Andolana originals

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತ ಸಮುದಾಯ ಹೈನುಗಾರಿಕೆಯತ್ತಲೂ ಒಲವು ತೋರಿರುವ ಪರಿಣಾಮ ವರ್ಷದಿಂದ ವರ್ಷಕ್ಕೆ ಹಾಲು ಸಂಗ್ರಹಣೆಯಲ್ಲಿ ಏರಿಕೆಯಾಗುತ್ತಿದೆ.

ಅದರಲ್ಲೂ ಬೇಸಿಗೆ ಕಾಲಕ್ಕಿಂತ ಸುಗ್ಗಿ ಕಾಲದಲ್ಲಿ ಹಾಲು ಸಂಗ್ರ ಹಣೆಯು ನಿರೀಕ್ಷೆಗೂ ಮೀರಿ ಹೆಚ್ಚಾಗುತ್ತಿರುವುದರಿಂದ ಮೈಮುಲ್‌ನ ಆರ್ಥಿಕ ವಹಿವಾಟಿನ ಮೇಲೆ ದೊಡ್ಡ ಪರಿಣಾಮ ಬೀರುವಂತಾಗಿದೆ. ರೈತರು ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ನಷ್ಟ ಅನುಭವಿಸುತ್ತಿದ್ದಾರೆ.

ಅದರಲ್ಲೂ ಬರಗಾಲ ಮತ್ತು ಪ್ರವಾಹ ಬಂದಾಗ ಹಾಕಿದ್ದ ಬಂಡವಾಳವೂ ಕೈಸೇರದೆ ಸಂಕಷ್ಟಕ್ಕೆ ಸಿಲುಕುತ್ತಾರೆ. ಆದರೆ, ಕನಿಷ್ಠ ೨ಕ್ಕಿಂತ ಹೆಚ್ಚು ಎಮ್ಮೆ, ಇಲಾತಿ ಹಸುಗಳನ್ನು ಸಾಕಿಕೊಂಡು ಹೈನುಗಾರಿಕೆ ನಡೆಸುತ್ತಿರುವ ಹೈನುಗಾರರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ವ್ಯವಸಾಯದ ಜತೆಗೆ ರೈತರು ಹೈನೋದ್ಯಮದ ಕಡೆಗೆ ವಾಲಿದ್ದರಿಂದ ಕಳೆದ ಐದು ವರ್ಷಗಳಲ್ಲಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಹಾಲು ಸಂಗ್ರಹಣೆಯ ಪ್ರಮಾಣದಲ್ಲಿ ದೊಡ್ಡ ಏರಿಕೆ ಕಂಡು ಬಂದಿರುವುದು ಗಮನಾರ್ಹವಾಗಿದೆ. ವರ್ಷದಿಂದ ವರ್ಷಕ್ಕೆ ಏರಿಕೆ: ವರ್ಷದಿಂದ ವರ್ಷಕ್ಕೆ ಹಾಲಿನ ಸಂಗ್ರಹಣೆ ಜಾಸ್ತಿ ಯಾಗುತ್ತಿರುವುದು ವಿಶೇಷವಾಗಿದೆ. ೨೦೨೦-೨೧ನೇ ಸಾಲಿನಿಂದ ೨೦೨೪-೨೫ರ ಅವಧಿಯಲ್ಲಿ ಹಾಲಿನ ಸಂಗ್ರಹಣೆ ಸಾಕಷ್ಟು ಜಾಸ್ತಿಯಾಗಿದೆ.

