Andolana originals

ಏಳೆಂಟು ವರ್ಷ ಹಿಂದೆಯೇ ಎಚ್‌ ಪಿವಿ ಲಸಿಕೆ ಆರಂಭಿಸಿದ ವೈದ್ಯ!

ಪುರುಷರೂ ಎಚ್‌ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ

• ಹೇಮಂತ್‌ಕುಮಾ‌ರ್‌
ಮಂಡ್ಯ :  ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ ಕ್ಯಾನ್ಸರ್‌ಗೆ ಔಷಧವಿಲ್ಲದಿದ್ದರೂ ಮುಂಜಾಗ್ರತೆಯಾಗಿ ಎಚ್.ಪಿ.ವಿ ಲಸಿಕೆ ಪಡೆದುಕೊಳ್ಳುವುದರಿಂದ ರೋಗಬಾರದಂತೆ ರಕ್ಷಿಸಿಕೊಳ್ಳಬಹುದಾಗಿದೆ. ಇದಕ್ಕಾಗಿ ಸರ್ಕಾರ ಉಚಿತ ಎಚ್‌ ಪಿವಿ ಲಸಿಕೆ ಅಭಿಯಾನವನ್ನು ಆರಂಭಿಸಿದೆ. ಆದರೆ, ನಗರದ ಮಿಮ್ಸ್‌ನ ಗರ್ಭಿಣಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಯೋಗೇಂದ್ರಕುಮಾರ್‌ ಅವರು ಏಳೆಂಟು ವರ್ಷಗಳ ಹಿಂದೆಯೇ ಈ ಲಸಿಕೆ ನೀಡುತ್ತಾ ಅನೇಕರಿಗೆ ಗರ್ಭ ಕಂಡ ಕ್ಯಾನ್ಸರ್‌ನಿಂದ ರಕ್ಷಣೆ ನೀಡಿರುವುದು ಬೆಳಕಿಗೆ ಬಂದಿದೆ.

ಗರ್ಭಕಂಠಕ್ಯಾನ್ಸರ್ ಮಾರಣಾಂತಿಕವಾಗಿ ಪರಿಣಮಿಸಿದ್ದು, ಇದರಿಂದ ಪ್ರತಿ 8 ನಿಮಿಷಕ್ಕೆ ಓರ್ವ ಮಹಿಳೆ ಸಾವನ್ನಪ್ಪುತ್ತಿದ್ದಾರೆ. ದಿನ 160 ರಿಂದ 180 ಮಹಿಳೆಯರು ಕ್ಯಾನ್ಸರ್‌ನೊಂದಿಗೆ ಹೋರಾಡಿ ಕೊನೆಯುಸಿರೆಳೆಯುತ್ತಿದ್ದಾರೆ ಎಂದರೆ ಇದು ಎಷ್ಟು ಅಪಾಯಕಾರಿ ಎಂಬುದರ ಅರಿವಾಗುತ್ತದೆ. ವಿದೇಶ ಗಳಲ್ಲಿ ಬ್ರೆಸ್ಟ್ ಕ್ಯಾನ್ಸರ್ ಹೆಚ್ಚು. ಪುರುಷರಲ್ಲಿ ಶಿಶ್ನ, ಗುದ ಹಾಗೂ ಬಾಯಿ ಕ್ಯಾನ್ಸರ್ ಕಂಡುಬರುತ್ತಿದ್ದು. ಇದಕ್ಕೆ ಎಚ್‌ ಪಿವಿ ಲಸಿಕೆಯನ್ನೇ ನೀಡಲಾಗುತ್ತಿದೆ.

ಈ ಲಸಿಕೆಯಿಂದಯಾವುದೇ ಅಡ್ಡಪರಿಣಾಮವಿರುವುದಿಲ್ಲ. ಈ ಹಿಂದೆ ಗ್ಯಾಡಿಸಾಲ್-9 ಎಂಬ ಲಸಿಕೆಗೆ 11 ಸಾವಿರ ರೂ., ಸರ್ವೋವ್ಯಾಕ್ ಲಸಿಕೆಗೆ 2 ಸಾವಿರ ರೂ. ಹಾಗೂ ಗ್ಯಾಡಿಸಾಲ್ ಲಸಿಕೆ 4,000 ರೂ.ಗಳಿಗೆ ಲಭ್ಯವಿತ್ತು. ಈಗ ಸರ್ಕಾರಿ ಆಸ್ಪತ್ರೆ ಯಲ್ಲಿ ಸಂಪೂರ್ಣ ಉಚಿತವಾಗಿ ಸಿಗುತ್ತಿದೆ. 9 ರಿಂದ 26 ವರ್ಷದವರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವುದು ಸುರಕ್ಷಿತ.

ವಾಸ್ತವದಲ್ಲಿ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಹರಡುವ ಈ ಕ್ಯಾನ್ಸರ್ ಮಹಿಳೆಯರಲ್ಲಿ ಮಾತ್ರವಲ್ಲ, ಪುರುಷರಲ್ಲೂ ಸಾಕಷ್ಟು ಸಮಸ್ಯೆಗಳನ್ನು ಉಂಟುಮಾಡುತ್ತಿದೆ. ಆದ್ದರಿಂದ ಪುರುಷರೂ ಈ ವ್ಯಾಕ್ಸಿನ್ ಪಡೆಯಬೇಕು ಎಂದು ಯೋಗೇಂದ್ರಕುಮಾರ್ ಜಾಗೃತಿ ಮೂಡಿಸುತ್ತಿದ್ದಾರೆ. ಈ ಕಾಯಿಲೆಯನ್ನು ಆರಂಭದಲ್ಲೇ ಪತ್ತೆಹಚ್ಚಿ, ಚಿಕಿತ್ಸೆ ಪಡೆದರೆ ಸುರಕ್ಷಿತವಾಗಿ ಇರಬಹುದು. 3 ರಿಂದ 4ನೇ ಹಂತಕ್ಕೆ ಹೋದರೆ ಏನೂ ಮಾಡಲಾಗದು.

ಆದ್ದರಿಂದ ಪುರುಷರಿಗೂ ಎಚ್‌ ಪಿವಿ ಲಸಿಕೆ ನೀಡುವುದು ಅತ್ಯಗತ್ಯವಾಗಿದೆ. ಸೆರ್ವಿಕ್ಸ್ ನೇರ ಪರೀಕ್ಷೆ, ವೈರಸ್ ಪತ್ತೆ ಹಚ್ಚುವುದರ ಮೂಲಕ ಈ ಕ್ಯಾನ್ಸರ್ ಗೆ ಚಿಕಿತ್ಸೆ ಆರಂಭಿಸುವುದು ಸೂಕ್ತ. ಮಹಿಳೆಯರಲ್ಲಿ ಬಿಳಿಸೆರಗು, ಬಂಜೆತನ, ಅನಿಯಮಿತ ಋತುಸ್ರಾವ, ಗರ್ಭಕಂಠ ಕ್ಯಾನ್ಸರ್ ಇಂದು ವಿಶ್ವದಲ್ಲಿ ಹೆಚ್ಚಾಗಿ ಕಾಡುತ್ತಿರುವ ಸಮಸ್ಯೆಗಳಾಗಿವೆ. ಇದರಲ್ಲಿ ಗರ್ಭಕಂಠ ಕ್ಯಾನ್ಸರ್ ಹೆಚ್ಚು ಮಾರಕ. ಲೈಂಗಿಕ ಸಂಪರ್ಕದಿಂದ ಬರುವ ಎಚ್‌ ಪಿವಿ ವೈರಸ್‌ ನಿಂದಾಗಿ ಗರ್ಭ ಕಂಠ ಕ್ಯಾನ್ಸರ್ ಉಂಟಾಗುತ್ತದೆ. ಇದಕ್ಕೆ 20 ವರ್ಷಗಳ ಸತತ ಸಂಶೋಧನೆಯಿಂದಾಗಿ ಲಸಿಕೆಯನ್ನು ಕಂಡುಹಿಡಿಯಲಾಗಿದೆ ಎಂದು ತಿಳಿಸಿದರು.

ದೇಶದ ಹೆಣ್ಣುಮಕ್ಕಳಿಗೆ ಉಚಿತ ಲಸಿಕೆ
ನಮ್ಮ ದೇಶದಲ್ಲಿ ಒಂದು ಡೋಸ್ ಎಚ್ ಪಿವಿ ಲಸಿಕೆಗೆ 15 ಸಾವಿರ ರೂ.ದರವಿತ್ತು. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಎಲ್ಲ ಹೆಣ್ಣುಮಕ್ಕಳಿಗೂ ಉಚಿತವಾಗಿ ಈ ಲಸಿಕೆ ಹಾಕುವ ಕಾರ್ಯಕ್ರಮವನ್ನು ಪರಿಚಯಿಸಿದ್ದು, ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ 9-14 ವರ್ಷದ ಹೆಣ್ಣುಮಕ್ಕಳಿಗೆ 2 ಡೋಸ್ ಹಾಗೂ 15 ರಿಂದ 45 ವರ್ಷದ ಮಹಿಳೆಯರಿಗೆ 3 ಡೋಸ್ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಡಾ. ಯೋಗೇಂದ್ರಕುಮಾರ್ ತಿಳಿಸಿದ್ದಾರೆ.

ಯಾರೇ ಆಗಲಿ ಸಮಸ್ಯೆ ಕಂಡುಬಂದಲ್ಲಿ ನಿರ್ಲಕ್ಷ ಮಾಡದೇ ತಪಾಸಣೆ ಮಾಡಿಸಿಕೊಳ್ಳಬೇಕು.ಆರಂಭಿಕ ಹಂತದಲ್ಲಿ ಪರೀಕ್ಷೆಯ ಮೂಲಕ ಪತ್ತೆ ಹಚ್ಚಿ ಗರ್ಭ ಕಂಠ ಕ್ಯಾನ್ಸರ್ ಅನ್ನು ಗುಣಪಡಿಸಬಹುದು. ಉಲ್ಬಣಿಸಿದ ಬಳಿಕ ಚಿಕಿತ್ಸೆ ನೀಡಿ ರೋಗಿಯನ್ನು ಉಳಿಸುವುದು ಕಷ್ಟ. ಆದ್ದರಿಂದ ಸಮೀಪದ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಲಸಿಕೆ ಪಡೆದುಕೊಳ್ಳುವುದು ಉತ್ತಮ.
–ಡಾ.ಯೋಗೇಂದ್ರಕುಮಾರ್, ಮಿಮ್ಸ್‌ನ ಗರ್ಭಿಣಿ ಮತ್ತು ಪ್ರಸೂತಿ, ಸ್ತ್ರೀರೋಗ ತಜ್ಞ ವೈದ್ಯರು, ಮಂಡ್ಯ

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

12 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

12 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

12 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

13 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

13 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

13 hours ago