ಮೈಸೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಾನಸ ಗಂಗೋತ್ರಿ ಕ್ಯಾಂಪಸ್‌ನ ವಿದ್ಯಾರ್ಥಿ ನಿಲಯದ ಅಡುಗೆ ಸಹಾಯಕರೊಬ್ಬರು ಡೆತ್ ನೋಟ್ ಬರೆದಿಟ್ಟುವಿದ್ಯಾರ್ಥಿ ನಿಲಯದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾನಸ ಗಂಗೋತ್ರಿ ಕ್ಯಾಂಪಸ್ ಹಾಸ್ಟೆಲ್‌ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಿ. ರಾಚಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಸಾವಿಗೆ ಯಾರೂ ಕಾರಣರಲ್ಲ. ಸಾವಿನ ಸಂಬಂಧ ಯಾರನ್ನೂ ದೂಷಿಸಬೇಡಿ. ಜೀವನ ಸಾಕು ಎಂದು ಭಾವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ. ಐದಾರು ವರ್ಷಗಳಿಂದ ಮಾನಸ ಗಂಗೋತ್ರಿ ಬ್ಲಾಕ್-೨ ಹಾಸ್ಟೆಲ್‌ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಾಚಪ್ಪ, ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ಗ್ರಾಮದವರಾಗಿದ್ದಾರೆ.
ನನ್ನ ಸಾವಿಗೆ ನಾನೇ ಕಾರಣ ಬೇರೆ ಯಾರೂ ಕಾರಣರಲ್ಲ. ನನ್ನಿಂದ ಯಾರಿಗಾದರೂ ಬೇಸರವಾಗಿದ್ದರೆ , ನೋವಾಗಿದ್ದರೆ ದಯವಿಟ್ಟು ಕ್ಷಮೆ ಇರಲಿ. ನಾನು ಯಾವುದೇ ಇತರೆ ವಿಚಾರಕ್ಕಾಗಿ ಅಥವಾ ವೈಯಕ್ತಿಕ ವಿಚಾರಕ್ಕೆ ತಲೆ ಕೆಡಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ. ಜೀವನ ಸಾಕು ಅಂತ ನಿರ್ಧಾರ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಯಾರನ್ನೂ ಹೊಣೆ ಮಾಡಬೇಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ನನ್ನ ಕುಟುಂಬದವರು ನನ್ನನ್ನು ಕ್ಷಮಿಸುತ್ತಾರೆ ಎಂದು ಭಾವಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ. ಸ್ಥಳಕ್ಕೆ ಜಯಲಕ್ಷ್ಮೀಪುರಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…
ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಡಾವಣೆ ಪೊಲೀಸ್…
ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್ ರದ್ದುಗೊಳಿಸಿದ…