Andolana originals

ಅ.೧೦,೧೧ರಂದು ಅಂತರ-ಕೊಡವ ಕುಟುಂಬಗಳ ಶೂಟಿಂಗ್ ಸ್ಪರ್ಧೆ

ನವೀನ್ ಡಿಸೋಜ

೨೦೫ ಕುಟುಂಬಗಳ ೭೫೮ ಸ್ಪರ್ಧಿಗಳು ಭಾಗಿ

ಕೊಡವ ಕುಟುಂಬಗಳ ಶೌರ್ಯ, ಕ್ರೀಡಾ ಪರಂಪರೆಗೆ ವೇದಿಕೆ 

ಮಡಿಕೇರಿ: ಕೊಡವ ಸಮುದಾಯದ ವಿಶಿಷ್ಟ ಕ್ರೀಡಾ ಪರಂಪರೆಯಾದ ತೆಂಗಿನಕಾಯಿಗೆ ಗುಂಡು ಹೊಡೆಯುವ ಶೂಟಿಂಗ್ ಸ್ಪರ್ಧೆಗೆ ಪೊನ್ನಂಪೇಟೆ ಮತ್ತೊಮ್ಮೆ ಸಾಕ್ಷಿಯಾಗಲಿದೆ.

ಆಲೆಮಾಡ ಕುಟುಂಬದ ವತಿಯಿಂದ ಅ.೧೦ ಮತ್ತು ೧೧ರಂದು ಪೊನ್ನಂಪೇಟೆಯ ಕೆಪಿಎಸ್ ಮೈದಾನದಲ್ಲಿ ಅಂತರ-ಕೊಡವ ಕುಟುಂಬಗಳ ಶೂಟಿಂಗ್ ಸ್ಪರ್ಧೆ ಆಯೋಜಿಸಲಾಗಿದ್ದು, ಜಿಲ್ಲೆಯ ವಿವಿಧ ಭಾಗಗಳ ೨೦೫ ಕುಟುಂಬಗಳ ೭೫೮ ಸ್ಪರ್ಧಿಗಳು ಭಾಗವಹಿಸಲಿದ್ದಾರೆ.

ಕೊಡವ ಮಾರ್ಕ್ಸ್‌ಮನ್  ಅಸೋಸಿಯೇಷನ್ ಆಶ್ರಯದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ೧೨ ಬೋರ್, ೨೨ ರೈಫಲ್ ಹಾಗೂ ಏರ್‌ಗನ್ ವಿಭಾಗಗಳಿದ್ದು, ಒಟ್ಟು ೩೭೯ ತಂಡಗಳು ಕಣಕ್ಕಿಳಿಯಲಿವೆ. ಪ್ರತಿಯೊಂದು ವಿಭಾಗದಲ್ಲೂ ನಿಖರ ಗುರಿ, ಏಕಾಗ್ರತೆ ಹಾಗೂ ಕ್ಷಿಪ್ರ ನಿರ್ಧಾರ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಪ್ರತಿ ವಿಭಾಗದ ಅಗ್ರ ಸ್ಪರ್ಧಿಗಳು  ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿದ್ದಾರೆ.

ಕೊಡವರ ಸಾಂಪ್ರದಾಯಿಕ ಶೂಟಿಂಗ್ ಕ್ರೀಡೆ ಕೇವಲ ಸ್ಪರ್ಧೆಯಾಗಿ ಉಳಿಯದೆ, ಸಮುದಾಯದ ಶೌರ್ಯ, ಸಾಹಸ ಹಾಗೂ ಪರಂಪರೆಯ ಪ್ರತೀಕವಾಗಿ ಗುರುತಿಸಿಕೊಂಡಿದೆ. ಇಂತಹ ಕ್ರೀಡಾಕೂಟಗಳು ಯುವ ಪೀಳಿಗೆಯಲ್ಲಿ ಕೊಡವ ಸಂಸ್ಕೃತಿ ಮತ್ತು ಕ್ರೀಡಾ ಪರಂಪರೆಯ ಬಗ್ಗೆ ಆಸಕ್ತಿ ಮೂಡಿಸುವುದರ ಜೊತೆಗೆ ಕುಟುಂಬಗಳ ನಡುವೆ ಬಾಂಧವ್ಯ ಬೆಸೆಯುವ ವೇದಿಕೆಯಾಗುತ್ತಿವೆ.

ಸ್ಪರ್ಧೆಯ ವಿಜೇತ ತಂಡಕ್ಕೆ ೬೦ ಸಾವಿರ ರೂ., ದ್ವಿತೀಯ ೫೦ ಸಾವಿರ ರೂ., ತೃತೀಯ ೪೦ ಸಾವಿರ ರೂ., ನಾಲ್ಕನೇ ೩೦ ಸಾವಿರ ರೂ. ಹಾಗೂ ಐದನೇ ಸ್ಥಾನಕ್ಕೆ ೨೦ ಸಾವಿರ ರೂ. ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಏರ್‌ಗನ್ ವಿಭಾಗದಲ್ಲಿ ಪ್ರಥಮ ಸ್ಥಾನಕ್ಕೆ ೧೦ ಸಾವಿರ ರೂ., ದ್ವಿತೀಯ ೭,೫೦೦ರೂ. ಹಾಗೂ ತೃತೀಯ ಸ್ಥಾನಕ್ಕೆ ೫ ಸಾವಿರ ರೂ. ನಗದು ಬಹುಮಾನ ನೀಡಲಾಗುತ್ತದೆ. ಅ.೧೦ರಂದು ಬೆಳಿಗ್ಗೆ ೯ ಗಂಟೆಗೆ ಕ್ರೀಡಾಕೂಟ ಆರಂಭವಾಗಲಿದ್ದು, ಬೆಳಿಗ್ಗೆ ೧೧ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ.

ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಐವರು ಸಾಧಕರನ್ನು ಸನ್ಮಾನಿಸಲಾಗುತ್ತದೆ. ಅ.೧೧ರಂದು ಸಂಜೆ ೫ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮಾಜಿ ಭಾರತೀಯ ಹಾಕಿ ಆಟಗಾರ ಹಾಗೂ ಒಲಿಂಪಿಯನ್ ಚೆಪ್ಪುಡೀರ ಎಸ್.ಪೂಣಚ್ಚ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.

” ಕೊಡವರ ಪಾಲಿಗೆ ತೋಕ್ (ಬಂದೂಕು) ಕೇವಲ ಒಂದು ಆಯುಧವಲ್ಲ.ಅದು ತಲೆತಲಾಂತರಗಳಿಂದ ಹರಿದು ಬಂದಿರುವ ಸಂಪ್ರದಾಯ, ಸಂಸ್ಕೃತಿ, ಕುಟುಂಬ ಪರಂಪರೆ ಮತ್ತು ಜೀವನ ಪದ್ಧತಿಯೊಂದಿಗೆ ಅವಿನಾಭಾವವಾಗಿ ಬೆಸೆದುಕೊಂಡಿರುವ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾಗಿದೆ. ತೋಕ್ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆ ಮೂಲಕ ಕೊಡವ ಕುಟುಂಬಗಳ ನಡುವಿನ ಬಾಂಧವ್ಯವನ್ನುಸಂಭ್ರಮಿಸುವ ತೋಕ್ ನಮ್ಮೆಯಲ್ಲಿ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು.”

-ಆಲೆಮಾಡ ಕೀರ್ತನ್ ತಮ್ಮಯ್ಯ, ಆಯೋಜನಾ ಸಮಿತಿ ನಿರ್ದೇಶಕ

 

 

ಆಂದೋಲನ ಡೆಸ್ಕ್

Recent Posts

ರಷ್ಯಾದಲ್ಲಿ ಪ್ಲೇಗ್ ಪತ್ತೆಯಾಗಿಲ್ಲ: WHO ಸ್ಪಷ್ಟನೆ!

ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…

6 hours ago

ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್!

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…

6 hours ago

ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂ: ಮಾಜಿ ಸಚಿವ ಎನ್.ಮಹೇಶ್ ಭೇಟಿ, ಸಾಂತ್ವನ

ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…

7 hours ago

ಮೈಸೂರು ದಸರಾ: ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…

7 hours ago

ಓದುಗರ ಪತ್ರ: ‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ

‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…

7 hours ago

ಓದುಗರ ಪತ್ರ: ನೀಲಿಯೆಂದರೇನು?!

ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…

7 hours ago