Andolana originals

ಕೊಡಗಿನಲ್ಲಿ ತಲೆ ಎತ್ತುತ್ತಿರುವ ಅಕ್ರಮ ವಿಲ್ಲಾಗಳು: ಆರೋಪ

ಕಾಂಗೀರ ಬೋಪಣ್ಣ

ಸೂಕ್ತ ತನಿಖೆಗೆ ಪರಿಸರವಾದಿಗಳ ಒತ್ತಾಯ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ವಿರಾಜಪೇಟೆ: ಅಚ್ಚ ಹಸಿರಿನ ಸುಂದರ ಪರಿಸರ ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಅರಣ್ಯವನ್ನು ನಾಶ ಮಾಡಿ ಎಗ್ಗಿಲ್ಲದೆ ರೆಸಾರ್ಟ್, ವಿಲ್ಲಾಗಳ ನಿರ್ಮಾಣ ಮಾಡಲಾಗುತ್ತಿದ್ದು, ಕೊಡಗು-ಕೇರಳ ಗಡಿಭಾಗದಲ್ಲಿ ನಿಯಮ ಉಲ್ಲಂಸಿ ಸುಮಾರು ೩೦ ಎಕರೆ ಪ್ರದೇಶದಲ್ಲಿ ವಿಲ್ಲಾ ನಿರ್ಮಿಸುತ್ತಿರುವ ಆರೋಪ ಕೇಳಿ ಬಂದಿದೆ.

ವಿರಾಜಪೇಟೆಯ-ಕೇರಳ ಗಡಿಭಾಗದ ಬಾಳುಗೋಡು ವ್ಯಾಪ್ತಿಯಲ್ಲಿ ನಿಯಮ ಬಾಹಿರ ರೆಸಾರ್ಟ್, ಹೋಟೆಲ್, ಬಾರಿ ವಿಲ್ಲಾಗಳನ್ನು ನಿರ್ಮಾಣ ಮಾಡಿ ಮಾರಾಟ ಮಾಡಲಾಗುತ್ತಿದೆ. ಬ್ರಹ್ಮಗಿರಿ ವನ್ಯಜೀವಿ ವಲಯ ಅರಣ್ಯ ಬಫರ್ ಜೋನ್ ಆಗಿದ್ದರೂ ನಿಯಮಗಳನ್ನು ಗಾಳಿಗೆ ತೂರಿ ಇಂತಹ ಕಾಮಗಾರಿ ನಡೆಸಲಾಗುತ್ತಿರುವ ಬಗ್ಗೆ ಪರಿಸರವಾದಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಅಕ್ರಮ ಕಟ್ಟಡಗಳಿಂದ ಪರಿಸರ ಹಾಗೂ ವನ್ಯಜೀವಿಗಳ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸಂಸ್ಥೆಯೊಂದು ಇದೀಗ ಸುಮಾರು ೩೦ ಎಕರೆ ಪ್ರದೇಶದಲ್ಲಿ ಮೈಸೂರು ಮುಡಾದ ಅನುಮತಿ ಇದೆ ಎಂದು ಹೇಳಿಕೊಂಡು ಬೃಹತ್ ವಿಲ್ಲಾಗಳನ್ನು ನಿರ್ಮಿಸಲು ನಿವೇಶನ ಸಿದ್ಧ ಮಾಡಿಕೊಳ್ಳುತ್ತಿದೆ. ಇದೇ ರೀತಿ ನಿಯಮ ಬಾಹಿರ ಅಕ್ರಮ ಕಟ್ಟಡ ನಿರ್ಮಾಣಗಳು ಮುಂದುವರಿದರೆ ಕೊಡಗಿನ ಜಲ ಮೂಲ, ಪರಿಸರಕ್ಕೆ ಭಾರೀ ಧಕ್ಕೆಯಾಗಲಿದೆ. ಮುಂದೆ ಕಾವೇರಿಯ ಒಡಲು ಬರಿದಾಗಿ ಮೈಸೂರು, ಮಂಡ್ಯ ಭಾಗದ ಜನರಿಗೆ ನೀರು ಅಲಭ್ಯವಾಗಲಿದೆ ಎಂದು ಕೊಡಗು ವನ್ಯಜೀವಿಗಳ ಸಂಘದ ಅಧ್ಯಕ್ಷ ಕರ್ನಲ್ ಮುತ್ತಣ್ಣ ಹೇಳಿದ್ದಾರೆ.

ನಿಯಮಬಾಹಿರ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಕೆಲ ಅಧಿಕಾರಿಗಳು ಕೂಡ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯ ಜನ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

” ನಾವು ಕೇರಳದಲ್ಲಿ ಒಂದು ಸ್ಥಳ ಖರೀದಿ ಮಾಡುವುದಾಗಲಿ, ಅಂಗಡಿ ತೆರೆಯುವುದಾಗಲಿ ಸಾಧ್ಯವಾಗುವುದಿಲ್ಲ. ಆದರೆ ಅಲ್ಲಿನವರು ಇಲ್ಲಿ ಬಂದು ಕಾಫಿ ತೋಟ, ಗದ್ದೆಗಳನ್ನು ಖರೀದಿಸಿ, ನಿಯಮ ಬಾಹಿರವಾಗಿ ಬೃಹತ್ ವಿಲ್ಲಾಗಳನ್ನು ನಿರ್ಮಿಸಿ, ಪರಿಸರ ನಾಶ ಮಾಡುತ್ತಿದ್ದಾರೆ. ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಬೇಕು.”

-ಪದ್ಮಿನಿ ಶೇಖರ್, ಪರಿಸರವಾದಿ

” ಕೆಲ ಅಧಿಕಾರಿಗಳು ಪರಿಸರ ನಾಶಕ್ಕೆ ಮೂಲ ಕಾರಣಕರ್ತರಾಗಿದ್ದಾರೆ. ಈ ಬಗ್ಗೆ ಆಗತ್ಯ ತನಿಖೆ ನಡೆಸಿದರೆ ಈ ಅಕ್ರಮಗಳ ಮೂಲ ಹೊರ ಬರುತ್ತದೆ. ನಾಂಗಾಲದಲ್ಲಿ ಈ ರೀತಿ ಬೆಟ್ಟವನ್ನು ಅಗೆದು ವಿಲ್ಲಾಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇತ್ತ ಬಾಳುಗೋಡುವಿನಲ್ಲಿ ೩೦ ಎಕರೆ ಕಾಫಿ ತೋಟ, ಗದ್ದೆಯ ಜಾಗದಲ್ಲಿ ಬೃಹತ್ ವಿಲ್ಲಾ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇಂತಹ ಪ್ರಕೃತಿ ವಿರೋಧಿ, ನಿಯಮ ಬಾಹಿರ ಕೆಲಸಗಳ ವಿರುದ್ಧ ಪರಿಸರ, ನೆಲ, ಜಲ ಉಳಿಸಲು ಉಗ್ರ ಹೋರಾಟ ಅನಿವಾರ್ಯ”

-ರಘು ಮಾಚಯ್ಯ, ಕಾರ್ಯದರ್ಶಿ, ಕಾವೇರಿ ಸೇನೆ

” ತಮ್ಮ ಗ್ರಾಮದ ಅಳಿವು ಉಳಿವಿನ ಜೊತೆಗೆ ಬ್ರಹ್ಮಗಿರಿ ವನ್ಯಜೀವಿ ಅರಣ್ಯದ ಉಳಿವಿನ ಪ್ರಶ್ನೆ ಎದುರಾಗಿದೆ. ಇಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕಿದೆ. ತನಿಖೆ ನಡೆಸಿ ನಿಯಮ ಉಲ್ಲಂಘನೆಯಾಗಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.”

-ಪುಚ್ಚಿಮಂಡ ಮಾಚಯ್ಯ, ಸ್ಥಳೀಯರು

” ನಿಯಮಬಾಹಿರವಾಗಿ ವನ್ಯಜೀವಿ ಅರಣ್ಯದ ಸಮೀಪವೇ ಬೃಹತ್ ವಿಲ್ಲಾ ನಿರ್ಮಾಣ ಕೆಲಸ ನಡೆಯುತ್ತಿದೆ. ಇಂತಹ ಕಾಮಗಾರಿಗಳಿಂದ ಪರಿಸರದ ಮೇಲೆ ನೇರ ಪರಿಣಾಮ ಬೀರಲಿದೆ. ಜಿಲ್ಲಾಧಿಕಾರಿಗಳು, ಕ್ಷೇತ್ರದ ಶಾಸಕರು, ಸ್ಥಳಕ್ಕೆ ಭೇಟಿ ನೀಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಎಲ್ಲರನ್ನೂ ಸಂಘಟಿಸಿ ಉಗ್ರ ಹೋರಾಟ ನಡೆಸಲಾಗುವುದು.”

– ಕರ್ನಲ್ ಮುತ್ತಣ್ಣ, ಅಧ್ಯಕ್ಷ,ಕೊಡಗು ವನ್ಯ ಜೀವಿಗಳ ಸಂಘ

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

54 mins ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

56 mins ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

58 mins ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

1 hour ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

1 hour ago