Andolana originals

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ

ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಎಚ್‌ಪಿವಿ ಲಸಿಕಾ ಕಾರ್ಯಕ್ರಮಕ್ಕೆ ನಿರೀಕ್ಷಿತ ಸ್ಪಂದನೆ ದೊರಕಿಲ್ಲ. ಸುಳ್ಳು ಸುದ್ದಿ ಹರಡುವಿಕೆ ಮತ್ತು ಜನ ಜಾಗೃತಿಯ ಕೊರತೆಯಿಂದಾಗಿ ಅಲ್ಪ ಹಿನ್ನಡೆ ಯಾಗಿದೆ. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಈ ಲಸಿಕೆ ಪರಿಣಾಮಕಾರಿಯಾಗಿದ್ದು, ೧೪ ರಿಂದ ೧೫ ವರ್ಷದೊಳಗಿನ ಬಾಲಕಿಯರು ಈ ಲಸಿಕೆಯ ಪ್ರಯೋಜನ ಪಡೆದುಕೊಳ್ಳ ಬೇಕೆಂದು ಆರೋಗ್ಯ ಇಲಾಖೆ ಅಽಕಾರಿಗಳು ಮನವಿ ಮಾಡಿದ್ದಾರೆ.

ಮಹಿಳೆಯರಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ನಿರೋಧಕ ಎಚ್‌ಪಿವಿ ಲಸಿಕೆ ನೀಡುವ ಅಭಿಯಾನವನ್ನು ಮಾ.೧೦ರಿಂದ ಜಿಲ್ಲೆಯಲ್ಲಿ ಆರಂಭಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೫,೨೭೬ ಮಂದಿ ೧೪ರಿಂದ ೧೫ ವರ್ಷದೊಳಗಿನ ಬಾಲಕಿಯರಿಗೆ ಈ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ಆದರೆ ಕೆಲವೆಡೆ ಪೋಷಕರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಈ ಮಹತ್ವದ ಅಭಿಯಾನ ನಿಧಾನಗತಿಯಲ್ಲಿ ಸಾಗಿದ್ದು, ಈವರೆಗೆ ಅಂದಾಜು ೬೦೦ ಮಂದಿಗೆ ಮಾತ್ರ ಲಸಿಕೆಗಳನ್ನು ನೀಡಲಾಗಿದೆ.

ಎಚ್‌ಪಿವಿ ಲಸಿಕೆ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿ ಪ್ರಮುಖ ಸಮಸ್ಯೆಯಾಗಿದ್ದು, ಲಸಿಕೆ ತೆಗೆದುಕೊಂಡರೆ ಬಂಜೆತನ ಬರುತ್ತದೆ ಎಂಬ ವದಂತಿಗಳು ಪೋಷಕರಲ್ಲಿ ಭಯ ಹುಟ್ಟಿಸುತ್ತಿವೆ. ಆದರೆ, ವೈಜ್ಞಾನಿಕ ಅಧ್ಯಯನಗಳು ಸ್ಪಷ್ಟವಾಗಿ ಹೇಳುವಂತೆ ಈ ಲಸಿಕೆ ಬಂಜೆತನಕ್ಕೆ ಕಾರಣವಾಗುವುದಿಲ್ಲ.

ಲಕ್ಷಾಂತರ ಜನರ ಮೇಲೆ ನಡೆಸಿದ ಅಧ್ಯಯನಗಳಲ್ಲಿ ಲಸಿಕೆ ಮತ್ತು ಸಂತಾನೋತ್ಪತ್ತಿ ನಡುವೆ ಯಾವುದೇ ಸಂಬಂಧ ಇಲ್ಲ. ಡಬ್ಲ್ಯು ಎಚ್‌ಒ ಸೇರಿದಂತೆ ಆರೋಗ್ಯ ಸಂಸ್ಥೆಗಳು ಈ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿವೆ. ಎಚ್‌ಪಿವಿ ವೈರಸ್‌ನಿಂದ ಉಂಟಾಗುವ ಗರ್ಭಾಶಯ ಕ್ಯಾನ್ಸರ್ ಚಿಕಿತ್ಸೆ ಸ್ವತಃ ಸಂತಾನೋ ತ್ಪತ್ತಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಈಗಲೇ ಲಸಿಕೆ ತೆಗೆದುಕೊಳ್ಳುವುದು ಭವಿಷ್ಯದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಮತ್ತು ಸಂತಾನೋತ್ಪತ್ತಿಗೆ ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.

ಹೀಗಿದ್ದೂ ಪೋಷಕರು , ಹೆಣ್ಣು ಮ್ಕಳಿಗೆ ಲಸಿಕೆ ಹಾಕಿಸಲು ಹಿಂದೇಟು ಹಾಕುತ್ತಿದ್ದಾರೆ. ಇದೀಗ ಶಾಲಾ ಪರೀಕ್ಷೆಗಳ ಸಮಯವಾಗಿರುವುದರಿಂದ, ವಿದ್ಯಾರ್ಥಿನಿಯರು ಹಾಗೂ ಪೋಷಕರು ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ. ಅಲ್ಲದೇ ಲಸಿಕೆಯಿಂದ ಜ್ವರದಂತಹ ಅಡ್ಡಪರಿಣಾಮಗಳಾಗಿ ಪರೀಕ್ಷೆಗೆ ಗೈರು ಹಾಜರಿಯಾಗಬೇಕಾಗುತ್ತದೆ, ಇದು ಪರೀಕ್ಷಾ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಕೆಲವು ಅಧ್ಯಾಪಕರೇ ಈಗ ಬೇಡ ಎಂಬ ಅಭಿಪ್ರಾಯ ಹೊಂದಿದ್ದಾರೆ ಎನ್ನಲಾಗಿದೆ. ಇದೂ ಕೂಡ ಅಭಿಯಾನ ಮಂದಗತಿಯಲ್ಲಿ ಸಾಗಲು ಕಾರಣವಾಗಿದೆ.

ಖಾಸಗಿ ದುಬಾರಿ ಲಸಿಕೆ..!:  ಸದ್ಯ ೧೪ ರಿಂದ ೧೫ ವರ್ಷದೊಳಗಿನ ಬಾಲಕಿಯರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದ್ದು, ೧೫ ವರ್ಷ ಮೇಲ್ಪಟ್ಟವರು ಖಾಸಗಿ ಸಂಸ್ಥೆಗಳಿಂದ ದುಬಾರಿ ಬೆಲೆ ನೀಡಿ ಲಸಿಕೆ ಹಾಕಿಸಿಕೊಳ್ಳಬೇಕಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಈ ಲಸಿಕೆಗೆ ಒಂದು ಡೋಸ್‌ಗೆ ೪ ಸಾವಿರ ರೂ.ಗಳಂತೆ ೨ ಡೋಸ್ ನೀಡಲಾಗುತ್ತಿದೆ. ಆದರೆ, ಆರೋಗ್ಯ ಇಲಾಖೆ ಪರಿಣಾಮಕಾರಿಯಾದ ಒಂದು ಡೋಸ್ ಅನ್ನು ಉಚಿತವಾಗಿ ನೀಡುತ್ತಿದೆ.

” ಜಿಲ್ಲೆಯಲ್ಲಿ ಲಸಿಕೆ ದಾಸ್ತಾನು ಸಾಕಷ್ಟಿದೆ. ಎಚ್‌ಪಿವಿ ಲಸಿಕೆಯ ಕುರಿತು ಅಪಪ್ರಚಾರ ನಡೆಸುತ್ತಿರುವುದರ ಹಿಂದೆ ಖಾಸಗಿ ಲಾಬಿ ಇರುವ ಸಾಧ್ಯತೆಯೂ ಇದೆ. ಆರಂಭದ ದಿನಗಳಾಗಿರುವುದರಿಂದ ಅಭಿಯಾನ ಕೊಂಚ ನಿಧಾನಗತಿಯಲ್ಲಿ ಸಾಗಿದೆ. ಕೋವಿಡ್ ಲಸಿಕೆಯಂತೆ ಮುಂದಿನ ದಿನಗಳಲ್ಲಿ ಸ್ವಯಂಪ್ರೇರಿತರಾಗಿ, ಜನರು ಮುಂದೆ ಬಂದು ಲಸಿಕೆ ಪಡೆಯುವ ಸಾಧ್ಯತೆ ಇದೆ. ಈ ಸಂಬಂಧ ಅರಿವು ಮೂಡಿಸಲಾಗುತ್ತಿದೆ.”

-ಡಾ.ಮಧುಸೂದನ್, ಆರ್‌ಸಿಎಚ್  ಅಧಿಕಾರಿ

ಏನಿದು ಎಚ್‌ಪಿವಿ ಲಸಿಕೆ?: 

೨೦೦ ಬಗೆಯ ಜನನಾಂಗದ ಸೋಂಕು ಉಂಟುಮಾಡುವ ೨೦ ಬಗೆಯ ಎಚ್‌ಪಿವಿ ವೈರಸ್‌ಗಳು ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವಾಗುತ್ತವೆ. ಈ ಪೈಕಿ ಎಚ್‌ಪಿವಿ ೧೬ ಮತ್ತು ೧೮ ಎಂಬ ವೈರಸ್ ಶೇ.೮೦ರಷ್ಟು ಕ್ಯಾನ್ಸರ್ ಕಾರಕವಾಗಿದ್ದು, ಇದರ ತಡೆಗೆ ಈ ಲಸಿಕೆ ಸಹಕಾರಿ. ಈ ಲಸಿಕೆ ನೀಡುವ ಕುರಿತು ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ವೈದ್ಯರ ಸಮ್ಮುಖದಲ್ಲಷ್ಟೇ ಲಸಿಕೆ ನೀಡಲಾಗುತ್ತಿದೆ. ಅಮೆರಿಕದ ಮಾರ್ಕ್ ಎಂಬ ಸಂಸ್ಥೆ ತಯಾರಿಸಿದ ಗಾರ್ಡಸಿಲ್ -೪ ಎಂಬ ಲಸಿಕೆಯನ್ನು ಆರೋಗ್ಯ ಇಲಾಖೆಯಿಂದ ಉಚಿತವಾಗಿ ನೀಡಲಾಗುತ್ತಿದೆ

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

18 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

19 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago