Andolana originals

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸರಕು ಸಾಗಣೆ ವಾಹನ ಚಾಲಕರೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ಪೊಲೀಸ್ ಇಲಾಖೆಯಲ್ಲಿ ಹೋಂಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಸಮವಸ್ತ್ರ ಧರಿಸದೆ ಚೆಕ್‌ಪೋಸ್ಟ್‌ನಲ್ಲಿ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದಾರೆ ಎನ್ನಲಾಗಿದೆ.

ಹಣ ಪಡೆದ ಬಳಿಕ ಯಾವುದೇ ಅಧಿಕೃತ ರಶೀತಿಯನ್ನು ನೀಡುತ್ತಿಲ್ಲ. ಅಲ್ಲದೆ ಅನೇಕ ವರ್ಷಗಳಿಂದ ಹೋಂ ಗಾರ್ಡ್ ಹಣ ವಸೂಲಿ ಮಾಡುತ್ತಿದ್ದು, ಸಮವಸ್ತ್ರ ಧರಿಸದೆ ವಸೂಲಿಗೆ ಇಳಿದಿರುವ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ತನಿಖೆಯಾಗಬೇಕು. ಇದರಲ್ಲಿ ಶಾಮೀಲಾಗಿರುವ ಅಧಿಕಾರಿಗಳನ್ನು ಅಮಾನತ್ತು ಗೊಳಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಕೇರಳ ರಾಜ್ಯಕ್ಕೆ ತೆರಳುವ ಸರಕು ಸಾಗಣೆ ವಾಹನಗಳು ಹಾಗೂ ಖನಿಜ ಸಂಪತ್ತು ಹೊತ್ತ ಟಿಪ್ಪರ್ ಲಾರಿಗಳಿಂದ ಹಣ ಪಡೆದು ವಾಹನಗಳನ್ನು ತಪಾಸಣೆ ಮಾಡದೆ ಬಿಡಲಾಗುತ್ತಿದೆ. ಹಣ ನೀಡದ ವಾಹನಗಳನ್ನು ಮಾತ್ರ ತಪಾಸಣೆಯ ನೆಪದಲ್ಲಿ ವಿಳಂಬಗೊಳಿಸಿ ತೊಂದರೆ ನೀಡಲಾಗುತ್ತಿದೆ ಎಂದು ವಾಹನ ಚಾಲಕರು ದೂರಿದ್ದಾರೆ.

ಇದರಿಂದ ಅಕ್ರಮ ಜಾನುವಾರು ಸಾಗಣೆ ಹಾಗೂ ಖನಿಜ ಸಂಪತ್ತಿನ ಅಕ್ರಮ ಸಾಗಣೆಗೆ ಅವಕಾಶವಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ರಾತ್ರಿ ೯ ಗಂಟೆಯ ನಂತರ ಚೆಕ್‌ಪೋಸ್ಟ್ ಕಾರ್ಯಾಚರಣೆ ಮುಗಿದ ಬಳಿಕವೂ ಕೆಲ ವಾಹನಗಳನ್ನು ಹಣ ಪಡೆದು ಬಿಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಸರಕುಗಳನ್ನು ನಿಗದಿತ ಸಮಯಕ್ಕೆತಲುಪಿಸಬೇಕಾದ ಅನಿವಾರ್ಯತೆಯಿಂದ ಹಣ ನೀಡಿ ಮುಂದುವರಿಯಬೇಕಾಗಿದೆ ಎಂದು ಸರಕು ಸಾಗಣೆ ವಾಹನ ಚಾಲಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಆರೋಪಗಳ ಕುರಿತು ಸಂಬಂಧಪಟ್ಟ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ, ಸತ್ಯಾಸತ್ಯತೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರಾಗಲಿ, ಗೃಹರಕ್ಷಕ ದಳದ ಸಿಬ್ಬಂದಿಗಳಾಗಲಿ, ಅರಣ್ಯ ಇಲಾಖೆಯ ಸಿಬ್ಬಂದಿಗಳಾಗಲಿ ಪ್ರತಿನಿತ್ಯ ಬದಲಾಗಬೇಕು. ಅಲ್ಲದೆ ಚೆಕ್‌ಪೋಸ್ಟ್ ಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆ ಕಡ್ಡಾಯವಾಗಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

” ಈ ವಿಚಾರ ತಿಳಿದ ಕೂಡಲೇ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಕ್ರಮಕ್ಕೆ ಪೊಲೀಸ್ ಇಲಾಖೆ ಜೊತೆ ಚರ್ಚಿಸಲಾಗುವುದು. ಸಿಬ್ಬಂದಿಗಳ ಬದಲಾವಣೆ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.”

-ನಂದೀಶ್, ಡಿಸಿಎಫ್, ಬಂಡೀಪುರ

” ಪ್ರತಿನಿತ್ಯ ಚೆಕ್‌ಪೋಸ್ಟ್‌ನಲ್ಲಿ ಲಕ್ಷಾಂತರ ರೂ. ವಸೂಲಿ ನಡೆಸಲಾಗುತ್ತಿದೆ. ಪ್ರತಿ ಲಾರಿಗೆ ೧೦೦-೨೦೦ ರೂ. ಕಡ್ಡಾಯವಾಗಿ ಕೊಡಬೇಕು. ಹಣ ಕೊಟ್ಟರೆ ತಪಾಸಣೆ ಮಾಡುವುದಿಲ್ಲ. ಬೇರೆ ರಾಜ್ಯದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತದೆ. ಕರ್ನಾಟಕದಲ್ಲಿ ಮಾತ್ರ ಚೆಕ್‌ಪೋಸ್ಟ್ಗಳಲ್ಲಿ ಹಣ ಕೊಟ್ಟರೆ ಯಾರು ಏನು ಕೊಂಡೊಯ್ದರೂ ನೋಡುವುದಿಲ್ಲ.”

-ರಾಜೇಂದ್ರ, ಲಾರಿ ಮಾಲೀಕ, ಕೇರಳ

 

 

ಆಂದೋಲನ ಡೆಸ್ಕ್

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

10 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

11 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

11 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

12 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

12 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

15 hours ago