ಓದುಗರ ಪತ್ರ
ಜೈಲು ಎಂದರೆ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುವ ಮತ್ತು ಪಶ್ಚಾತ್ತಾಪ ಪಡುವ ಸ್ಥಳ, ಅಲ್ಲಿಂದ ಹೊರಬಂದು ವ್ಯಕ್ತಿ ಹೊಸ ಮನುಷ್ಯನಾಗಿ ಬದುಕು ಕಟ್ಟಿಕೊಳ್ಳುತ್ತಾನೆ ಎಂಬ ಭಾವನೆ ಇತ್ತು. ಆದರೆ ಈಗ ಅದು ದೂರಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವರನ್ನು ಅಪಹರಣ ಮಾಡಿದ್ದಲ್ಲದೇ ಶೆಡ್‌ವೊಂದರಲ್ಲಿ ಕೂಡಿಹಾಕಿ ಮನಬಂದಂತೆ ಥಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಆತನ ಸಹಚರರು ಜೈಲು ಸೇರಿದ್ದಾರೆ. ಆದರೆ ಜೈಲಿನಲ್ಲಿ ದರ್ಶನ್‌ಗೆ ಉತ್ತಮ ಆತಿಥ್ಯ ನೀಡುತ್ತಿದ್ದಾರೆ ಎಂಬ ಸುದ್ದಿ ತಿಳಿದು ನಿಜಕ್ಕೂ ಆಶ್ಚರ್ಯವಾಯಿತು.
ದರ್ಶನ್ ಮತ್ತು ಆತನ ಸಹಚರರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದ್ದು, ಸಮಯಕ್ಕೆ ಸರಿಯಾಗಿ ಮಾಂಸದೂಟ, ಮದ್ಯ, ಸಿಗರೇಟು, ಟೀ-ಕಾಫಿ ಪೂರೈಸಲಾಗುತ್ತಿದೆ.
ಇದರಲ್ಲಿ ಕೆಲ ಜೈಲು ಅಧಿಕಾರಿಗಳೂ ಶಾಮಿಲಾಗಿ ಹಣದಾಸೆಗೆ ಕರ್ತವ್ಯ ನಿಷ್ಠೆ ಮರೆತಿರುವುದು ವಿಪರ್ಯಾಸ. ದರ್ಶನ್‌ಗೆ ಸಿಗುತ್ತಿರುವ ಆತಿಥ್ಯ ನೋಡಿದ್ದಾರೆ ಅವರು ಜೈಲಿನ ಬದಲಾಗಿ ಯಾವುದೋ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೇನೋ ಅನಿಸುತ್ತದೆ. ಹಣದಾಸೆಗೆ ಕೆಲ ಅಧಿಕಾರಿಗಳು ಮಾಡುವ ಇಂತಹ ಕೃತ್ಯಗಳು ಪೊಲೀಸ್ ಇಲಾಖೆಗೆ ಕಳಂಕ ತರಬಹುದು. ಇಂತಹ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಅಗತ್ಯ.
-ರಾಜೇಶ್, ಎಚ್.ಡಿ.ಕೋಟೆ ತಾ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…