Andolana originals

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ

ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ

ಮಡಿಕೇರಿ: ನಮ್ಮ ಗಣತಿ, ನಮ್ಮ ಅಭಿವೃದ್ಧಿ ೨೦೨೭ರ ಜನಗಣತಿಯ ಮೊದಲ ಹಂತವು ಈಗಾಗಲೇ ಆರಂಭ ವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಗಣತಿ ಕಾರ್ಯ ಚುರುಕು ಗೊಂಡಿದೆ. ಜಿಲ್ಲೆಯಲ್ಲಿ ಸುಮಾರು ೧,೭೪,೧೧೪ ಕುಟುಂಬಗಳನ್ನು ಗಣತಿ ಕಾರ್ಯಕ್ಕೆ ಗುರುತಿಸಲಾಗಿದ್ದು, ಎಲ್ಲಾ ಕುಟುಂಬಗಳ ಮಾಹಿತಿ ಸಂಗ್ರಹಕ್ಕೆ ಪ್ರಯತ್ನಿಸಲಾಗುತ್ತಿದೆ. ಏ.೧ರಿಂದ ಏ.೧೫ರವರೆಗೆ ಆನ್‌ಲೈನ್ ಮೂಲಕ  ಯಂ ಗಣತಿ ಕಾರ್ಯಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಜಿಲ್ಲೆಯಲ್ಲಿ ೭,೩೭೯ ಕುಟುಂಬಗಳು ಸ್ವಯಂ ಮಾಹಿತಿ ನೀಡಿವೆ. ಇನ್ನು ಉಳಿದ ಕುಟುಂಬಗಳ ಮಾಹಿತಿ ಸಂಗ್ರಹಕ್ಕೆ ಗಣತಿದಾರರು ಮನೆಗೆ ಭೇಟಿ ನೀಡಲಿದ್ದು, ಮೇ ೧೫ರವರೆಗೆ ಗಣತಿ ಕಾರ್ಯ ಕೈಗೊಳ್ಳಲಿದ್ದಾರೆ.

ಗಣತಿದಾರರು ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕೆಲವು ಪ್ರಶ್ನೆಗಳನ್ನು ಕೇಳಲಿದ್ದು, ಸಾರ್ವಜನಿಕರು ಅಗತ್ಯ ಮಾಹಿತಿ ನೀಡಬೇಕಾಗುತ್ತದೆ. ಕಟ್ಟಡ ಸಂಖ್ಯೆ, ನೆಲ, ಗೋಡೆ ಮತ್ತು ಮೇಲ್ಚಾವಣಿ ನಿರ್ಮಾಣಕ್ಕೆ ಬಳಸಿದ ವಸ್ತುಗಳು, ಮನೆಯ ಬಳಕೆ, ಮನೆಯ ಸ್ಥಿತಿ ಮೊದಲಾದ ಮಾಹಿತಿಯನ್ನು ನೀಡಬೇಕಾಗುತ್ತದೆ. ಜೊತೆಗೆ ಕುಟುಂಬದ ಮೂಲಭೂತ ಮಾಹಿತಿಯನ್ನೂ ನೀಡಬೇಕಾಗಿದ್ದು, ಕುಟುಂಬ ಸದಸ್ಯರ ಸಂಖ್ಯೆ, ಕುಟುಂಬದ ಮುಖ್ಯಸ್ಥರ ಹೆಸರು, ಲಿಂಗ ಮತ್ತು ಜಾತಿ, ಮನೆಯ ಮಾಲೀಕತ್ವದ ಸ್ಥಿತಿ, ಕೊಠಡಿಗಳ ಸಂಖ್ಯೆ, ಮನೆಯಲ್ಲಿ ವಾಸಿಸುವ ವಿವಾಹಿತ ದಂಪತಿಗಳ ಸಂಖ್ಯೆಯ ಮಾಹಿತಿಯನ್ನು ಒದಗಿಸಬೇಕಾಗುತ್ತದೆ.

