ಮಂಜು ಕೋಟೆ
ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲ; ಕ್ರಮಕ್ಕೆ ಸಾರ್ವಜನಿಕರ ಒತ್ತಾಯ
ಎಚ್.ಡಿ.ಕೋಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದ ವೃತ್ತದಲ್ಲಿ ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲದೆ ಕಗ್ಗತ್ತಲಿನಿಂದ ಕೂಡಿದೆ. ಇದರಿಂದ ರೋಗಿಗಳು, ಗಾಯಾಳುಗಳು, ಪ್ರಯಾಣಿಕರು, ಸಾರ್ವಜನಿಕರು ಪ್ರತಿ ನಿತ್ಯರಾತ್ರಿ ಹೊತ್ತು ಸಂಚರಿಸಲು ಪರದಾಡುವಂತಾಗಿದೆ.
ತಾಲ್ಲೂಕು ಕೇಂದ್ರ ಸ್ಥಾನವಾಗಿರುವ ಇಲ್ಲಿ ಸದಾ ಜನಜಂಗುಳಿ ಇದ್ದು, ಅಽಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಜನಸಾಮಾನ್ಯರು ಕತ್ತಲಿನಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಪ್ರತಿನಿತ್ಯ ಸಾವಿರಾರು ರೋಗಿಗಳು ಹಗಲು-ಇರುಳೆನ್ನದೆ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸುತ್ತಾರೆ. ಆದರೆರಾತ್ರಿ ಆಗುತ್ತಿದ್ದಂತೆಯೇ ಈ ಪ್ರದೇಶ ವ್ಯಾಪ್ತಿಯಲ್ಲಿ ಬೀದಿ ದೀಪಗಳಿಲ್ಲದಿರುವುದರಿಂದ ಹಾಗೂ ಅಳವಡಿಸಿರುವ ಹೈಮಾಸ್ಟ್ ದೀಪವು ಕೆಟ್ಟುಹೋಗಿದ್ದು, ಇದರಿಂದಾಗಿ ವೃತ್ತವು ಕಗ್ಗತ್ತಲಿನಿಂದ ಆವರಿಸಿಕೊಂಡಿದೆ.
ರಾತ್ರಿ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು, ವಾಹನ ಚಾಲಕರು ಹಾಗೂ ಸಾರ್ವಜನಿಕರು, ಚಿಕಿತ್ಸೆಗೆಂದು ಬರುವ ರೋಗಿಗಳು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರಾತ್ರಿ ವೇಳೆ ಕುಡುಕರ ಹಾವಳಿ, ಗಾಂಜಾ ಮಾರಾಟ, ಮುಂತಾದ ಅಕ್ರಮ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸರು ಜಾಣ-ಕುರುಡರಂತೆ ವರ್ತಿಸುತ್ತಾರೆ. ಇನ್ನಾದರೂ ಪುರಸಭೆಯ ಅಧಿಕಾರಿಗಳು ಕೆಟ್ಟು ಹೋಗಿರುವ ದೀಪಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಬೆಳಕಿನ ವ್ಯವಸ್ಥೆ ಮಾಡಿಕೊಡುವಲ್ಲಿ ಮುಂದಾಗುವರೆ ಎಂಬುದನ್ನು ಕಾದುನೋಡಬೇಕಾಗಿದೆ.
” ಸಾರ್ವಜನಿಕ ಆಸ್ಪತ್ರೆಯ ಸುತ್ತಮುತ್ತ ಬೀದಿದೀಪಗಳಿಲ್ಲದೆ ಹಲವು ತಿಂಗಳಿನಿಂದ ಕಗ್ಗತ್ತಲಿನಿಂದ ಕೂಡಿದೆ. ಬೀದಿ ದೀಪ ಹಾಗೂ ಹೈಮಾಸ್ಟ್ ದೀಪಗಳನ್ನು ಸರಿಪಡಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಗೆ ತಿಳಿಸಲಾಗಿದೆ. ಇನ್ನೂ ಕ್ರಮ ಕೈಗೊಂಡಿಲ್ಲ. ಸಮಸ್ಯೆ ಬಗೆಹರಿಸದಿದ್ದರೆ ಈ ಭಾಗದ ಜನರೊಂದಿಗೆ ಸೇರಿಕೊಂಡು ಹೋರಾಟ ನಡೆಸುತ್ತೇನೆ.”
-ದರ್ಶಿನಿ, ಜಿಮ್ ಯಶ್ವಂತ್, ಪುರಸಭಾ ಸದಸ್ಯರು
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…