವಜನಿಕರು ಪರಿಪಾಟಲು ಪಡುವಂತಾಗಿದೆ. ಸಂಬಂಧಪಟ್ಟ ಪಂಚಾಯಿತಿಯವರು ಈ ಬಗ್ಗೆ ಕೂಡಲೇ ಕ್ರಮ ವಹಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

” ನಮ್ಮ ಗ್ರಾಮದ ಉಪ್ಪಾರ, ಮುಸ್ಲಿಂ ಹಾಗೂ ಕುರುಬ ಸಮುದಾಯದವರ ಬೀದಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಇಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ, ರಸ್ತೆ ನಿರ್ಮಾಣ ಮಾಡಿಲ್ಲ. ಪಂಚಾಯಿತಿಯಲ್ಲಿ ಪೌರ ಕಾರ್ಮಿಕರೇ ಇಲ್ಲ. ಸಂಬಂಧಪಟ್ಟ ಪಿಡಿಒ, ಇಒಗೆ ಹಲವು ಬಾರಿ ಮನವಿ ಮಾಡಿದ್ದರೂ ಅವರು ಸ್ಪಂದಿಸುತ್ತಿಲ್ಲ. ಉನ್ನತ ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು.”

-ಚಾಮದಾಸಯ್ಯ, ಗ್ರಾಪಂ ಸದಸ್ಯ, ಹೊಂಗನೂರು

ಆಂದೋಲನ ಡೆಸ್ಕ್

Recent Posts

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

8 mins ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

6 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

6 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

6 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

6 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

6 hours ago