ಸೌಲಭ್ಯಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಮೂಲ ಮತ್ತು ಕುಡಿಯುವ ನೀರಿನ ಲಭ್ಯತೆ, ಬೆಳಕಿನ ಮುಖ್ಯ ಮೂಲ, ಶೌಚಾಲಯದ ಸೌಲಭ್ಯ ಹಾಗೂ ಶೌಚಾಲಯದ ಪ್ರಕಾರ, ಮಲಿನ ನೀರಿನ ಹರಿವು ವ್ಯವಸ್ಥೆ, ಸ್ನಾನಗೃಹ ಸೌಲಭ್ಯ, ಅಡುಗೆಮನೆ ಮತ್ತು ಸಂಪರ್ಕ, ಜೊತೆಗೆ ಅಡುಗೆಗೆ ಬಳಸುವ ಮುಖ್ಯ ಇಂಧನದ ಬಗೆಗಿನ ಮಾಹಿತಿಯನ್ನು ಗಣತಿದಾರರು ಸಂಗ್ರಹಿಸಲಿದ್ದಾರೆ. ಆಸ್ತಿಗಳಿಗೆ ಸಂಬಂಧಿಸಿದಂತೆ ರೇಡಿಯೋ, ಟ್ರಾನ್ಸಿಸ್ಟರ್‌ಗಳು, ಟೆಲಿವಿಷನ್, ಇಂಟರ್‌ನೆಟ್ ಸೌಲಭ್ಯ, ಕಂಪ್ಯೂಟರ್, ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಫೋನ್, ಟೆಲಿಫೋನ್, ದ್ವಿಚಕ್ರ, ನಾಲ್ಕು ಚಕ್ರ ವಾಹನಗಳ ಮಾಹಿತಿ ಯನ್ನೂ ನೀಡಬೇಕು. ಇದರೊಂದಿಗೆ ಬಳಸುವ ಮುಖ್ಯ ಧಾನ್ಯ ಹಾಗೂ ಜನಗಣತಿ ಸಂವಹನಕ್ಕಾಗಿ ಮೊಬೈಲ್ ಸಂಖ್ಯೆಯನ್ನೂ ನೀಡಬೇಕಿದೆ.

೯೯೯ ಗಣತಿದಾರರ ನೇಮಕ..!: ಮನೆ ಮನೆ ಗಣತಿ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ ೯೯೯ ಗಣತಿದಾರರನ್ನು ನಿಯೋಜಿಸಲಾಗಿದೆ. ಮಡಿಕೇರಿ ತಾಲ್ಲೂಕಿಗೆ ೧೮೭, ಮಡಿಕೇರಿ ನಗರಕ್ಕೆ ೬೧, ಸೋಮವಾರಪೇಟೆ ತಾಲ್ಲೂಕಿಗೆ ೧೮೬, ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ೧೨, ವಿರಾಜಪೇಟೆ ತಾಲ್ಲೂಕಿಗೆ ೧೩೩, ವಿರಾಜಪೇಟೆ ಪುರಸಭೆ ವ್ಯಾಪ್ತಿಗೆ ೩೬, ಪೊನ್ನಂಪೇಟೆ ತಾಲ್ಲೂಕಿನಲ್ಲಿ ೧೬೧, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ೧೯, ಕುಶಾಲನಗರ ತಾಲ್ಲೂಕಿಗೆ ೧೫೮, ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ೪೬, ಒಟ್ಟು ೯೯೯ ಗಣತಿದಾರರನ್ನು ನಿಯೋಜಿಸಲಾಗಿದೆ. ಜೊತೆಗೆ ೧೭೨ ಮಂದಿ ಗಣತಿ ಮೇಲ್ವಿಚಾರಕರಾಗಿ ಕರ್ತವ್ಯ  ನಿರ್ವಹಿಸಲಿದ್ದಾರೆ. ಹಾಗೆಯೇ ಶೇ.೧೦ ರಷ್ಟು ಗಣತಿದಾರರನ್ನು ಕಾಯ್ದಿರಿಸಲಾಗಿದೆ.

” ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಲ್ಲಿ ಗಣತಿ ಕಾರ್ಯವೂ ಒಂದಾಗಿದ್ದು, ಸಾರ್ವಜನಿಕರು ಗಣತಿಯಲ್ಲಿ ಪಾಲ್ಗೊಂಡು ಮಾಹಿತಿ ನೀಡಬೇಕು. ಜನಗಣತಿಯು ದೇಶದ ಶಕ್ತಿ ಎಂಬುದನ್ನು ಮರೆಯಬಾರದು. ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಮೇ ೧೫ರವರೆಗೆ ಗಣತಿದಾರರು ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದು, ಅಗತ್ಯ ಮಾಹಿತಿ ನೀಡಬೇಕು.”

-ಎಸ್.ಜೆ. ಸೋಮಶೇಖರ್, ಕೊಡಗು ಜಿಲ್ಲಾಧಿಕಾರಿ

 

 

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago