Andolana originals

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ

ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದ ಆವರಣದಲ್ಲಿ ಸುಮಾರು ೧೮ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸ ಲಾಗಿರುವ ಮುಖಮಂಟಪವು ಡಿ.೨೫ರ ಗುರುವಾರ ಲೋಕಾರ್ಪಣೆಗೊಳ್ಳಲಿದ್ದು, ದೇವಾಲಯದ ಆಡಳಿತ ಮಂಡಳಿ ಅಗತ್ಯ ಸಿದ್ಧತೆಯನ್ನು ಮಾಡಿಕೊಂಡಿದೆ.

ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರವು ೧೯೯೨ ಮೇ.೮ ರಂದು ಸ್ಥಾಪನೆಗೊಂಡಿತು. ನಂತರದ ದಿನಗಳಲ್ಲಿ ದೇವಾಲಯದ ಆವರಣದಲ್ಲಿ ಶ್ರೀ ಅಯ್ಯಪ್ಪಸ್ವಾಮಿ, ಶ್ರೀಕನ್ನಿಮೂಲ ಗಣಪತಿ,ನೈವೇದ್ಯ ಕೊಠಡಿ ಮತ್ತು ದೇವಸ್ಥಾನದ ಕಚೇರಿ ನಿರ್ಮಿಸಲಾಗಿತ್ತು. ಅದರಂತೆ ಕಳೆದ ವರ್ಷ ದುರ್ಗಾ ದೇವಿಯ ದೇವಸ್ಥಾನವನ್ನು ಬಿ.ಎಂ. ಸುರೇಶ್ ನೇತೃತ್ವದ ದೇವಸ್ಥಾನದ ಆಡಳಿತ ಮಂಡಳಿ ದೇವಾಲಯವನ್ನು ನಿರ್ಮಿಸಿ ಜೀರ್ಣೊದ್ಧಾರಗೊಳಿಸಿತು.

ಈ ಬಾರೀ ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ತೀರ್ಥ ಮಂಟಪದ ನಿರ್ಮಾಣಕ್ಕೆ ಊರಿನ ದಾನಿಗಳು, ಭಕ್ತಾದಿಗಳು ಸೇರಿದಂತೆ ಸುತ್ತ ಮುತ್ತಲಿನ ದಾನಿಗಳ ಸಹಾಯದಿಂದ ೧೮ ಲಕ್ಷ ರೂ. ವೆಚ್ಚದಲ್ಲಿ ಮುಖಮಂಟಪ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.

ಮುಖ ಮಂಟಪ ನಿರ್ಮಾಣಕ್ಕೆ ೬ ತಿಂಗಳ ಹಿಂದೆ ಪುತ್ತೂರಿನ ಜಗನಿವಾಸ್ ರಾವ್ ಶಿಲಾ ನ್ಯಾಸ ನೆರವೇರಿಸಿದ್ದರು. ಪುತ್ತೂರಿನ ಶಿಲ್ಪಿಗಳಾದ ಕೃಷ್ಣಪ್ರಸಾದ್ ಮುಖ ಮಂಟಪವನ್ನು ಸುಂದರವಾಗಿ ರೂಪಿಸಿದ್ದು,ಲೋಕಾರ್ಪಣೆಗೆ ಸಿದ್ಧವಾಗಿದೆ.

ಡಿ.೨೪ ರಂದು ಸಂಜೆ ೬ ಗಂಟೆಗೆ ಕೇರಳದ ತಳಿಪರಂಬ ಕಾಳೇಘಾಟ್ ಇಲ್ಲಂ ಮಧುಸೂದನ್ ತಂತ್ರಿ ಅವರ ನೇತೃತ್ವದಲ್ಲಿ ಆಚಾರ್ಯ ತಂತ್ರಿ ಯವರನ್ನು ಸ್ವೀಕಾರ ಮಾಡುವುದರೊಂದಿಗೆ ೬.೩೦ಕ್ಕೆ ಪ್ರಾಶಬ್ಧ ಶುದ್ಧಿ ನಡೆಯಲಿದೆ. ರಾತ್ರಿ ೭ ಗಂಟೆಗೆ ರಾಕ್ಷೆಘ್ನ ಹೋಮ ಹಾಗೂ ಮುಖಮಂಟಪ ಸಮರ್ಪಣೆ, ರಾತ್ರಿ ೮ ಗಂಟೆಗೆ ವಾಸ್ತು ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಬಲಿ, ವಾಸ್ತು ಕಲಶಾಭಿಷೇಕ, ಅತ್ತಾಯ ಪೂಜೆ, ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಲಿದೆ.

ಡಿ.೨೫ ರಂದು ಬೆಳಿಗ್ಗೆ ೭ ಗಂಟೆಗೆ ಗಣಪತಿ ಹೋಮ, ೮ ಗಂಟೆಗೆ ಕಳಸಪೂಜೆ, ೧೦ ಗಂಟೆಗೆ ದುರ್ಗಾ ಲಕ್ಷಿ ಗೆ ಕಲಶಾಭಿಷೇಕ, ಮಧ್ಯಾಹ್ನ ೧೨ ಗಂಟೆಗೆ ಪೂಜೆ ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ. ದುರ್ಗಾ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಅಂಗವಾಗಿ ವೈದಿಕ ಧಾರ್ಮಿಕ, ವಿಧಿವಿಧಾನ ಕಾರ್ಯಕ್ರಮಗಳು ನಡೆಯಲಿವೆ.

ಡಿ.೨೭ ರಂದು ಮಂಡಲಪೂಜೆ ಅಂಗವಾಗಿ ಮುಂಜಾನೆ ೬.೪೫ಕ್ಕೆ ಗಣಪತಿ ಹೋಮ, ೭.೧೦ಕ್ಕೆ ಕನ್ನಿಮೂಲ ಗಣಪತಿಗೆ ಎಳೆನೀರು ಅಭಿಷೇಕ, ೭.೩೦ಕ್ಕೆ ಚಂಡೆಮೇಳ, ೯ ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ಪಂಚಾಮೃತಾಭಿಷೇಕ, ೧೧.೩೦ಕ್ಕೆ ಶ್ರೀ ಅಯ್ಯಪ್ಪ ಸ್ವಾಮಿಗೆ ಲಕ್ಷಾರ್ಚನೆ, ೧೨.೩೦ಕ್ಕೆ ಶ್ರೀ ಅಯ್ಯಪ್ಪಸ್ವಾಮಿಗೆ ಪಲ್ಲಪೂಜೆ, ೧ ಗಂಟೆಗೆ ಮಹಾಪೂಜೆ ಮತ್ತು ಭಕ್ತಾದಿಗಳಿಗೆ ಮಧ್ಯಾಹ್ನ ೧ರಿಂದ ೪ ರವರೆಗೆ ಅನ್ನ ಸಂತರ್ಪಣೆ ನಡೆಯಲಿದೆ. ದಿನದ ವಿಶೇಷ ಪೂಜೆಯಾಗಿ ಬಿಲ್ವಪತ್ರೆ, ತುಳಸಿ ಅರ್ಚನೆ, ಪಂಚಾಮೃತ ಅಭಿಷೇಕ ಹಾಗೂ ದುರ್ವಾಚನೆ ನಡೆಸಲಾಗುವುದು.

ಶ್ರೀಪುರಂ ಅಯ್ಯಪ್ಪ ಕ್ಷೇತ್ರದಲ್ಲಿ ವಿಶೇಷವಾಗಿ ಸಂಜೆ ೬.೩೦ಕ್ಕೆ ದೀಪಾರಾಧನೆ ಮತ್ತು ಮೆರವಣಿಗೆ, ೭.೩೦ಕ್ಕೆ ದುರ್ಗಾಪೂಜೆ ನಂತರ ಮಹಾಮಂಗಳಾರತಿಯೊಂದಿಗೆ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷರಾದ ಸುರೇಶ್ ಹಾಗೂ ಕಾರ್ಯದರ್ಶಿ ಎಂ.ಚಂದ್ರ ಅವರು ತಿಳಿಸಿದ್ದಾರೆ.

” ಆಡಳಿತ ಮಂಡಳಿ, ಹಿರಿಯರ ಮಾರ್ಗದರ್ಶನದೊಂದಿಗೆ ದಾನಿಗಳು, ಭಕ್ತಾದಿಗಳ ನೆರವಿನೊಂದಿಗೆ ದೇವಾಲಯದಲ್ಲಿ ಹಂತ ಹಂತವಾಗಿ ಎಲ್ಲ ಕೆಲಸಗಳು ನಡೆದಿವೆ. ಅದೇ ರೀತಿ ದುರ್ಗಾ ಲಕ್ಷಿ  ದೇವಸ್ಥಾನ ಜೀರ್ಣೋದ್ಧಾರ ಮತ್ತು ಲೋಕಾರ್ಪಣೆಗೊಳಿಸಲು ಹಲವರು ನೇರವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ್ದರು. ಈ ಬಾರಿ ಮುಖ ಮಂಟಪ ನಿರ್ಮಾಣಕ್ಕೆ ಹಿರಿಯರು, ದಾನಿಗಳು ಹಾಗೂ ಭಕ್ತಾದಿಗಳು ಸಹಕಾರ ನೀಡಿದ್ದರಿಂದ ೬ ತಿಂಗಳಲ್ಲಿ ಕಾಮಗಾರಿ ಮುಗಿದು ಲೋಕಾರ್ಪಣೆಗೆ ಸಿದ್ಧಗೊಂಡಿದೆ.”

-ಬಿ.ಎಂ.ಸುರೇಶ್, ಅಧ್ಯಕ್ಷರ, ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಆಡಳಿತ ಮಂಡಳಿ

” ಸುಂಟಿಕೊಪ್ಪದ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ, ಕನ್ನಿಮೂಲ ಗಣಪತಿ, ಶ್ರೀ ದುರ್ಗಾ ಲಕ್ಷಿ  ಸನ್ನಿಧಿಗಳಿವೆ. ಮುಂದೆ ನಾಗಾಲಯ ಮಾಡುವ ಉದ್ದೇಶವಿದೆ.ಭಕ್ತಾದಿಗಳು ಹಾಗೂ ದಾನಿಗಳು ಕೈ ಜೋಡಿಸಬೇಕು.”

-ಎಂ.ಚಂದ್ರ, ಕಾರ್ಯದರ್ಶಿ, ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

3 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

3 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

3 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

3 hours ago

ಪೋಕ್ಸೋ ಪ್ರಕರಣ: ಬೇಕು ಮಕ್ಕಳ ಸ್ನೇಹಿ ವಾತಾವರಣ

ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…

3 hours ago

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

3 hours ago