Andolana originals

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ.

ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು, ಐಏಈಖಿಅ ಸಂಸ್ಥೆಯ ಸಂಸ್ಥಾಪಕರಾದ ಡಾ.ಬಿ.ಎಸ್.ಅಜಯ್ ಕುಮಾರ್ ಅವರು ಎಂಬಿಬಿಎಸ್ ವ್ಯಾಸಂಗ ಮುಗಿಸಿ ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದಾಗ ಭಾರತದಲ್ಲಿ ಕ್ಯಾನ್ಸರ್ ರೋಗಕ್ಕೆ ಗುಣ ಮಟ್ಟದ ಆಸ್ಪತ್ರೆಗಳು ಇಲ್ಲದಿರುವ ಬಗ್ಗೆ ಮನಗಂಡು ಕ್ಯಾನ್ಸರ್ ಆಸ್ಪತ್ರೆಯನ್ನು ತೆರೆಯಬೇಕೆಂದು ನಿರ್ಧರಿಸಿ ಮೈಸೂರಿನಲ್ಲಿ ಭಾರತ್ ಕ್ಯಾನ್ಸರ್ ಆಸ್ಪತ್ರೆಯನ್ನು ಪ್ರಾರಂಭಿಸಿದರು.

ಗರ್ಭಕೋಶ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯಲು ಹೆಚ್ಚಿನ ಮಹಿಳೆಯರು ದೂರದ ಗ್ರಾಮಗಳಿಂದ ಈ ಆಸ್ಪತ್ರೆಗೆ ಬರುತ್ತಿರುವುದನ್ನು ಕಂಡು ಹಳ್ಳಿಗಳಿಗೆ ಭೇಟಿ ನೀಡಿ ಮಹಿಳೆಯರಿಗೆ ಗರ್ಭಕೋಶ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾರಂಭಿಸಿದರು. ರೋಟರಿ ಸಂಸ್ಥೆ ಹಾಗೂ ವಿಶ್ವ ಬ್ಯಾಂಕ್ ಕೂಡ ಇದಕ್ಕೆ ಸಹಕಾರ ನೀಡಿದವು. ಅಮೆರಿಕದಿಂದ ಮೂರು ತಿಂಗಳಿಗೊಮ್ಮೆ ಭಾರತಕ್ಕೆ ಬಂದರೂ ಹೆಚ್ಚಿನ ಸಮಯವನ್ನು ಹಳ್ಳಿಗಳಲ್ಲೇ ಕಳೆಯುತ್ತಿದ್ದರು. ಜನರ ಜೊತೆ ಒಡನಾಟ ಹೆಚ್ಚಾದಂತೆ ಜನರ ಅವಶ್ಯಕತೆ ಬಗ್ಗೆ ತಿಳಿದುಕೊಂಡರು. ಜೊತೆಗೆ ಮಹಮ್ಮದ್ ಯೂನಸ್ ಅವರ ಮೈಕ್ರೋಫಿನೆನ್ಸ್ ಬಗ್ಗೆ ಅಧ್ಯಯನ ಮಾಡಿ ಜನರನ್ನು ಆರ್ಥಿಕವಾಗಿ ಸದೃಢ ಮಾಡಿದರೆ ಆ ಕುಟುಂಬವು ಆರೋಗ್ಯ ಮತ್ತು ವಿದ್ಯಾಭ್ಯಾಸ ಎಲ್ಲದರಲ್ಲೂ ಉತ್ತಮವಾಗಿರುತ್ತದೆ ಎಂದು ಮನಗಂಡು ೧೯೯೧ರಲ್ಲಿ ಅಂತರಾಷ್ಟ್ರೀಯ ಮಾನವ ಅಭಿವೃದ್ಧಿ ಮತ್ತು ಏಳಿಗೆ ಸಂಸ್ಥೆಯನ್ನು ಪ್ರಾರಂಭಿಸಿ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರಿನಲ್ಲಿ ತನ್ನ ಕಾರ್ಯ ಕಚೇರಿಯನ್ನು ತೆರೆದು ಗುಂಡ್ಲುಪೇಟೆ ತಾಲ್ಲೂಕಿನಾದ್ಯಂತ ಕೆಲಸ ಪ್ರಾರಂಭಿಸುತ್ತಾರೆ.

ಮಹಿಳಾ ಸಬಲೀಕರಣ:  ಗ್ರಾಮೀಣ ಭಾಗದಲ್ಲಿ ಬಡತನ ನಿರುದ್ಯೋಗ ಹಣ ಕಾಸು ಸೌಲಭ್ಯಗಳ ಕೊರತೆಯನ್ನು ಕಣ್ಣಾರೆ ಕಂಡಿದ್ದ ಇವರಿಗೆ ಹಣಕಾಸು ಸೌಲಭ್ಯಗಳನ್ನು ಒದಗಿಸಿದರೆ ಜನರು ಆ ಹಣವನ್ನು ಕೃಷಿಗಳಲ್ಲಿ ಸಣ್ಣ ವ್ಯಾಪಾರ ಮಾಡುವುದಕ್ಕೆ ಹೈನುಗಾರಿಕೆಗೆ ಮತ್ತು ಮಕ್ಕಳ ವಿದ್ಯಾಬ್ಯಾಸಕ್ಕೆ ಬಳಕೆ ಮಾಡುತ್ತಾರೆ ಎಂದು, ಇದರಿಂದ ಗ್ರಾಮೀಣ ಭಾಗದ ಜನರ ಜೀವನ ಮಟ್ಟ ಸುಧಾರಿಸುತ್ತದೆ ಎಂದು ಮನಗಂಡು ಗುಂಡ್ಲುಪೇಟೆ ತಾಲ್ಲೂಕಿನಾದ್ಯಂತ ಪ್ರತಿ ಗ್ರಾಮಗಳಲ್ಲೂ ಮಹಿಳಾ ಸಂಘಗಳನ್ನು ರಚಿಸಿ ಆ ಸಂಘಗಳ ಮೂಲಕ ಮಹಿಳೆಯರಿಗೆ ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ನಬಾರ್ಡ್ ಬ್ಯಾಂಕುಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಹಣಕಾಸು ವ್ಯವಸ್ಥೆಯನ್ನು ಒದಗಿಸಿ ಕೊಡುತ್ತಿದ್ದಾರೆ.

ಸಂಘಗಳಿಗೆ ಸಂಸ್ಥೆ ಯಿಂದ ಬಡ್ಡಿ ರಹಿತ ಸಾಲವನ್ನು ನೀಡುವ ಮೂಲಕ ಸಂಘಗಳ ಬೆಳವಣಿಗೆಗೆ ಅನುಕೂಲ ಮಾಡಿಕೊಡುತ್ತಿದ್ದಾರೆ. ಸಂಘದ ಮಹಿಳೆಯರಿಗೆ ಹಣಕಾಸು ನಿರ್ವಹಣೆಯ ತರಬೇತಿ, ಸ್ವಂತ ಉದ್ಯಮ ಮಾಡುವವರಿಗೆ ತರಬೇತಿ, ಸರ್ಕಾರಿ ಸೌಲಭ್ಯಗಳ ಬಗ್ಗೆ ಮಾರ್ಗದರ್ಶನ, ಮಹಿಳೆಯರಿಗಾಗಿ ಆರೋಗ್ಯ ಕಾರ್ಯಕ್ರಮ ಮಾಡಿದ್ದಾರೆ. ಹಾಗಾಗಿಯೇ ಮಹಿಳಾ ಸಂಘಗಳೆಲ್ಲ ಸೇರಿ ಒಕ್ಕೂಟಗಳನ್ನು ರಚಿಸಿ ಮಹಿಳೆಯರಿಗೆ ಯಾವುದೇ ಸಮಸ್ಯೆಯಾದಲ್ಲಿ ಒಕ್ಕೂಟಗಳ ಮೂಲಕ ಅವರೇ ಪರಿಹರಿಸಿಕೊಳ್ಳುತ್ತಿರುವುದು ಈ ಯೋಜನೆಯ ಯಶಸ್ಸಿಗೆ ಉದಾಹರಣೆಯಾಗಿದೆ.

ಕೌಶಲ ತರಬೇತಿ: ಗುಂಡ್ಲುಪೇಟೆ ತಾಲ್ಲೂಕಿನ ನಿರುದ್ಯೋಗಿ ಮಹಿಳೆಯರು ಯುವಕ, ಯುವತಿಯರು ಯಾವುದೇ ರೀತಿಯಕೌಶಲ ತರಬೇತಿ ಪಡೆಯಲು ಮೈಸೂರು ಅಥವಾ ಚಾಮರಾಜನಗರಕ್ಕೆ ಹೋಗಬೇಕಾಗಿತ್ತು. ಇದನ್ನು ಮನಗಂಡು ಮಹಿಳೆಯರಿಗಾಗಿ ಬೇಗೂರಿನಲ್ಲಿ ಟೈಲರಿಂಗ್ ತರಬೇತಿ ಕೇಂದ್ರವನ್ನು ಸ್ಥಾಪಿಸಿದರು. ಇಲ್ಲಿ ಬೇಡಿಕೆ ಹೆಚ್ಚಾದಂತೆ ಗುಂಡ್ಲುಪೇಟೆ ಮತ್ತು ಹೋಬಳಿ ಮಟ್ಟದಲ್ಲೂ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿ ತರಬೇತಿ ನೀಡಲಾಗುತ್ತಿದೆ. ಇಲ್ಲಿ ತರಬೇತಿ ಪಡೆದವರು ಸ್ವಂತ ಉದ್ಯೋಗ ರೂಪಿಸಿಕೊಂಡಿದ್ದಾರೆ. ಬಹಳಷ್ಟು ಜನ ಕಾರ್ಖಾನೆಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ. ತಾಲ್ಲೂಕಿನ ಯುವಜನತೆಗಾಗಿ ಕಂಪ್ಯೂಟರ್ ಮತ್ತು ಜನರಲ್ ಡ್ಯೂಟಿ ಅಸಿಸ್ಟೆಂಟ್ ತರಬೇತಿ ನೀಡುತ್ತಿದ್ದು, ಇಲ್ಲಿ ತರಬೇತಿ ಪಡೆದವರು ಖಾಸಗಿ ಕಂಪೆನಿಗಳು ಮತ್ತು ಆಸ್ಪತ್ರೆಗಳಲ್ಲಿ ಉದ್ಯೋಗ ಗಳಿಸಿದ್ದಾರೆ. ಇಲ್ಲಿಯವರೆಗೂ ಸುಮಾರು ೫,೦೦೦ಕ್ಕೂ ಹೆಚ್ಚು ಮಹಿಳೆಯರು, ಯುವಕ-ಯುವತಿಯರು ತರಬೇತಿ ಪಡೆದು ಜೀವನ ರೂಪಿಸಿಕೊಂಡಿದ್ದಾರೆ.

ಮಾದರಿ ಗ್ರಾಮ ಯೋಜನೆ: ಈ ಯೋಜನೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಅತಿ ಹಿಂದುಳಿದ ಗ್ರಾಮಗಳನ್ನು ಆಯ್ಕೆ ಮಾಡಿ ಅಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತದೆ. ಅದರಂತೆ ಈವರೆಗೆ ೪೦೦ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿ ಬಯಲು ಶೌಚಮುಕ್ತ ಗ್ರಾಮಗಳನ್ನಾಗಿ ಮಾಡಿದ್ದಾರೆ. ಮಹಿಳೆಯರು, ಯುವಜನತೆಗೆ ಕೌಶಲ ತರಬೇತಿ, ರೈತರಿಗೆ ಕೃಷಿಗೆ ಸಂಬಂಧಪಟ್ಟಂತೆ ತರಬೇತಿ ನೀಡುವುದು ಮುಂತಾದ ಕಾರ್ಯಕ್ರಮಗಳ ಮೂಲಕ ಹತ್ತಕ್ಕೂ ಹೆಚ್ಚು ಗ್ರಾಮಗಳನ್ನು ಮಾದರಿ ಗ್ರಾಮಗಳಾಗಿ ಬದಲಾಯಿಸಿದ್ದಾರೆ.

ಅಂತರ್ ಧ್ವನಿ: 

ಈ ವೇದಿಕೆಯು ಹತ್ತು ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿದ್ದು, ಮಹಿಳಾ ನಾಯಕತ್ವ, ದೇಶದ ಬೆಳವಣಿಗೆಯಲ್ಲಿ ಯುವ ಪೀಳಿಗೆ ಪಾತ್ರ, ಆರ್ಥಿಕ ಬೆಳವಣಿಗೆಗೆ ಪರಿಹಾರಗಳು ಮುಂತಾದ ನೂರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಿ ಜನರಿಗೆ ಅರಿವು ಮೂಡಿಸಲಾಗಿದೆ.

ವಿನಾಯಕ ಜ್ಞಾನ ವಿದ್ಯಾಶಾಲೆ, ಮುಳ್ಳೂರು: ಡಾ.ಬಿ.ಎಸ್.ಅಜಯ್ ಕುಮಾರ್ ಮತ್ತು ಅವರ ತಂಡವು ಮೈಸೂರು ಸಮೀಪದ ಮುಳ್ಳೂರು ಗ್ರಾಮದಲ್ಲಿ ಕ್ಯಾನ್ಸರ್ ತಪಾಸಣೆ ಶಿಬಿರ ನಡೆಸಿದ ಸಂದರ್ಭದಲ್ಲಿ ಊರಿನ ಜನರ ಜೊತೆ ಚರ್ಚಿಸುತ್ತಿದ್ದಾಗ ಗ್ರಾಮಸ್ಥರು ತಮ್ಮ ಊರಿಗೆ ಒಂದು ಶಾಲೆಯ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿ ಗ್ರಾಮದಲ್ಲಿ ವಿನಾಯಕ ಜ್ಞಾನ ವಿದ್ಯಾಶಾಲೆಯನ್ನು ಪ್ರಾರಂಭಿಸಿದ್ದಾರೆ. ಇಲ್ಲಿ ೪೦೦ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ವ್ಯಾಸಂಗ ಮಾಡಿದ ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿರುವುದು ಇಲ್ಲಿನ ಗುಣ ಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ.

ಆದರ್ಶ ಅಕಾಡೆಮಿ: ಮೈಸೂರು ಸಮೀಪದ ಕೆಆರ್‌ಎಸ್ ಗ್ರಾಮದಲ್ಲಿರುವ ಈ ಶಾಲೆಯಲ್ಲಿ ಎಲ್‌ಕೆಜಿಯಿಂದಎಂಟನೇ ತರಗತಿಯವರೆಗೆ ಗ್ರಾಮೀಣ ಭಾಗದ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರತಿ ವರ್ಷವೂ ೪೯ ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ

 

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago