ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಜೈಲಿನಲ್ಲಿರುವ 46 ಜನರಿಗೆ ಕೊಳ್ಳೇಗಾಲದ ಹೆಚ್ಚುವರಿ ಸಿವಿಲ್ ಸೆಷನ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ 46 ಜನರ ಮೂರು ಮೇಲೆ ಇಂಡಿಗನತ್ತ ಮತಗಟ್ಟೆ ಧ್ವಂಸ, ಹಲ್ಲೆ ಪ್ರಕರಣದಲ್ಲಿ 46 ಮಂದಿಗೆ ಜಾಮೀನು ಪ್ರಕರಣಗಳನ್ನು ಪ್ರತ್ಯೇಕವಾಗಿ ದಾಖಲಿಸಲಾಗಿತ್ತು. ಅದರಲ್ಲಿ ಮತಗಟ್ಟೆ ಬಹಿಷ್ಠಾರ, ಗಲಭೆ, ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಬುಧವಾರ ನ್ಯಾಯಾಧೀಶರಾದ ಲೋಕಪ್ಪ ಅವರು 46 ಜನರಿಗೆ ಜಾಮೀನು ನೀಡಿದ್ದಾರೆ.
ಆದರೆ ಕೊಲೆ ಯತ್ನ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಇವರಿಗೆ ಜಾಮೀನು ಸಿಗಬೇಕಾದ್ದರಿಂದ ಜೈಲಿನಿಂದ ಇನ್ನೂ ಬಿಡುಗಡೆಯಾಗಿಲ್ಲ.
46 ಜನ ಆರೋಪಿಗಳ ಪೈಕಿ 20 ಮಹಿಳೆಯರು ಮೈಸೂರಿನ ಕೇಂದ್ರ ಕಾರಾಗೃಹದಲ್ಲಿದ್ದಾರೆ. 26 ಚಾಮರಾಜನಗರದ ಜೈಲಿನಲ್ಲಿದ್ದಾರೆ. ಇವರ ಪರ ವಕೀಲ ಶಶಿಬಿಂಬ ಅವರು ಕೊಳ್ಳೇಗಾಲದ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿ ವಾದ ಮಂಡಿಸಿದ್ದರು. ಏಪ್ರಿಲ್ 26ರ ಮತಗಟ್ಟೆ ಧ್ವಂಸ ಪ್ರಕರಣ ಸಂಬಂಧ ಮತಗಟ್ಟೆ ಅಧಿಕಾರಿ ಬಸವಣ್ಣ ಅವರು ಇವಿಎಂ ನಾಶ, ಹಲ್ಲೆ ಮತ್ತು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಗ್ರಾಮಸ್ಥರ ವಿರುದ್ಧ ದೂರು ದಾಖಲಿಸಿದ್ದರು. ತಹಸೀಲ್ದಾರ್ ಗುರುಪ್ರಸಾದ್ ಅವರು, 200ರಿಂದ 250 ಮಂದಿ ಅಕ್ರಮವಾಗಿ ಗುಂಪುಗೂಡಿ ಗಲಭೆ ಎಬ್ಬಿಸಿರುವ ಬಗ್ಗೆ ದೂರು ನೀಡಿದ್ದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…