Andolana originals

ಮಾರ್ಚ್‌ನಲ್ಲೇ ಚಾ.ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಜಾರಿ

• ಕೆ.ಬಿ.ರಮೇಶನಾಯಕ

• ಆ.19ರಂದು ಕರೆದಿದ್ದ ಸಭೆ ಮುಂದೂಡಿದ ಸಿಎಂ ಸಿದ್ದರಾಮಯ್ಯ

. ಪ್ರಾಧಿಕಾರ ರಚನೆ ಸಂಬಂಧ ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಲು ಸಿದ್ಧತೆ

• ಪ್ರಾಧಿಕಾರ ರಚನೆ ಕುರಿತು ಮಾ.7ರಂದು ರಾಜ್ಯಪತ್ರದಲ್ಲಿ ಪ್ರಕಟ

• ಜುಲೈ 1ರಿಂದ ಪ್ರಾಧಿ ಕಾರ ಅಸ್ತಿತ್ವಗೊಳಿಸಿ ಅಧಿಸೂಚನೆ ಹೊರಡಿಸಿರುವ ಸರ್ಕಾರ

ಮೈಸೂರು: ರಾಜ ಮನೆತನ ಹಾಗೂ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಕಾನೂನಿನ ಸಂಘರ್ಷಕ್ಕೆ ಕಾರಣವಾಗಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ಮಾರ್ಚ್ ತಿಂಗಳಲ್ಲೇ ರಚಿಸುವ ಜತೆಗೆ ಜುಲೈ ಒಂದರಿಂದಲೇ ಪ್ರಾಧಿಕಾರ ಕಾರ್ಯರೂಪಕ್ಕೆ ಬಂದಿದ್ದು, ಪ್ರಾಧಿಕಾರ ರಚನೆಗೆ ಸಂಬಂಧಿಸಿದಂತೆ ಕೈಗೊಂಡಿರುವ ತೀರ್ಮಾನಗಳನ್ನು ಕುರಿತು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ಸರ್ಕಾರ ಮುಂದಾಗಿದೆ.

ಆ.19ರಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಪ್ರಾಧಿಕಾರದ ಪ್ರಥಮ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಲಾ ಗಿದೆ. ಚಾಮುಂಡಿಬೆಟ್ಟಕ್ಕೆ ನಿತ್ಯ ಸಾವಿರಾರು ಮಂದಿ ಭೇಟಿ ನೀಡುವ ಕಾರಣ ಮೂಲ ಸೌಕರ್ಯಗಳನ್ನು ಒದಗಿಸುವುದೂ ಸೇರಿದಂತೆ ಒಂದಿಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರ 2023-24ನೇ ಸಾಲಿನ ಆಯವ್ಯಯದಲ್ಲಿ ಪ್ರಾಧಿಕಾರ ರಚಿಸುವುದಾಗಿ ಘೋಷಿಸಿತ್ತು.

2024ರ ಮಾರ್ಚ್ 7ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024ರ ಬಗ್ಗೆ ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ.

ನಂತರ, ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಅಧಿಕೃತವಾಗಿ ರಾಜ್ಯಪತ್ರದಲ್ಲಿ ಪ್ರಕಟಿಸಿರುವುದನ್ನು ಕಂದಾಯ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಮಾರ್ಚ್ 30ರಂದು ಕಳುಹಿಸಿ ಕೊಟ್ಟಿದ್ದರು. ನಂತರ, ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿಒಪ್ಪಿಗೆ ದೊರೆತಮೇಲೆ ಅಧಿವೇಶನದಲ್ಲೂ ಅಂಗೀಕಾರ ದೊರೆತಿತ್ತು. ಇದರಿಂದಾಗಿ ಜುಲೈ 1ರಿಂದ ಪ್ರಾಧಿಕಾರವು ಜಾರಿಗೆ ಬರುತ್ತದೆ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದರ ನಂತರವೇ ರಾಜ್ಯ ಸರ್ಕಾರ ಹಿರಿಯ ಕೆಎಎಸ್ ಅಧಿಕಾರಿ ಎಂ.ಜೆ.ರೂಪಾ ಅವರನ್ನು ಪ್ರಾಧಿಕಾರದ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದು ಅವರು ಅಧಿಕಾರ ವಹಿಸಿಕೊಂಡು ಕಾರ್ಯಾರಂಭ ಶುರು ಮಾಡಿದ್ದರು.

ಈ ಮಧ್ಯೆ ರಾಜವಂಶಸ್ಥರು ಪ್ರಾಧಿಕಾರದ ರಚನೆಯನ್ನು ಪ್ರಶ್ನಿಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದು ಆಂತರಿಕವಾಗಿ ಸರ್ಕಾರವನ್ನು ಗೊಂದಲಕ್ಕೆ ಸಿಲುಕುವಂತೆ ಮಾಡಿದೆ. ಹೀಗಾಗಿಯೇ, ಪ್ರಾಧಿಕಾರ ರಚನೆ ಸಂಬಂಧ ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಹೊರಡಿಸಿರುವ ಜತೆಗೆ, ಕಾರ್ಯರೂಪಕ್ಕೆ ಬಂದಿರುವುದನ್ನು ನ್ಯಾಯಾಧೀಶರ ಗಮನಕ್ಕೆ ತರುವುದಕ್ಕೆ ಕಾನೂನು ಸಚಿವಾಲಯ ಮತ್ತು ಧಾರ್ಮಿಕ ದತ್ತಿ ಇಲಾಖೆಯು ದಾಖಲೆಗಳನ್ನು ಸಿದ್ದಪಡಿಸುವ ಕೆಲಸದಲ್ಲಿ ತೊಡಗಿದೆ ಎಂದು ಮೂಲಗಳು ಹೇಳಿವೆ.

ಅಲ್ಲದೆ, ಸಿದ್ದರಾಮಯ್ಯ ಅವರೇ ಸಂಬಂಧಿಸಿದ ಸಚಿವರು, ಹಿರಿಯ ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಅಲ್ಲದೆ, ತಡೆಯಾಜ್ಞೆ ತೆರವು ಗೊಳಿಸಿ ಪ್ರಾಧಿಕಾರದ ಚಟುವಟಿಕೆ ಮುಂದುವರಿ ಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಆ.19ರಂದು ಕರೆದಿದ್ದ ಸಭೆಯನ್ನು ತಾತ್ಕಾಲಿಕವಾಗಿ ಮುಂದೂ ಡುವಂತೆ ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.

ಶಾಶ್ವತ ಸದಸ್ಯ ಸ್ಥಾನ ಕೊಟ್ಟರೂ ನಿಯಂತ್ರಣದಿಂದ ಮುಕ್ತಿ:

ಪ್ರಾಧಿಕಾರದಲ್ಲಿ ಮೈಸೂರು ಮಹಾರಾಜರ ಕಾನೂನುಬದ್ಧ ವಂಶಸ್ಥರು ಅಥವಾ ಅವರ ಪ್ರತಿನಿಧಿಗೂ ಶಾಶ್ವತ ಸದಸ್ಯ ಸ್ಥಾನವನ್ನು ನೀಡಲಾಗಿ ದ್ದರೂ ಚಾಮುಂಡೇಶ್ವರಿ ದೇವಸ್ಥಾನವನ್ನು ನಿಯಂತ್ರಿಸುವ ಹೊಣೆಗಾರಿಕೆಯಿಂದ ಮುಕ್ತಗೊಳಿಸಲಾಗಿದೆ. ಮುಖ್ಯಮಂತ್ರಿಗಳು ಪದನಿಮಿತ್ತ ಅಧ್ಯಕ್ಷರಾಗಿದ್ದು, ವಿವಿಧ ಇಲಾಖೆ ಅಧಿಕಾರಿಗಳನ್ನು ಪದನಿಮಿತ್ತ ಸದಸ್ಯರನ್ನಾಗಿ ನಿಯೋಜನೆ ಮಾಡುತ್ತಿದ್ದರೂ ರಾಜವಂಶಸ್ಥರಿಗೆ ಶಾಶ್ವತ ಸದಸ್ಯ ಸ್ಥಾನವನ್ನು ಕಲ್ಪಿಸಲಾಗಿದೆ.

ಆದರೆ, ಚಾಮುಂಡೇಶ್ವರಿ ದೇವಸ್ಥಾನವನ್ನು ನಿಯಂತ್ರಿಸುವ ಯಾವುದೇ ಪದ್ಧತಿ, ರೂಢಿ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಉಪಬಂಧಗಳಲ್ಲಿ ಅಥವಾ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದಲ್ಲಿ ಏನೇ ಒಳಗೊಂಡಿದ್ದರೂ ದೇವಸ್ಥಾನದ ಒಡೆತನ, ಆಡಳಿತ ಮತ್ತು ಆಭರಣಗಳು, ಹೊಣೆಗಾರಿಕೆಗಳನ್ನು ಒಳಗೊಂಡಂತೆ ಚರ ಮತ್ತು ಸ್ಥಿರ ಸ್ವತ್ತುಗಳ ಸಂಪೂರ್ಣ ನಿರ್ವಹಣೆಯು ಪ್ರಾಧಿಕಾರದ ಹೊಣೆಯಾಗಿದೆ ಮತ್ತು ಪ್ರಾಧಿಕಾರಕ್ಕೆ ವರ್ಗಾಯಿಸುವಂತೆ ಹೇಳಲಾಗಿದೆ. ಪ್ರಾಧಿಕಾರದಲ್ಲಿ ರಾಜಮನೆತನಕ್ಕೆ ಶಾಶ್ವತ ಸ್ಥಾನ ಕೊಟ್ಟರೂ ದೇವಾಲಯ ನಿಯಂತ್ರಣದಿಂದ ಹೊರಗಿಡುವ ಮತ್ತು ಹಕ್ಕು ಸ್ವಾಮ್ಯವನ್ನು ಪಡೆಯುವಂತಹ ಅಂಶಗಳನ್ನು ಸೇರಿಸಿರುವ ನಿರ್ಧಾರವೇ ಈಗ ರಾಜವಂಶಸ್ಥರು ನ್ಯಾಯಾಲಯದ ಹೋಗುವುದಕ್ಕೆ ಮೂಲ ಕಾರಣವಾಗಿದೆ.

ಆಂದೋಲನ ಡೆಸ್ಕ್

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

5 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

6 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

6 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

8 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago