Andolana originals

ಜಿಲ್ಲೆಯಲ್ಲಿ ಹೆಚ್ಚಿದ ಮಾನಸಿಕ ಆರೋಗ್ಯ ಸಮಸ್ಯೆ

ಅತಿಯಾದ ಒತ್ತಡ, ಮೊಬೈಲ್ ಬಳಕೆಯಿಂದ ಖಿನ್ನತೆಗೆ ಸಿಲುಕಿದೆ ಯುವ ಸಮೂಹ

ಚಿರಂಜೀವಿ ಸಿ. ಹುಲ್ಲಹಳ್ಳಿ
ಮೈಸೂರು: ಬದಲಾದ ಜೀವನ ಕ್ರಮ, ಮೊಬೈಲ್ ಗೀಳು, ಕೆಲಸದ ಒತ್ತಡ, ಉನ್ಮಾದದಂತಹ ಕಾರಣ ಗಳಿಂದ ಜಿಲ್ಲೆಯಲ್ಲಿ ಮಾನಸಿಕ ಕಾಯಿಲೆಗೆ ತುತ್ತಾಗುವವರ ಸಂಖ್ಯೆ ತಿಂಗಳಿಂದ ತಿಂಗಳಿಗೆ ಹೆಚ್ಚಾಗುತ್ತಿರುವ ಆತಂಕಕಾರಿ ಸಂಗತಿ ಬೆಳಕಿ ಬಂದಿದೆ.

ಜಿಲ್ಲೆಯ ಯುವ ಸಮೂಹ ಮಾನಸಿಕ ಆರೋಗ್ಯದ ಸಮಸ್ಯೆಗಳಿಗೆ ಸಿಲುಕಿ ಖಿನ್ನತೆಯಿಂದ ಬಳಲುತ್ತಿರುವುದು ಪಾಲಕರ ಜೊತೆಗೆ ಆರೋಗ್ಯ ಇಲಾಖೆಗೂ ಸವಾಲಾಗಿ ಪರಿಣಮಿಸಿದೆ. ಇದನ್ನು ಪತ್ತೆ ಹಚ್ಚಿ ಚಿಕಿತ್ಸೆ ಕೊಡಿಸುವ ಕೆಲಸವನ್ನು ಆರೋಗ್ಯ ಇಲಾಖೆ ಸದ್ದಿಲ್ಲದೆ ನಡೆಸಿದೆ. ೨೦ರಿಂದ ೩೫ ವರ್ಷದವರೆಗಿನ ಯುವ ಸಮೂಹಕ್ಕೆ ಕೆಲಸದೊತ್ತಡ, ಓದಿನ ಒತ್ತಡ, ಸ್ಪರ್ಧಾತ್ಮಕತೆ, ಹೆಚ್ಚು ಮೊಬೈಲ್ ಬಳಕೆಯಿಂದ ಖಿನ್ನತೆಗೆ ಒಳಗಾದರೆ ೩೫ ರಿಂದ ೭೦ರವರೆಗೆ ವಯೋಮಾನದವರು ಕೌಟುಂಬಿಕ ಸಮಸ್ಯೆಗಳು, ಮದ್ಯಪಾನ ವ್ಯಸನಿಗಳಾದವರು, ಮಕ್ಕಳ ಪೋಷಣೆ ಸಿಗದ ವೃದ್ಧರು ಖಿನ್ನತೆಗೆ ಒಳಗಾಗಿದ್ದಾರೆ. ಇಂತಹವರನ್ನು ಗುರುತಿಸಿ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ ಹಾಗೂ ಜಿಲ್ಲಾ ಸ್ಪತ್ರೆ ವತಿಯಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆಶಾ ಕಾರ್ಯಕರ್ತೆರು, ಸಿಎಚ್‌ಒಗಳು ಕ್ಷೇತ್ರ ವೀಕ್ಷಣೆ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ಚಿಕಿತ್ಸೆಗೆ ಹಾತೊರೆಯುವವರನ್ನು ಗುರುತಿಸಿ ಪ್ರತಿ ಮಂಗಳವಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುವ ಮನೋ ಚೈತನ್ಯ ಕ್ಲಿನಿಕ್ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆ ಬೇಕಾದವರಿಗೆ ಪ್ರತಿ ಶುಕ್ರವಾರ ಲಭ್ಯವಾಗುವ ಮನೋರೋಗ ತಜ್ಞರಿಗಾಗಿ ತಾಲ್ಲೂಕು ಅಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ನಿರ್ದೇಶಿಸಲಾಗುತ್ತಿದೆ.

ಮಾನಸಿಕ ಕಾಯಿಲೆ ರೋಗಿಗಳನ್ನು ಎರಡು ವಿಭಾಗಗಳಲ್ಲಿ ವಿಂಗಡಿಸಲಾಗಿದ್ದು, ಈ ವರ್ಷ ಏಪ್ರಿಲ್ ನಿಂದ ಸೆಪ್ಟೆಂಬರ್‌ವರೆಗೆ ತೀವ್ರ ಮಾನಸಿಕ ಅಸ್ವಸ್ಥತೆಯಿಂದ ೨,೨೫೬ ಮಂದಿ ಚಿಕಿತ್ಸೆಗೆ ಒಳಗಾದರೆ, ಸಾಮಾನ್ಯ ಮಾನಸಿಕ ಅಸ್ವಸ್ಥತೆಯಿಂದ ೫,೮೮೧ ಮಂದಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇದರಲ್ಲಿ ಎಲ್ಲ ವಯೋಮಾನದವರೂ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹವಿರುವುದು ಕಳವಳ ಕಾರಿಯಾಗಿದೆ. ಈಗಾಗಲೇ ಯೋಜನೆಯ ಕುರಿತು ಹಲವಾರು ತಾಲ್ಲೂಕು, ಹೋಬಳಿಗಳಲ್ಲಿ ಜಾಗೃತಿ ಕಾರ್ಯ ಕ್ರಮಗಳನ್ನು ನಡೆಸಲಾಗಿದೆ. ಚಿಕಿತ್ಸೆಗೆ ಒಳಗಾದವರನ್ನು ಇ-ಮಾನಸ್ ವೆಬ್‌ಸೈಟ್‌ನಲ್ಲಿ ರಿಜಿಸ್ಟರ್ ಮಾಡಲಾಗಿದೆ. ಈ ಅಂಕಿ ಅಂಶಗಳ ಪ್ರಕಾರ ತಿಂಗಳಿಂದ ತಿಂಗಳಿಗೆ ಮಾನಸಿಕ ಆರೋಗ್ಯ ಸಮಸ್ಯೆಯ ಚಿಕಿತ್ಸೆಗೆ ಒಳಗಾಗು ವವರ ಸಂಖ್ಯೆ ಹೆಚ್ಚಾಗಿದೆ.

ಏನೇನು ಮಾಡಬೇಕು?
ಪ್ರತಿನಿತ್ಯ ವ್ಯಾಯಾಮದಿಂದ ನಿಮ್ಮ ದೈಹಿಕ ಆರೋಗ್ಯವನ್ನಷ್ಟೆ ಅಲ್ಲ, ಮಾನಸಿಕ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು. ಧ್ಯಾನವು ನಿಮ್ಮೊಳಗಿನ ಒತ್ತಡವನ್ನು ಹೋಗಲಾಡಿಸುತ್ತದೆ. ಮೆದುಳಿನ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ. ಸಾಧ್ಯವಾದಷ್ಟು ಸಾಮಾಜಿಕವಾಗಿ ನಿಮ್ಮನ್ನು ತೆರೆದುಕೊಳ್ಳಿ. ಜನರ ಜತೆ ಹೆಚ್ಚು ಬೆರೆಯಿರಿ. ಮನೆಯ ವಾತಾವರಣದಲ್ಲಿ ಹೆಚ್ಚು ಹೊತ್ತು ಸಮಯ ಕಳೆಯುವ ಬದಲು ಹೊರಾಂಗಣದಲ್ಲಿ ಪ್ರಕೃತಿಯೊಂದಿಗೆ ನಿಮ್ಮನ್ನು ತೆರೆದುಕೊಳ್ಳಬೇಕು. ನಿಮ್ಮ ಕೆಲಸದ ಒತ್ತಡದ ನಡುವೆಯೂ ನಿಮಗೆ ಖುಷಿ ಕೊಡುವ ಹವ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು.

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ವತಿಯಿಂದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಸಪ್ತಾಹವನ್ನು ಆಯೋಜಿಸಿದ್ದು, ಅ. ೨೯ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಪಂಚಾಯಿತಿ ಆವರಣದ ಅಬ್ದುಲ್ ನಜಿರ್‌ಸಾಬ್ ಸಭಾಂಗಣದಲ್ಲಿ ಚಾಲನೆ ದೊರೆಯಲಿದೆ.

ಮಾನಸಿಕ ಆರೋಗ್ಯದ ಚಿಕಿತ್ಸೆಯು ದೀರ್ಘಾವಧಿಯದ್ದಾಗಿರುವ ಕಾರಣ ರೋಗಿಗಳಿಗೆ ಆಸ್ಪತ್ರೆ ಸಿಬ್ಬಂದಿ ಕರೆ ಮಾಡಿ ಚಿಕಿತ್ಸೆ ಪಡೆದುಕೊಳ್ಳಲು ಸಲಹೆಗಳನ್ನು ನೀಡುವರು. ಇದರಲ್ಲಿ ಯಾವುದೇ ಅಂಜಿಕೆ, ಕೀಳರಿಮೆ ಬೇಡ. ಸಾರ್ವಜನಿಕರು ಸೌಲಭ್ಯ ಬಳಸಿಕೊಳ್ಳಬೇಕು.
– ಡಾ. ಬಿ. ಬೃಂದಾ, ಕಾರ್ಯಾಕ್ರಮಾನುಷ್ಠಾನಾಧಿಕಾರಿ, ಜಿಲ್ಲಾ ಮಾನಸಿಕ ಆರೋಗ್ಯ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

5 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

10 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

10 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

11 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

12 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

12 hours ago