Andolana originals

ಮ. ಬೆಟ್ಟದಲ್ಲಿ ಹೆಚ್ಚುತ್ತಿರುವ ಅಕ್ರಮ ಚಟುವಟಿಕೆಗಳು

ಅಕ್ರಮ ಮದ್ಯ ಮಾರಾಟ, ಇಸ್ಪೀಟ್‌ ದಂಧೆಗೆ ಕಡಿವಾಣ ಹಾಕಲು ಸಾರ್ವಜನಿಕರ ಆಗ್ರಹ

ಮಹಾದೇಶ್ ಎಂ. ಗೌಡ

ಹನೂರು: ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಭಕ್ತಾದಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಮಹದೇಶ್ವರ ಬೆಟ್ಟಕ್ಕೆ ಕ್ಷೇತ್ರಕ್ಕೆ ಇತ್ತೀಚಿನ ದಿನಗಳಲ್ಲಿ ಜಾತ್ರಾ ಮಹೋತ್ಸವ, ಹಬ್ಬ ಹರಿದಿನಗಳು, ರಜಾ ದಿನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿದ್ದಾರೆ. ಇಂತಹ ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೂ ಕಡಿವಾಣ ಹಾಕುತ್ತಿಲ್ಲ ಎನ್ನುವುದು ಹಲವರ ಆರೋಪ.

ಮ. ಬೆಟ್ಟದಲ್ಲಿ ಮದ್ಯಪಾನ, ಮಾಂಸಾಹಾರ, ಧೂಮಪಾನ ಸೇರಿದಂತೆ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ಬರುವ ಎಲ್ಲ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ. ಆದರೂ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಮ. ಬೆಟ್ಟದ ಪುದೂರು ಗ್ರಾಮದ ನಿವಾಸಿ ಮಣಿಕಂಠ ಅಲಿಯಾಸ್ ಮಣಿ ಎಂಬವರ ಮೇಲೆ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಮ. ಬೆಟ್ಟ ಪೊಲೀಸ್ ಠಾಣೆಯಲ್ಲಿ ೮ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇವರನ್ನು ಗಡಿಪಾರು ಮಾಡುವಂತೆ ಪೊಲೀಸ್ ಇಲಾಖೆಯವರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಆದರೆ ರಾಜಕೀಯ ಒತ್ತಡದಿಂದ ಗಡೀಪಾರು ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಪೊಲೀಸರಿಗೆ ಮಾಹಿತಿ ಇದ್ದರೂ ಕರ್ತವ್ಯ ಲೋಪ ಎಸಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇಬ್ಬರು ಸಿಬ್ಬಂದಿಯನ್ನು ಅಮಾನತ್ತು ಮಾಡಿದ್ದರು. ಆದರೂ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ.

ಮ. ಬೆಟ್ಟದ ಖಾಸಗಿ ಲಾಡ್ಜ್‌ನಲ್ಲಿ ಕೆಲವರು ಭಾನುವಾರ ರಾತ್ರಿ ಇಸ್ಪೀಟ್ ದಂಧೆಗೆ ಕುಮ್ಮಕ್ಕು ನೀಡಿ ಒಂದು ದಿನಕ್ಕೆ ೮ ಸಾವಿರ ರೂ. ಬಾಡಿಗೆ ಪಡೆದು ಅಕ್ರಮ ಜೂಜಾಟಕ್ಕೆ ಸಾಥ್ ನೀಡಿದ್ದಾರೆ ಎಂಬ ಆರೋಪವೂ ಇದೆ. ಈ ಸಂಬಂಧ ಜಿಲ್ಲಾ ಅಪರಾಧ ವಿಭಾಗದ ತಂಡ ಅಕ್ರಮ ಜೂಜಾಟದಲ್ಲಿ ತೊಡಗಿದ್ದ ೧೪ ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು, ಪಣಕ್ಕಿಟ್ಟಿದ್ದ ೩. ೦೯ ಲಕ್ಷ ರೂ. , ೧೪ ಮೊಬೈಲ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದೆ.

೩ ದಿನಗಳ ಹಿಂದೆ ಅಪ್ರಾಪ್ತೆಯೊಬ್ಬಳನ್ನು ಮ. ಬೆಟ್ಟದ ಲಾಡ್ಜ್ ಒಂದಕ್ಕೆ ಕರೆತಂದಿದ್ದ ಜಿಲ್ಲಾ ವ್ಯಾಪ್ತಿಯ ಗ್ರಾಮದ ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲು ಮಾಡಿದ್ದಾರೆ. ಒಟ್ಟಾರೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದಡಿ ಒಂದು ವಾರದಲ್ಲಿ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಇನ್ನು ತೆರೆಮರೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಪತ್ತೆ ಹಚ್ಚುವುದು ಯಾವಾಗ? ಎಂದು ಪ್ರಜ್ಞಾವಂತ ನಾಗರಿಕರು ಪ್ರಶ್ನೆ ಮಾಡಿದ್ದಾರೆ.

ಕೌದಳ್ಳಿ ಗ್ರಾಮದ ಕೆಲವರು ಮಹದೇಶ್ವರ ಬೆಟ್ಟಕ್ಕೆ ಬಂದು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಇವರುಗಳ ಮೇಲೆ ನಿಗಾವಹಿಸಿದರೆ ಅಕ್ರಮ ಮದ್ಯ ಸರಬರಾಜು ತಡೆಗಟ್ಟಬಹುದಾಗಿದೆ ಎನ್ನುವುದು ಕೆಲವರ ಸಲಹೆಯಾಗಿದೆ.

ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಲಾಗಿದೆ. ಈಗಾಗಲೇ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಪ್ರಕರಣ ದಾಖಲಿಸುತ್ತಿದ್ದು, ಶೀಘ್ರದಲ್ಲಿಯೇ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು. -ಡಾ. ಬಿ. ಟಿ. ಕವಿತಾ, ಎಸ್‌ಪಿ, ಚಾ. ನಗರ

ಮ. ಬೆಟ್ಟದಲ್ಲಿ ಮದ್ಯ ಅಕ್ರಮ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಹಲವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಮತ್ತೆ ತಮ್ಮ ಹಳೆ ಚಾಳಿ ಮುಂದುವರಿಸಿದ್ದಾರೆ. ಕ್ಷೇತ್ರದಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ನಡೆಯುತ್ತಿರುವುದರಿಂದ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಶಾಶ್ವತವಾಗಿ ಮದ್ಯ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಬೇಕು. -ಚಂದ್ರು, ಗ್ರಾಪಂ ಸದಸ್ಯ, ಮ. ಬೆಟ್ಟ.

ಆಂದೋಲನ ಡೆಸ್ಕ್

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

45 mins ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

47 mins ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

59 mins ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

1 hour ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

1 hour ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

1 hour ago