ಓದುಗರ ಪತ್ರ
ವಿಶ್ವವಿಖ್ಯಾತ ಮೈಸೂರು ದಸರಾಗೂ ಕುಸ್ತಿ ಪಂದ್ಯಾವಳಿಗೂ ಅವಿನಾಭಾವ ಸಂಬಂಧ ಇದೆ. ಪ್ರತಿಬಾರಿಯ ದಸರಾ ಮಹೋತ್ಸವದಲ್ಲಿ ಕುಸ್ತಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗುತ್ತದೆ.
ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆಸಿಕೊಂಡು ಬರುತ್ತಿರುವ ಈ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಕುಸ್ತಿಪಟುಗಳು ಬಂದು ಭಾಗವಹಿಸುತ್ತಾರೆ. ಆದರೆ ಕುಸ್ತಿ ವೀಕ್ಷಣೆಗೆ ಬರುವ ಪ್ರೇಕ್ಷಕರು ಕುಳಿತುಕೊಳ್ಳುವ ಗ್ಯಾಲರಿಗೆ ಮೇಲ್ಬಾವಣಿ ಇಲ್ಲದ ಪರಿಣಾಮ ವೀಕ್ಷಕರು ಬಿಸಿಲು-ಮಳೆಯಲ್ಲಿಯೇ ಕುಳಿತು ಕುಸ್ತಿ ವೀಕ್ಷಿಸಬೇಕಿದೆ.
ದಸರಾ ಕುಸ್ತಿ ಪಂದ್ಯಾವಳಿಯಲ್ಲಿ ನಾಡ ಕುಸ್ತಿ, ಮಹಿಳಾ ಕುಸ್ತಿ ಹಾಗೂ ಕಿಶೋರ್ ಪ್ರಶಸ್ತಿ, ಕುಮಾರ್ ಪ್ರಶಸ್ತಿ, ಕೇಸರಿ ಪ್ರಶಸ್ತಿ, ಕಂಠೀರವ ಪ್ರಶಸ್ತಿ ಎಂಬ ವಿವಿಧ ಕುಸ್ತಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆ. ಈ ಕುಸ್ತಿ ಪಂದ್ಯಾವಳಿಗಳನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸುತ್ತಾರೆ. ಆದರೆ ಇಲ್ಲಿ ಪ್ರೇಕ್ಷಕರಿಗೆ ಆರಾಮವಾಗಿ ಕುಳಿತು ವೀಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂಬುದೇ ಬೇಸರದ ಸಂಗತಿ.
ಈ ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿಗೆ ಮೇಲ್ವಾವಣಿ ಅಳವಡಿಸುವಂತೆ ಕಳೆದ 2 ವರ್ಷಗಳಿಂದ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದರೂ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸುತ್ತಿಲ್ಲ. ಆದ್ದರಿಂದ ಜಿಲ್ಲಾಡಳಿತ ಈ ಬಾರಿಯಾದರೂ ಈ ಕುಸ್ತಿ ಕ್ರೀಡಾಂಗಣದ ವೀಕ್ಷಕರ ಗ್ಯಾಲರಿಗೆ ಮೇಲ್ವಾವಣಿ ಅಳವಡಿಸಬೇಕಿದೆ.
– ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು,
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…