ಮೈಸೂರು: ಭೂಮಿ ಕಳೆದುಕೊಂಡ ರೈತರ ಕುಟುಂಬದವರಿಗೆ ಉದ್ಯೋಗ ಕೊಡಿಸಲು ವಿಫಲ ವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ರೈತರು ಅನಿ ರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.
ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿ ವೃದ್ಧಿಗೆಂದು ಭೂ ಸ್ವಾಧೀನಪಡಿಸಿಕೊಳ್ಳಲಾದ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ರೈತರ ಕುಟುಂಬದ ಸದಸ್ಯರಿಗೆ ಕಾರ್ಖಾನೆಗಳಲ್ಲಿ ಖಾಯಂ ಕೆಲಸ ನೀಡುವುದಾಗಿ ಭರವಸೆ ನೀಡ ಲಾಗಿತ್ತು. ಆದರೆ ಬಹುತೇಕ ಕಾರ್ಖಾನೆಗಳು ಉದ್ಯೋಗವನ್ನು ನೀಡಿರಲಿಲ್ಲ. ರೈತರ ಹಲವಾರು ಹೋರಾಟಗಳ ನಂತರ, ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಿತಿಯನ್ನು ರಚನೆ ಮಾಡಿದ್ದರು.
ಈ ಸಮಿತಿಯ ಶಿಫಾರಸಿನಂತೆ, ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎ ಡಿಬಿಯ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿ ಸುತ್ತಿಲ್ಲ. ಹಾಗಾಗಿ ರೈತರಿಂದ ಭೂಮಿಯನ್ನು ಪಡೆದು ಕೈಗಾರಿಕೆಗಳಿಗೆ ನೀಡಿರುವ ಕೆಐಎಡಿಬಿ ಅಧಿಕಾರಿಗಳು ರೈತರ ಮಕ್ಕಳಿಗೆ ಕೆಲಸ ಕೊಡಿಸ ಬೇಕೆಂದು, ಆ.29ರಂದು ಕೆಐಎಡಿಬಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಹೋರಾಟವನ್ನು ಪ್ರಾರಂಭಿಸಲಾಯಿತು.
ಪ್ರತಿಭಟನಾ ಸ್ಥಳಕ್ಕೆ ಬಂದ ಕೆಐಎಡಿಬಿ ಅಧಿಕಾರಿಗಳು ಸೆ.4ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರೈತರಿಗೆ ಕೆಲಸ ನೀಡಬೇಕಿರುವ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದರು. ಆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಸ್ ತೆಗೆದು ಕೊಳ್ಳಲಾ ಗಿತ್ತು. ಆದರೆ ಬುಧವಾರ ನಡೆದ ಸಭೆಯಲ್ಲಿ, ಭೂಮಿ ನೀಡಿದ ರೈತರ ಮಕ್ಕಳಿಗೆ ಉದ್ಯೋಗ ನೀಡುವ ಬಗ್ಗೆ ಯಾವುದೇ ತಿರ್ಮಾನ ವಾಗದ ಕಾರಣ ನ್ಯಾಯ ಸಿಗುವವರೆಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇ ಶಕರ ಕಚೇರಿಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ರೈತರು ತೀರ್ಮಾನಿಸಿದ್ದಾರೆ.
ಪ್ರತಿಭಟನೆಯ ನೇತೃತ್ವವನ್ನು ರೈತನಾಯಕರಾದ ಬೊಕ್ಕಹಳ್ಳಿ ನಂಜುಂಡಸ್ವಾಮಿ, ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಸಂಚಾಲಕರಾದ ಬಸವರಾಜು ಎಚ್.ಎಂ ರವರು ವಹಿಸಿದ್ದಾರೆ. ಪ್ರತಿಭಟನೆಯಲ್ಲಿ ರೈತರಾದ ಉಮೇಶ್, ಮಂಜು, ರವಿ, ಮಧು ಹಾಗೆಯೇ ಹೂವಮ್ಮ, ಮಂಜುಳಾ, ಶಿವಮ್ಮ ನಾಗಮ್ಮ ಸೇರಿದಂತೆ ಹಲವಾರು ರೈತರು ಭಾಗವಹಿಸಿದ್ದಾರೆ.
ಬೆಂಗಳೂರು: ಡಾ.ರಾಜ್‌ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗಷ್ಟೇ…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ತಮ್ಮ ಗೆಲುವಿನ…
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು