ಸೋಮವಾರಪೇಟೆ: ತಾಲ್ಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ಸುತ್ತಮುತ್ತ ವ್ಯಾಪಕವಾಗಿ ನಿಯಮಬಾಹಿರವಾಗಿ ಗಣಿಗಾರಿಕೆ ನಡೆಯುತ್ತಿದೆ ಎಂಬ ಗ್ರಾಮಸ್ಥರ ದೂರಿನ ಮೇರೆಗೆ ಹೊಸಳ್ಳಿ ಗ್ರಾಮದಲ್ಲಿ ತಹಸಿಲ್ದಾರ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಹಿರಿಯ ಅಽಕಾರಿಗಳು ಮತ್ತು ಗ್ರಾಮಸ್ಥರ ಸಭೆ ಮಂಗಳವಾರ ನಡೆಯಿತು.
ಹೊಸಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಸುಮಾರು ೧೭ ಕಲ್ಲು ಕ್ವಾರಿಗಳಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಈ ವಿಚಾರವಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಗ್ರಾಮದ ಪ್ರಮುಖರಾದ ಭೋಜೇಗೌಡ, ಸಂಪತ್, ತಿಮ್ಮಯ್ಯ, ಸಚಿನ್, ಅನಿಲ್ ದೂರಿದರು.
ಗ್ರಾಮೀಣ ರಸ್ತೆಯಲ್ಲಿ ಭಾರದ ಮಿತಿ ಇಲ್ಲದೆ ಹತ್ತು ಚಕ್ರಗಳ ಟಿಪ್ಪರ್‌ಗಳು ಓಡಾಡುತ್ತಿವೆ. ಸಂಜೆ ಹೊತ್ತಿನಲ್ಲಿ ಕಲ್ಲು ಕ್ವಾರಿಗಳಲ್ಲಿ ಬ್ಲಾಸ್ಟಿಂಗ್ ನಡೆಯುತ್ತಿದೆ. ಅಕ್ಕಪಕ್ಕದ ಮನೆಗಳು ಬಿರುಕು ಬಿಟ್ಟಿವೆ. ಕ್ರಷರ್‌ಗಳಿಂದ ದೂಳು ಬರುತ್ತಿದ್ದು, ವ್ಯವಸಾಯ ಮಾಡಲು ಆಗುತ್ತಿಲ್ಲ. ಬಹುತೇಕ ಜನರು ಶ್ವಾಸಕೋಶ ಸಂಬಂಽ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಆರೋಪಿಸಿದರು. ಸರ್ಕಾರದ ವತಿಯಿಂದ ಗ್ರಾಮದಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ ನಡೆಸಬೇಕೆಂದು ಆಗ್ರಹಿಸಿದರು.
ನಿಯಮಬಾಹಿರ ಕಲ್ಲು ಗಣಿಗಾರಿಕೆಯನ್ನು ನಿಲ್ಲಿಸಬೇಕು. ತಪ್ಪಿದಲ್ಲಿ ಗ್ರಾಮಸ್ಥರಿಗೆ ದಯಾಮರಣಕ್ಕೆ ಅನು ಮತಿ ಕೊಡಿಸಬೇಕು ಎಂದು ತಹಸಿಲ್ದಾರ್ ಅವರನ್ನು ಆಗ್ರಹಿಸಿದರು. ಗ್ರಾಮಕ್ಕೆ ಜೇನುಕಲ್ಲು ಬೆಟ್ಟ ಮೀಸಲು ಅರಣ್ಯ ಸಮೀಪದಲ್ಲಿದೆ. ಈ ಅರಣ್ಯಕ್ಕೆ ಹೊಂದಿಕೊಂಡ ಜಾಗದಲ್ಲಿ ಕಲ್ಲು ಕ್ವಾರಿ ಕೆಲಸ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಗ್ರಾಮಸ್ಥರ ಕೋರಿಕೆಯಂತೆ ಅಧಿಕಾರಿಗಳು ಎಲ್ಲಾ ಕಲ್ಲು ಕ್ವಾರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಯಮ ಪಾಲಿಸದ ಕಲ್ಲುಕ್ವಾರಿಗಳನ್ನು ಸ್ಥಗಿತಗೊಳಿಸಲು ಕ್ರಮಕೈಗೊಳ್ಳುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಎಚ್.ಡಿ.ರೋಜ ಅವರಿಗೆ ತಹಸಿಲ್ದಾರ್ ಕೃಷ್ಣಮೂರ್ತಿ ಸೂಚಿಸಿದರು. ಕಂದಾಯ ಮತ್ತು ಅರಣ್ಯ ಇಲಾಖೆ ವತಿಯಿಂದ ಜಂಟಿ ಸರ್ವೇ ನಡೆಸಿ ಲೋಪದೋಷ ಕಂಡು ಬಂದಲ್ಲಿ ಕಲ್ಲುಕ್ವಾರಿಗಳನ್ನು ಮುಟ್ಟುಗೊಲು ಹಾಕಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.
ಸಭೆಯಲ್ಲಿ ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ವಿನೋದ್. ಪಿಎಸ್‌ಐ ಮುದ್ದು ಮಾದೇವ. ಲೋಕೋಪಯೋಗಿ ಇಲಾಖೆಯ ಎಇಇ ಕುಮಾರ್, ಆರ್‌ಟಿಒ, ಸರ್ವೇ, ಅರಣ್ಯ ಇಲಾಖೆಯ ಅಽಕಾರಿಗಳು ಭಾಗವಹಿಸಿದ್ದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…