Andolana originals

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ

ಮೈಸೂರು: ಭವಿಷ್ಯದಲ್ಲಿ ರಿಂಗ್ ರಸ್ತೆ ಮೇಲೆ ಉಂಟಾಗಬಹುದಾದ ಟ್ರಾಫಿಕ್ ಒತ್ತಡ ತಗ್ಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಪೊಲೀಸ್ ಇಲಾಖೆಯು ಹೊರ ವರ್ತುಲ ರಸ್ತೆಯ ೩೫ ಕಡೆಗಳಲ್ಲಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಲಾಗುತ್ತಿದೆ.

ಮೈಸೂರು ನಗರ ಪೊಲೀಸರು ೪೨.೫ ಕಿ.ಮೀ.ಉದ್ದದ ಔಟರ್ ರಿಂಗ್ ರೋಡ್‌ನಲ್ಲಿ ಈಗಾಗಲೇ ಹಲವು ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಿದ್ದಾರೆ. ಇದೀಗ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಇದರಿಂದ ಸಣ್ಣ ಪುಟ್ಟ ಅಪಘಾತಗಳು ಸಂಭವಿಸುತ್ತಿವೆ. ಹಾಗಾಗಿ ವರ್ಷದ ಹಿಂದೆಯೇ ರಿಂಗ್ ರಸ್ತೆಯಲ್ಲಿ ಹೆಚ್ಚುವರಿ ಸಿಗ್ನಲ್ ಲೈಟ್‌ಗಳನ್ನು ಎಲ್ಲಿ ಅಳವಡಿಸಬೇಕೆಂಬುದರ ಕುರಿತು ಸಮೀಕ್ಷೆ ನಡೆಸಿ ಹೆಚ್ಚುವರಿಯಾಗಿ ೩೫ ಸ್ಥಳಗಳನ್ನು ಗುರುತಿಸಲಾಗಿದೆ.

ರಸ್ತೆ ವಿಭಜಕ (ಮೀಡಿಯನ್) ಇಲ್ಲದಿದ್ದರೆ ಸಿಗ್ನಲ್ ಲೈಟ್ ಅನ್ನು ಆಪರೇಟ್ ಮಾಡಲು ಸಾಧ್ಯವಿಲ್ಲ. ಕೆಂಪು ಸಿಗ್ನಲ್ ಬರುತ್ತಿದ್ದಂತೆ ವಾಹನಗಳನ್ನು ವ್ಯವಸ್ಥಿತವಾಗಿ ನಿಲ್ಲಿಸಲು ಆಗುವುದಿಲ್ಲ. ಹಾಗಾಗಿ ಸಿಗ್ನಲ್ ಲೈಟ್ ಅಳವಡಿಸುವ ರಸ್ತೆಗಳಲ್ಲಿ ಮೀಡಿಯನ್‌ಗಳನ್ನು ನಿರ್ಮಿಸಲಾಗುತ್ತಿದೆ. ಅಲ್ಲದೇ ಇಂತಹ ಸ್ಥಳದಲ್ಲಿ ರಸ್ತೆಯ ಮೇಲೆ ಸಮತಟ್ಟುಗೊಳಿಸುವ(ಆಸ್ಪಾಟ್ಲಿಂಗ್) ಕಾಮಗಾರಿ ಕೈಗೊಳ್ಳಲಾಗಿದೆ.

ಕೆಲವೆಡೆ ರಸ್ತೆಗಳು ಕಿರಿದಾಗಿದ್ದು ಅಗಲ ಮಾಡಲಾಗುತ್ತಿದೆ. ಅಲ್ಲದೇ ಈಗಾಗಲೇ ಗುರುತಿಸಿದ ೩೫ ಸ್ಥಳದಲ್ಲಿ ಸೌರ ವಿದ್ಯುತ್ ನಿಮಿತ್ತ ಸಾಮಾನ್ಯ ವಿದ್ಯುತ್‌ನಿಂದ ಕಾರ್ಯನಿರ್ವಹಿಸುವ ಹೈಬ್ರಿಡ್ ಸಿಗ್ನಲ್ ಲೈಟ್ ಅಳವಡಿಸಲಾಗುತ್ತಿದೆ. ಮುಂಬೈ ಹೊಸದಿಲ್ಲಿಯಂತಹ ದೊಡ್ಡ ನಗರಗಳಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ, ಆಮ್ಲಜನಕದ ಕೊರತೆ ಸಂಚಾರ  ದಟ್ಟಣೆಯಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನ ಮೈಸೂರಿನಂತಹ ನಗರಗಳನ್ನು ಆಯ್ಕೆ ಮಾಡಿಕೊಂಡು ಬಂದು ವಾಸಿಸಲು ಆರಂಭಿಸಿದ್ದಾರೆ. ಅಂತೆಯೇ ಮೈಸೂರು ಈಗ ದೇಶದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಪರಿವರ್ತನೆಗೊಂಡಿದೆ. ಒಂದೂವರೆ ವರ್ಷದಲ್ಲಿ ನಗರದಲ್ಲಿ ಟ್ರಾಫಿಕ್ ದ್ವಿಗುಣಗೊಂಡಿದೆ. ಮುಂದಿನ ೫ ವರ್ಷಗಳಲ್ಲಿ ಇನ್ನಷ್ಟು ಹೆಚ್ಚಾಗಲಿದೆ.

ರಿಂಗ್ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಈ ದೃಷ್ಟಿಯಿಂದ ನಗರ ಹೊರವಲಯದಲ್ಲಿ ರಸ್ತೆ ಸುರಕ್ಷತೆ ಹೆಚ್ಚಿಸುವ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಖಾತ್ರಿಪಡಿಸುವ ಸಮಗ್ರ ಸಂಚಾರ ನಿರ್ವಹಣಾ ಯೋಜನೆಯ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವರ್ತುಲ ರಸ್ತೆಯಲ್ಲಿ ವಾಹನ ಸಾಂದ್ರತೆ, ಅಪಘಾತಗಳ ಹೆಚ್ಚಳ, ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಹಾಗಾಗಿ, ಪೊಲೀಸರು ವಾಹನ ಸಂಚಾರವನ್ನು ಸುಗಮಗೊಳಿಸಿ ನಿಯಮ ಉಲ್ಲಂಘನೆಗಳನ್ನು ತಡೆಯುವ ನಿಟ್ಟಿನಲ್ಲಿ ಈ ಯೋಜನೆ ಆರಂಭಿಸಲಾಗಿದೆ.

” ಒಂದೂವರೆ ತಿಂಗಳ ಹಿಂದೆಯೇ ಸಿಗ್ನಲ್ ಲೈಟ್ ಅಳವಡಿಸುವ ಕೆಲಸ ಆರಂಭವಾಗಿದೆ. ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ.”

 – ಶಿವಶಂಕರಪ್ಪ, ಸಂಚಾರ ವಿಭಾಗದ ಎಸಿಪಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

2 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago