೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ
ಮೈಸೂರು: ಭವಿಷ್ಯದಲ್ಲಿ ರಿಂಗ್ ರಸ್ತೆ ಮೇಲೆ ಉಂಟಾಗಬಹುದಾದ ಟ್ರಾಫಿಕ್ ಒತ್ತಡ ತಗ್ಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಪೊಲೀಸ್ ಇಲಾಖೆಯು ಹೊರ ವರ್ತುಲ ರಸ್ತೆಯ ೩೫ ಕಡೆಗಳಲ್ಲಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಲಾಗುತ್ತಿದೆ.
ಮೈಸೂರು ನಗರ ಪೊಲೀಸರು ೪೨.೫ ಕಿ.ಮೀ.ಉದ್ದದ ಔಟರ್ ರಿಂಗ್ ರೋಡ್‌ನಲ್ಲಿ ಈಗಾಗಲೇ ಹಲವು ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಿದ್ದಾರೆ. ಇದೀಗ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಇದರಿಂದ ಸಣ್ಣ ಪುಟ್ಟ ಅಪಘಾತಗಳು ಸಂಭವಿಸುತ್ತಿವೆ. ಹಾಗಾಗಿ ವರ್ಷದ ಹಿಂದೆಯೇ ರಿಂಗ್ ರಸ್ತೆಯಲ್ಲಿ ಹೆಚ್ಚುವರಿ ಸಿಗ್ನಲ್ ಲೈಟ್‌ಗಳನ್ನು ಎಲ್ಲಿ ಅಳವಡಿಸಬೇಕೆಂಬುದರ ಕುರಿತು ಸಮೀಕ್ಷೆ ನಡೆಸಿ ಹೆಚ್ಚುವರಿಯಾಗಿ ೩೫ ಸ್ಥಳಗಳನ್ನು ಗುರುತಿಸಲಾಗಿದೆ.
ರಸ್ತೆ ವಿಭಜಕ (ಮೀಡಿಯನ್) ಇಲ್ಲದಿದ್ದರೆ ಸಿಗ್ನಲ್ ಲೈಟ್ ಅನ್ನು ಆಪರೇಟ್ ಮಾಡಲು ಸಾಧ್ಯವಿಲ್ಲ. ಕೆಂಪು ಸಿಗ್ನಲ್ ಬರುತ್ತಿದ್ದಂತೆ ವಾಹನಗಳನ್ನು ವ್ಯವಸ್ಥಿತವಾಗಿ ನಿಲ್ಲಿಸಲು ಆಗುವುದಿಲ್ಲ. ಹಾಗಾಗಿ ಸಿಗ್ನಲ್ ಲೈಟ್ ಅಳವಡಿಸುವ ರಸ್ತೆಗಳಲ್ಲಿ ಮೀಡಿಯನ್‌ಗಳನ್ನು ನಿರ್ಮಿಸಲಾಗುತ್ತಿದೆ. ಅಲ್ಲದೇ ಇಂತಹ ಸ್ಥಳದಲ್ಲಿ ರಸ್ತೆಯ ಮೇಲೆ ಸಮತಟ್ಟುಗೊಳಿಸುವ(ಆಸ್ಪಾಟ್ಲಿಂಗ್) ಕಾಮಗಾರಿ ಕೈಗೊಳ್ಳಲಾಗಿದೆ.
ಕೆಲವೆಡೆ ರಸ್ತೆಗಳು ಕಿರಿದಾಗಿದ್ದು ಅಗಲ ಮಾಡಲಾಗುತ್ತಿದೆ. ಅಲ್ಲದೇ ಈಗಾಗಲೇ ಗುರುತಿಸಿದ ೩೫ ಸ್ಥಳದಲ್ಲಿ ಸೌರ ವಿದ್ಯುತ್ ನಿಮಿತ್ತ ಸಾಮಾನ್ಯ ವಿದ್ಯುತ್‌ನಿಂದ ಕಾರ್ಯನಿರ್ವಹಿಸುವ ಹೈಬ್ರಿಡ್ ಸಿಗ್ನಲ್ ಲೈಟ್ ಅಳವಡಿಸಲಾಗುತ್ತಿದೆ. ಮುಂಬೈ ಹೊಸದಿಲ್ಲಿಯಂತಹ ದೊಡ್ಡ ನಗರಗಳಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ, ಆಮ್ಲಜನಕದ ಕೊರತೆ ಸಂಚಾರ ದಟ್ಟಣೆಯಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನ ಮೈಸೂರಿನಂತಹ ನಗರಗಳನ್ನು ಆಯ್ಕೆ ಮಾಡಿಕೊಂಡು ಬಂದು ವಾಸಿಸಲು ಆರಂಭಿಸಿದ್ದಾರೆ. ಅಂತೆಯೇ ಮೈಸೂರು ಈಗ ದೇಶದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಪರಿವರ್ತನೆಗೊಂಡಿದೆ. ಒಂದೂವರೆ ವರ್ಷದಲ್ಲಿ ನಗರದಲ್ಲಿ ಟ್ರಾಫಿಕ್ ದ್ವಿಗುಣಗೊಂಡಿದೆ. ಮುಂದಿನ ೫ ವರ್ಷಗಳಲ್ಲಿ ಇನ್ನಷ್ಟು ಹೆಚ್ಚಾಗಲಿದೆ.
ರಿಂಗ್ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಈ ದೃಷ್ಟಿಯಿಂದ ನಗರ ಹೊರವಲಯದಲ್ಲಿ ರಸ್ತೆ ಸುರಕ್ಷತೆ ಹೆಚ್ಚಿಸುವ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಖಾತ್ರಿಪಡಿಸುವ ಸಮಗ್ರ ಸಂಚಾರ ನಿರ್ವಹಣಾ ಯೋಜನೆಯ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವರ್ತುಲ ರಸ್ತೆಯಲ್ಲಿ ವಾಹನ ಸಾಂದ್ರತೆ, ಅಪಘಾತಗಳ ಹೆಚ್ಚಳ, ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಹಾಗಾಗಿ, ಪೊಲೀಸರು ವಾಹನ ಸಂಚಾರವನ್ನು ಸುಗಮಗೊಳಿಸಿ ನಿಯಮ ಉಲ್ಲಂಘನೆಗಳನ್ನು ತಡೆಯುವ ನಿಟ್ಟಿನಲ್ಲಿ ಈ ಯೋಜನೆ ಆರಂಭಿಸಲಾಗಿದೆ.
” ಒಂದೂವರೆ ತಿಂಗಳ ಹಿಂದೆಯೇ ಸಿಗ್ನಲ್ ಲೈಟ್ ಅಳವಡಿಸುವ ಕೆಲಸ ಆರಂಭವಾಗಿದೆ. ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ.”
– ಶಿವಶಂಕರಪ್ಪ, ಸಂಚಾರ ವಿಭಾಗದ ಎಸಿಪಿ
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…