ಹಾಲು ಉತ್ಪಾದಕ ಸದಸ್ಯರ ಸಂಖ್ಯೆಯು ಏರಿಕೆಯಾಗಿದೆ. ದಿನವಹಿ, ಹಾಲಿನ ಸುಗ್ಗಿ ಹಾಗೂ ಬೇಸಿಗೆ ಅವಽಯಲ್ಲೂ ಗಣನೀಯವಾಗಿ ಏರಿಕೆ ಕಂಡಿದೆ. ಅದಕ್ಕೆ ತಕ್ಕಂತೆ ಮಾರಾಟ ಪ್ರಮಾಣ ಜಾಸ್ತಿಯಾಗಬೇಕಿದ್ದು, ಶೇ. ೫ರಷ್ಟು ಮಾತ್ರ ಚೇತರಿಕೆಯಿದೆ. ೨೦೨೦-೨೧ರಲ್ಲಿ ೨,೩೫,೧೫೧ ಲೀ, ೨೦೨೧-೨೨ರಲ್ಲಿ ೨,೪೮,೪೦೬ ಲೀ, ೨೦೨೨-೨೩ರಲ್ಲಿ ೨,೭೨,೮೮೬ ಲೀ, ೨೦೨೩-೨೪ರಲ್ಲಿ ೨,೯೫,೧೦೫ ಲೀ, ೨೦೨೪-೨೫ರಲ್ಲಿ ಇದುವರೆಗೆ ಸರಾಸರಿ ೩,೦೭,೯೪೪ ಲೀಟರ್ ಹಾಲು ಮಾರಾಟವಾಗಿದೆ. ನಂತರದಲ್ಲಿ ಮೊಸರು, ತುಪ್ಪ, ಲಸ್ಸಿ, ಮಸಾಲೆ ಮಜ್ಜಿಗೆ ಮಾರಾಟವಾಗಿದೆ. ೨೦೨೪ರಲ್ಲಿ ೮. ೪೭ ಲಕ್ಷ ಲೀಟರ್ ಸಂಗ್ರಹವಾದರೆ ಹಾಲು ಸೇರಿದಂತೆ ಹಾಲಿನ ಉತ್ಪನ್ನಗಳ ಮಾರಾಟ ೩. ೫೦ ಲಕ್ಷ ಲೀಟರ್ ಆಗಿದೆ. ಉಳಿದಂತೆ ನಾಲ್ಕು ಲಕ್ಷ ಲೀಟರ್ ಹಾಲು ಉಳಿಯುತ್ತಿರುವುದರಿಂದ ಮೈಮುಲ್ ಆರ್ಥಿಕ ವಹಿವಾಟಿನ ಮೇಲೆ ಪರಿಣಾಮ ಬೀರಲು ಕಾರಣವಾಗಿದೆ.

೧,೨೪೮ ಅಧಿಕೃತ ಮಾರಾಟಗಾರರು
೨೧೦ ನಂದಿನಿ ಪಾರ್ಲರ್‌ಗಳು
೩,೧೧,೬೩೩ ಲೀ. ಹಾಲು ಮಾರಾಟ
೧,೨೦೫ ಹಾಲು ಉತ್ಪಾದಕರ ಸಹಕಾರ ಸಂಘಗಳು
೨,೨೩,೦೯೦ ಹಾಲು ಉತ್ಪಾದಕ ಸದಸ್ಯರು
೧,೦೫,೬೧೭ ಹಾಲು ಹಾಕುತ್ತಿರುವ ಸದಸ್ಯರು

 

ಚಾಕೋಲೆಟ್ ತಯಾರಿಕೆಗೆ ಯೋಜನಾ ವರದಿ ಮೈಮುಲ್ ಉತ್ಪನ್ನಗಳ ಮಾರಾಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶೀಘ್ರ ಚಾಕೋಲೆಟ್, ಪನ್ನೀರನ್ನೂ ಸಹ ತಯಾರು ಮಾಡುವ ಯೋಜನೆ ಬಗ್ಗೆ ಚಿಂತನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಡಿಪಿಆರ್ (ಸಮಗ್ರ ಯೋಜನಾ ವರದಿ ) ರೂಪಿಸಿ ಸರ್ಕಾರಕ್ಕೆ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಮಾರಾಟ ಮಾಡಿ ಉಳಿದ ಹಾಲು ಉಪ ಉತ್ಪನ್ನಗಳು, ಪೌಡರ್ ಮಾಡಲು ಬಳಕೆಯಾಗುತ್ತಿದೆ. ಆದರೆ, ಗ್ರಾಹಕರ ಅಭಿರುಚಿಗೆ ತಕ್ಕಂತೆ ಮತ್ತಷ್ಟು ಉತ್ಪನ್ನಗಳನ್ನು ಉತ್ಪಾದಿಸಿ ಮಾರುಕಟ್ಟೆಗೆ ತರಲು ಯೋಜನೆ ರೂಪಿ ಸಲಾಗಿದೆ. ಶೀಘ್ರದಲ್ಲೇ ರಾಜ್ಯಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಮೈಮುಲ್ ಅಧ್ಯಕ್ಷ ಆರ್. ಚೆಲುವರಾಜು ಹೇಳಿದರು

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

1 min ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

5 mins ago

ಜೂಜಾಟ, ಮದ್ಯ ಅಕ್ರಮ ಮಾರಾಟಕ್ಕೆ ಲಕ್ಷ  ರೂ. ದಂಡ!

ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಯುವಕರು, ವಯಸ್ಕರು ಮದ್ಯ ವ್ಯಸನ ಹಾಗೂ ಜೂಜಾಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚಾಗುತ್ತಿದ್ದು ಹಾಗೂ ಅಶಾಂತಿಗೆ…

14 mins ago

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

7 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

11 hours ago