ಮೈಸೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಾನಸ ಗಂಗೋತ್ರಿ ಕ್ಯಾಂಪಸ್‌ನ ವಿದ್ಯಾರ್ಥಿ ನಿಲಯದ ಅಡುಗೆ ಸಹಾಯಕರೊಬ್ಬರು ಡೆತ್ ನೋಟ್ ಬರೆದಿಟ್ಟುವಿದ್ಯಾರ್ಥಿ ನಿಲಯದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾನಸ ಗಂಗೋತ್ರಿ ಕ್ಯಾಂಪಸ್ ಹಾಸ್ಟೆಲ್‌ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಿ. ರಾಚಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಸಾವಿಗೆ ಯಾರೂ ಕಾರಣರಲ್ಲ. ಸಾವಿನ ಸಂಬಂಧ ಯಾರನ್ನೂ ದೂಷಿಸಬೇಡಿ. ಜೀವನ ಸಾಕು ಎಂದು ಭಾವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ. ಐದಾರು ವರ್ಷಗಳಿಂದ ಮಾನಸ ಗಂಗೋತ್ರಿ ಬ್ಲಾಕ್-೨ ಹಾಸ್ಟೆಲ್‌ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಾಚಪ್ಪ, ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ಗ್ರಾಮದವರಾಗಿದ್ದಾರೆ.
ನನ್ನ ಸಾವಿಗೆ ನಾನೇ ಕಾರಣ ಬೇರೆ ಯಾರೂ ಕಾರಣರಲ್ಲ. ನನ್ನಿಂದ ಯಾರಿಗಾದರೂ ಬೇಸರವಾಗಿದ್ದರೆ , ನೋವಾಗಿದ್ದರೆ ದಯವಿಟ್ಟು ಕ್ಷಮೆ ಇರಲಿ. ನಾನು ಯಾವುದೇ ಇತರೆ ವಿಚಾರಕ್ಕಾಗಿ ಅಥವಾ ವೈಯಕ್ತಿಕ ವಿಚಾರಕ್ಕೆ ತಲೆ ಕೆಡಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ. ಜೀವನ ಸಾಕು ಅಂತ ನಿರ್ಧಾರ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಯಾರನ್ನೂ ಹೊಣೆ ಮಾಡಬೇಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ನನ್ನ ಕುಟುಂಬದವರು ನನ್ನನ್ನು ಕ್ಷಮಿಸುತ್ತಾರೆ ಎಂದು ಭಾವಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ. ಸ್ಥಳಕ್ಕೆ ಜಯಲಕ್ಷ್ಮೀಪುರಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.