Andolana originals

ಕೂಲಿಗೆ ಮರಳಿದ ಇಂಡಿಗನತ್ತ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮಸ್ಥರು ಬುಧವಾರ, ನರೇಗಾ ಯೋಜನೆಯಡಿ ಅಭಿವೃದ್ಧಿ ಮಾಡುತ್ತಿರುವ ಕೆರೆಯ ಕೂಲಿ ಕೆಲಸಕ್ಕೆ ಹೋಗುವುದರ ಮೂಲಕ ಒಂದು ತಿಂಗಳ ಕಾಲ ನಡೆದ ಜಂಜಾಟದಿಂದ ಹೊರ ಬಂದಿದ್ದಾರೆ. ಇಂಡಿಗನತ್ತ ಗ್ರಾಮಕ್ಕೆ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು.

ಆದರೂ ಚುನಾವಣೆ ನಡೆಸಲು ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದರಿಂದ ಕೆಲವು ಅಹಿತಕರ ಘಟನೆಗಳು ನಡೆದು ಅಧಿಕಾರಿಗಳು ಹಾಗೂ ಮೆಂದಾರೆ ಗ್ರಾಮದವರ ಮೇಲೆ ಹಲ್ಲೆ ನಡೆಸಿ ಮತಗಟ್ಟೆ ಧ್ವಂಸ ಮಾಡಲಾಗಿತ್ತು. ಘಟನೆ ಸಂಬಂಧ 200ಕ್ಕೂ ಹೆಚ್ಚು ಜನರ ಮೇಲೆ ಪ್ರತ್ಯೇಕ 3 ಪ್ರಕರಣಗಳು ದಾಖಲಾಗಿದ್ದು, ಮಹಿಳೆಯರು ಹಾಗೂ ಪುರುಷರು ಸೇರಿದಂತೆ 46 ಜನರು ಬಂಧಿತರಾಗಿದ್ದರು.

ನಂತರ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ಬಿ.ವೆಂಕಟೇಶ್ ಹಾಗೂ ಬೇಡಗಂಪಣ ಸಮಾಜದವರ ನೆರವಿನಿಂದ 46 ಜನರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಿಸಲಾಯಿತು. ತಮ್ಮ ಗ್ರಾಮಸ್ಥರ ಮೇಲೆ ಪ್ರಕರಣ ದಾಖಲಾದ ನಂತರ ಕೆಲವರು ಭಯದಿಂದ ತಲೆಮರೆಸಿಕೊಂಡಿದ್ದರು. ಇಂಡಿಗನತ್ತ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು, ಇನ್ನಿತರ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಗ್ರಾಮದವರ ಸಭೆ ನಡೆಸಿ ಧೈರ್ಯ ತುಂಬಿದ್ದರು. ಇದೀಗ ಗ್ರಾಮಸ್ಥರು ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ ಕಹಿ ಘಟನೆಯನ್ನು ಮರೆತು ಮತ್ತೆ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಜಿಲ್ಲಾಡಳಿತಕ್ಕೆ ಕೊಂಚ ನೆಮ್ಮದಿ ತಂದಿದೆ. ಪಿಡಿಒ ಕಿರಣ್ ಮಾತನಾಡಿ, ಇಂಡಿಗನತ್ತ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದು, ಬುಧವಾರದಿಂದ 26 ಮಹಿಳೆಯರು ಹಾಗೂ 10 ಪುರುಷರು ಕೆಲಸಕ್ಕೆ ಬರುತ್ತಿದ್ದಾರೆ. ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾರವರ ಸೂಚನೆಯಂತೆ ಜಾಬ್ ಕಾರ್ಡ್ ಹೊಂದಿರುವ ಗ್ರಾಮಸ್ಥರಿಗೆ ನೂರು ದಿನಗಳ ಕೆಲಸ ಕೊಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ನರೇಗಾ ಕೂಲಿ ಕೆಲಸಕ್ಕೆ ಆಗಮಿಸಿದ್ದವರ ಪೈಕಿ ನ್ಯಾಯಾಂಗ ಬಂಧನದಿಂದ ಜಾಮೀನು ಪಡೆದು ಬಂದಿರುವ ಐವರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸೇರಿದ್ದಾರೆ. ಮೆಂದಾರೆ ಗ್ರಾಮದವರೂ ಇಂಡಿಗನತ್ತ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ಬರುವುದಾಗಿ ತಿಳಿಸಿದ್ದು, ಅವರಿಗೂ ನರೇಗಾದಡಿ ಕೆಲಸ ನೀಡಲಾಗುವುದು. – ಕಿರಣ್, ಪಿಡಿಒ

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago