Andolana originals

ಉದ್ಘಾಟನೆಗೆ ಸಜ್ಜಾಗಿರುವ ಇಂದಿರಾ ಕ್ಯಾಂಟೀನ್

ಪುನೀತ್

ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣ; ಮಾರ್ಚ್ ಅಂತ್ಯಕ್ಕೆ ಉದ್ಘಾಟನೆ ಸಾಧ್ಯತೆ 

ಮಡಿಕೇರಿ: ನಗರದ ಜಿ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಭರದಿಂದ ಸಾಗುತ್ತಿದೆ.

ಕೊಡಗು ಜಿಯಲ್ಲಿ ೨೦೨೩ರ ನವೆಂಬರ್ ತಿಂಗಳಲ್ಲಿ ಹೊಸದಾಗಿ ಮೂರು ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿತ್ತು. ಅದರಂತೆ ಮಡಿಕೇರಿಯಲ್ಲಿ ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಒಂದೆರಡು ವಾರಗಳಲ್ಲಿ ಪೂರ್ಣಗೊಂಡು, ಮಾರ್ಚ್ ಅಂತ್ಯಕ್ಕೆ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. ಸಿ.ಎಂ. ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾಗಿರುವ ಕೇವಲ ಐದು ರೂಪಾಯಿಗೆ ತಿಂಡಿ ಹಾಗೂ ಹತ್ತು ರೂ.ಗೆ ಊಟ ಒದಗಿಸುವ ಇಂದಿರಾ ಕ್ಯಾಂಟೀನ್ ಯೋಜನೆ ಇಡೀ ದೇಶದ ಗಮನ ಸೆಳೆದಿತ್ತು. ಆದರೆ, ಕಳೆದ ಬಿಜೆಪಿ ಸರ್ಕಾರದ ಅವಽಯಲ್ಲಿ ಇಂದಿರಾ ಕ್ಯಾಂಟೀನ್ ರಾಜ್ಯದ ಕೆಲವು ಕಡೆಗಳಲ್ಲಿ ಬಾಗಿಲು ಮುಚ್ಚಿತ್ತು.

೨೦೨೩ರಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯ ಮಂತ್ರಿಯಾದ ಸಿದ್ದರಾಮಯ್ಯ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್‌ಗಳಿಗೆ ಮರುಜೀವ ನೀಡಲು ಯೋಜನೆ ರೂಪಿಸಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದರು. ಇದರ ಫಲವಾಗಿ ಕೊಡಗು ಜಿಯ ಮಡಿಕೇರಿ, ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ನೂತನವಾಗಿ ಇಂದಿರಾ ಕ್ಯಾಂಟೀನ್ ಘೋಷಣೆಯಾಗಿತ್ತು.

ಕಡಿಮೆಯಾದ ಗ್ರಾಹಕರು: ೨೦೧೮ರಲ್ಲಿ ರಾಜ್ಯ ಸರ್ಕಾರ ಮಡಿಕೇರಿ ನಗರದ ಹೊಸ ಖಾಸಗಿ ಬಸ್ ತಂಗುದಾಣದ ಸಮೀಪ ಇಂದಿರಾ ಕ್ಯಾಂಟೀನ್ ನಿರ್ಮಿಸಿ ಉದ್ಘಾಟನೆ ಮಾಡಿತ್ತು. ಜಿಡಳಿತ, ನಗರಸಭೆ ಹಾಗೂ ರಾಜ್ಯ ಸರ್ಕಾರ ಯಾವುದೇ ದೂರದೃಷ್ಟಿಯಿಲ್ಲದೆ ಜನ ಜಂಗುಳಿ ಇಲ್ಲದ ಪ್ರದೇಶವಾಗಿದ್ದ ಹೊಸ ಖಾಸಗಿ ಬಸ್ ತಂಗು ದಾಣದ ಸಮೀಪ ನಿರ್ಮಿಸಿದ್ದ ಇಂದಿರಾ ಕ್ಯಾಂಟೀನ್‌ಗೆ ಆರಂಭದಲ್ಲಿ ಗ್ರಾಹಕರು ಬರುತ್ತಿದ್ದರು. ಆದರೆ ವರ್ಷಗಳು ಕಳೆದಂತೆ ಆಹಾರದ ಗುಣಮಟ್ಟ ಬದಲಾದಂತೆ ಹಾಗೂ ಜನಜಂಗುಳಿ ಇಲ್ಲದ ಪ್ರದೇಶವಾದ್ದರಿಂದ ಇಂದಿರಾ ಕ್ಯಾಂಟೀನ್ ಗ್ರಾಹಕರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡಿತು.

ಈ ಹಿಂದೆ ಕಾಲೇಜಿನ ವಿದ್ಯಾರ್ಥಿಗಳು ಕೂಡ ಬೆಳಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟ ಸೇವಿಸಲು ಬರುತ್ತಿದ್ದರು. ಆದರೆ, ಸದ್ಯ ವಿದ್ಯಾರ್ಥಿಗಳು ಕೂಡ ಇಂದಿರಾ ಕ್ಯಾಂಟೀನ್‌ಗೆ ಬರುತ್ತಿಲ್ಲ. ಜನಜಂಗುಳಿ ಇಲ್ಲದ ಪ್ರದೇಶದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಿದ್ದಕ್ಕೆ ಆರಂಭದಿಂದಲೂ ಆಕ್ರೋಶ ವ್ಯಕ್ತವಾಗಿತ್ತು. ಜಿ ಆಸ್ಪತ್ರೆ ಸಮೀಪ ಇಂದಿರಾ ಕ್ಯಾಂಟೀನ್ ನಿರ್ಮಿಸಬೇಕೆಂದು ಒತ್ತಾಯ ಕೇಳಿ ಬಂದಿತ್ತು.

ರೋಗಿಗಳಿಗೆ ಪ್ರಯೋಜನ: ಜಿ ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಚಿಕಿತ್ಸೆ ಪಡೆಯಲು ಬರುವ ಬಹುತೇಕರು ಹೋಟೆಲ್‌ಗಳಲ್ಲಿ ದುಬಾರಿ ಬೆಲೆ ನೀಡಿ ಬೆಳಗಿನ ಉಪಾಹಾರ ಹಾಗೂ ಮಧ್ಯಾಹ್ನ ಊಟ ಸೇವಿಸುವುದು ಮಾಮೂಲಿ. ಆಸ್ಪತ್ರೆ ಸಮೀಪದಲ್ಲಿರುವ ಹೋಟೆಲ್‌ಗಳಲ್ಲಿ ಬೆಲೆ ಕೂಡ ವರ್ಷದಿಂದ ವರ್ಷಕ್ಕೆ ಏರಿಕೆ ಕಾಣುತ್ತಿದೆ. ಜಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರು ಬಹುತೇಕ ಕೂಲಿ ಕಾರ್ಮಿಕರು ಮತ್ತು ಬಡವರಾಗಿzರೆ. ಅದಲ್ಲದೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವವರೂ ಊಟಕ್ಕಾಗಿ ಹೋಟೆಲ್ ಮೊರೆ ಹೋಗುತ್ತಿzರೆ. ಆಸ್ಪತ್ರೆಯ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಳ್ಳುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು, ಆಟೋ ಚಾಲಕರು, ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಅನೇಕರಿಗೆ ಪ್ರಯೋಜನವಾಗಲಿದೆ.

ಹಳೇ ಕ್ಯಾಂಟಿನ್‌ಗೆ ಕಡಿಮೆ ಗ್ರಾಹಕರು!

ಮಡಿಕೇರಿ: ನಗರದ ಹೊಸ ಖಾಸಗಿ ಬಸ್ತಂಗುದಾಣದ ಸಮೀಪವಿರುವ ಇಂದಿರಾ ಕ್ಯಾಂಟೀನ್‌ಗೆ ದಿನದಿಂದ ದಿನಕ್ಕೆ ಗ್ರಾಹಕರ ಸಂಖ್ಯೆ ಕಡಿಮೆಯಾಗುತ್ತಿದೆ. ಗ್ರಾಹಕರಿಲ್ಲದ ಹಳೆಯ ಇಂದಿರಾ ಕ್ಯಾಂಟೀನ್ ಮುಚ್ಚುವ ಸಾಧ್ಯತೆ ಇದೆ. ಹೊಸದಾಗಿ ಆರಂಭಗೊಳ್ಳಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಕಿಚನ್ ವ್ಯವಸ್ಥೆ ಇಲ್ಲ. ಹಳೆಯ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ತಯಾರಿಸಿ ಜಿ ಆಸ್ಪತ್ರೆಯ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಆಹಾರ ಸರಬರಾಜು ಮಾಡಲು ಯೋಜನೆ ರೂಪಿಸಲಾಗಿದೆ. ಹಳೆಯ ಇಂದಿರಾ ಕ್ಯಾಂಟೀನ್ ಕೇವಲ ಅಡುಗೆಗಾಗಿ ಮಾತ್ರ ಬಳಸುವ ಸಾಧ್ಯತೆಗಳಿವೆ.

” ಬಡಜನರಿಗೆ ಹಾಗೂ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸುವ ರೋಗಿಗಳಿಗೆ ಪ್ರಯೋಜನವಾಗಲಿ ಎಂಬ ಉದ್ದೇಶದಿಂದ  ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗುತ್ತಿದ್ದು, ಶೀಘ್ರದಲ್ಲಿ ಉದ್ಘಾಟನೆ ಮಾಡುತ್ತೇವೆ.”

ಡಾ.ಮಂಥರ್ ಗೌಡ, ಶಾಸಕರು

ಆಂದೋಲನ ಡೆಸ್ಕ್

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

4 hours ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

6 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

7 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

7 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

8 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

8 hours ago