Andolana originals

ಗಣೇಶ್ ಪ್ರಸಾದ್‌ಗೆ ಒಲಿಯುವುದೇ ಮಂತ್ರಿ ಭಾಗ್ಯ?

ಹಳೇ ಮೈಸೂರು ಭಾಗದ ಏಕೈಕ ಲಿಂಗಾಯತ ಶಾಸಕನಿಗೆ ಸಚಿವ ಸ್ಥಾನದ ನಿರೀಕ್ಷೆ 

ಗುಂಡ್ಲುಪೇಟೆ: ರಾಜ್ಯ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾದಲ್ಲಿ ಹಳೇ ಮೈಸೂರು ಭಾಗದ ಏಕೈಕ ವೀರಶೈವ ಲಿಂಗಾಯತ ಸಮುದಾಯದವರಾದ, ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಒತ್ತಾಯ ಹಳೇ ಮೈಸೂರು ಭಾಗದ ವೀರಶೈವ ಲಿಂಗಾಯತ ಸಮುದಾಯದಿಂದ ಕೇಳಿಬಂದಿದೆ.

ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಗಣೇಶ್ ಪ್ರಸಾದ್ 36,675 ಮತಗಳ ಅಂತರದಿಂದ ಗೆದ್ದಿದ್ದಾರೆ. ಗುಂಡ್ಲುಪೇಟೆ ಕ್ಷೇತ್ರದ ಶಾಸಕರಾಗಿ, ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ವೈಯಕ್ತಿಕವಾಗಿ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಗಣೇಶ್ ಪ್ರಭಾವಿ ನಾಯಕನಾಗಿ ಗುರುತಿಸಿಕೊಳ್ಳುತ್ತಿದ್ದು, ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರಾಧಾನ್ಯತೆ ನೀಡಿ ಸಚಿವ ಸ್ಥಾನ ನೀಡಬೇಕೆಂದು ಸಮುದಾಯದವರು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ: ಬಿಹಾರ ಫಲಿತಾಂಶವು ನಿತೀಶ್ ಕುಮಾರ್ ಚಾಣಾಕ್ಷತೆಯ ಕೊಡುಗೆ

ಶಾಸಕ ಗಣೇಶ್ ಪ್ರಸಾದ್ ತಂದೆ ಎಚ್.ಎಸ್. ಮಹದೇವ ಪ್ರಸಾದ್ ಅವರು ಐದು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ, ಸಿದ್ದರಾಮಯ್ಯನವರ ಪರಮಾಪ್ತರಾಗಿದ್ದರು. ತಾಯಿ ಡಾ.ಗೀತಾ ಮಹದೇವಪ್ರಸಾದ್ ಪತಿಯ ನಿಧನದ ನಂತರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಸಚಿವರಾಗಿದ್ದರು. ಗಣೇಶ್ ಪ್ರಸಾದ್ ಈಗ ಸಹಕಾರ ಕ್ಷೇತ್ರಕ್ಕೂ ಕಾಲಿರಿಸಿದ್ದು, ಮೈಸೂರು- ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಚುನಾವಣೆಯಲ್ಲಿ ಮತ ಪಡೆದು ಗೆಲುವು ಸಾಧಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ಅವರಿಗೆ ಸಚಿವ ಸ್ಥಾನ ಸಿಕ್ಕರೆ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎನ್ನುವುದು ಮುಖಂಡರ ಅನಿಸಿಕೆಯಾಗಿದೆ.

” ಜನರ ಪ್ರೀತಿ ಸಂಪಾದಿಸಿ, ಅಭಿವೃದ್ಧಿಪರಚಿಂತನೆ ಮಾಡುವ ಗಣೇಶ್ ಪ್ರಸಾದ್‌ಗೆ ಕಾಂಗ್ರೆಸ್ ಹೈಕಮಾಂಡ್‌ನವರು, ರಾಜ್ಯ ನಾಯಕರು ಸಚಿವ ಸ್ಥಾನ ನೀಡಬೇಕೆಂದು ಅವರ ಅಭಿಮಾನಿಗಳು ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ ಪಾಳೆಯದಲ್ಲಿ ಗುರುತಿಸಿ ಕೊಂಡು ಅವರಿಗೆ ಆತ್ಮೀಯರಾಗಿದ್ದ ದಿ.ಎಚ್. ಎಂ.ಮಹದೇವಪ್ರಸಾದ್ ಕುಟುಂಬದ ಮೇಲೆ ಜನರ ಅಭಿಮಾನ, ಪ್ರೀತಿ ಈಗಲೂ ಇದೆ. ಆದ್ದರಿಂದ ಮಹದೇವ ಪ್ರಸಾದ್ ಮಗನಿಗೂ ಮಂತ್ರಿ ಸ್ಥಾನ ನೀಡಬೇಕು. ಸಿದ್ದರಾಮಯ್ಯನವರು ಹಳೇ ಮೈಸೂರು ಭಾಗದ ವೀರಶೈವ ಲಿಂಗಾಯತ ಶಾಸಕನ ಕೈ ಹಿಡಿದು ಮಂತ್ರಿಸ್ಥಾನ ನೀಡಬೇಕು ಎಂಬುದು ತಾಲ್ಲೂಕಿನ ಜನರ ಆಶಯವೂ ಆಗಿದೆ.”

–ಮಹೇಂದ್ರ ಹಸಗೂಲಿ

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

5 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

6 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

6 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

6 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

8 hours ago