Andolana originals

ಆತ್ಮಹತ್ಯೆಗೆ ಶರಣಾದ ಅಡುಗೆ ಸಹಾಯಕ

ಮೈಸೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಾನಸ ಗಂಗೋತ್ರಿ ಕ್ಯಾಂಪಸ್‌ನ ವಿದ್ಯಾರ್ಥಿ ನಿಲಯದ ಅಡುಗೆ ಸಹಾಯಕರೊಬ್ಬರು ಡೆತ್ ನೋಟ್ ಬರೆದಿಟ್ಟುವಿದ್ಯಾರ್ಥಿ ನಿಲಯದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸ ಗಂಗೋತ್ರಿ ಕ್ಯಾಂಪಸ್ ಹಾಸ್ಟೆಲ್‌ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಿ. ರಾಚಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಸಾವಿಗೆ ಯಾರೂ ಕಾರಣರಲ್ಲ. ಸಾವಿನ ಸಂಬಂಧ ಯಾರನ್ನೂ ದೂಷಿಸಬೇಡಿ. ಜೀವನ ಸಾಕು ಎಂದು ಭಾವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ. ಐದಾರು ವರ್ಷಗಳಿಂದ ಮಾನಸ ಗಂಗೋತ್ರಿ ಬ್ಲಾಕ್-೨ ಹಾಸ್ಟೆಲ್‌ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಾಚಪ್ಪ, ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ಗ್ರಾಮದವರಾಗಿದ್ದಾರೆ.

ನನ್ನ ಸಾವಿಗೆ ನಾನೇ ಕಾರಣ ಬೇರೆ ಯಾರೂ ಕಾರಣರಲ್ಲ. ನನ್ನಿಂದ ಯಾರಿಗಾದರೂ ಬೇಸರವಾಗಿದ್ದರೆ , ನೋವಾಗಿದ್ದರೆ ದಯವಿಟ್ಟು ಕ್ಷಮೆ ಇರಲಿ. ನಾನು ಯಾವುದೇ ಇತರೆ ವಿಚಾರಕ್ಕಾಗಿ ಅಥವಾ ವೈಯಕ್ತಿಕ ವಿಚಾರಕ್ಕೆ ತಲೆ ಕೆಡಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ. ಜೀವನ ಸಾಕು ಅಂತ ನಿರ್ಧಾರ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಯಾರನ್ನೂ ಹೊಣೆ ಮಾಡಬೇಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ನನ್ನ ಕುಟುಂಬದವರು ನನ್ನನ್ನು ಕ್ಷಮಿಸುತ್ತಾರೆ ಎಂದು ಭಾವಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ. ಸ್ಥಳಕ್ಕೆ ಜಯಲಕ್ಷ್ಮೀಪುರಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

andolana

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

8 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

9 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

9 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

10 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

10 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

14 hours ago