ಮಂಜು ಕೋಟೆ
ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲ; ಕ್ರಮಕ್ಕೆ ಸಾರ್ವಜನಿಕರ ಒತ್ತಾಯ
ಎಚ್.ಡಿ.ಕೋಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದ ವೃತ್ತದಲ್ಲಿ ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲದೆ ಕಗ್ಗತ್ತಲಿನಿಂದ ಕೂಡಿದೆ. ಇದರಿಂದ ರೋಗಿಗಳು, ಗಾಯಾಳುಗಳು, ಪ್ರಯಾಣಿಕರು, ಸಾರ್ವಜನಿಕರು ಪ್ರತಿ ನಿತ್ಯರಾತ್ರಿ ಹೊತ್ತು ಸಂಚರಿಸಲು ಪರದಾಡುವಂತಾಗಿದೆ.
ತಾಲ್ಲೂಕು ಕೇಂದ್ರ ಸ್ಥಾನವಾಗಿರುವ ಇಲ್ಲಿ ಸದಾ ಜನಜಂಗುಳಿ ಇದ್ದು, ಅಽಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಜನಸಾಮಾನ್ಯರು ಕತ್ತಲಿನಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಪ್ರತಿನಿತ್ಯ ಸಾವಿರಾರು ರೋಗಿಗಳು ಹಗಲು-ಇರುಳೆನ್ನದೆ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸುತ್ತಾರೆ. ಆದರೆರಾತ್ರಿ ಆಗುತ್ತಿದ್ದಂತೆಯೇ ಈ ಪ್ರದೇಶ ವ್ಯಾಪ್ತಿಯಲ್ಲಿ ಬೀದಿ ದೀಪಗಳಿಲ್ಲದಿರುವುದರಿಂದ ಹಾಗೂ ಅಳವಡಿಸಿರುವ ಹೈಮಾಸ್ಟ್ ದೀಪವು ಕೆಟ್ಟುಹೋಗಿದ್ದು, ಇದರಿಂದಾಗಿ ವೃತ್ತವು ಕಗ್ಗತ್ತಲಿನಿಂದ ಆವರಿಸಿಕೊಂಡಿದೆ.
ರಾತ್ರಿ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು, ವಾಹನ ಚಾಲಕರು ಹಾಗೂ ಸಾರ್ವಜನಿಕರು, ಚಿಕಿತ್ಸೆಗೆಂದು ಬರುವ ರೋಗಿಗಳು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರಾತ್ರಿ ವೇಳೆ ಕುಡುಕರ ಹಾವಳಿ, ಗಾಂಜಾ ಮಾರಾಟ, ಮುಂತಾದ ಅಕ್ರಮ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸರು ಜಾಣ-ಕುರುಡರಂತೆ ವರ್ತಿಸುತ್ತಾರೆ. ಇನ್ನಾದರೂ ಪುರಸಭೆಯ ಅಧಿಕಾರಿಗಳು ಕೆಟ್ಟು ಹೋಗಿರುವ ದೀಪಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಬೆಳಕಿನ ವ್ಯವಸ್ಥೆ ಮಾಡಿಕೊಡುವಲ್ಲಿ ಮುಂದಾಗುವರೆ ಎಂಬುದನ್ನು ಕಾದುನೋಡಬೇಕಾಗಿದೆ.
” ಸಾರ್ವಜನಿಕ ಆಸ್ಪತ್ರೆಯ ಸುತ್ತಮುತ್ತ ಬೀದಿದೀಪಗಳಿಲ್ಲದೆ ಹಲವು ತಿಂಗಳಿನಿಂದ ಕಗ್ಗತ್ತಲಿನಿಂದ ಕೂಡಿದೆ. ಬೀದಿ ದೀಪ ಹಾಗೂ ಹೈಮಾಸ್ಟ್ ದೀಪಗಳನ್ನು ಸರಿಪಡಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಗೆ ತಿಳಿಸಲಾಗಿದೆ. ಇನ್ನೂ ಕ್ರಮ ಕೈಗೊಂಡಿಲ್ಲ. ಸಮಸ್ಯೆ ಬಗೆಹರಿಸದಿದ್ದರೆ ಈ ಭಾಗದ ಜನರೊಂದಿಗೆ ಸೇರಿಕೊಂಡು ಹೋರಾಟ ನಡೆಸುತ್ತೇನೆ.”
-ದರ್ಶಿನಿ, ಜಿಮ್ ಯಶ್ವಂತ್, ಪುರಸಭಾ ಸದಸ್ಯರು
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…
ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…
ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…
ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ ಸಾರ್... ಎಲ್ಲ…
ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…