Andolana originals

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ

ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ 

ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಶತದಿನ ಪೂರೈಸಿರುವ ಸಂದರ್ಭದಲ್ಲಿಯೇ ರಾಜ್ಯದ ಎಲ್ಲಾ ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರ (ಡಿಸಿಸಿ)ನ್ನು ನೇಮಕ ಮಾಡಲಾಗಿದ್ದು, ಚಾಮರಾಜನಗರ ಜಿಲ್ಲೆಯ ಅಧ್ಯಕ್ಷರಾಗಿ ಜೆ.ಯೋಗೇಶ್ ಅವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ಇತರೆ ಹಿಂದುಳಿದ ವರ್ಗಕ್ಕೆ ಇದೇ ಮೊದಲ ಬಾರಿಗೆ ದಕ್ಕಿದೆ. ೧೯೯೭ರಲ್ಲಿ ಚಾಮರಾಜನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದಿದ್ದು, ಅಂದಿನಿಂದಲೂ ಮಾಜಿ ಸಂಸದರಾದ ದಲಿತ ಸಮುದಾಯದ ಎ.ಸಿದ್ದರಾಜು ಅವರನ್ನು ಹೊರತುಪಡಿಸಿ ಉಳಿದ ಅವಧಿಯಲ್ಲೆಲ್ಲಾ ಜಿಲ್ಲಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು ವೀರಶೈವ ಲಿಂಗಾಯತ ಸಮುದಾಯದವರು ಎಂಬುದು ಗಮನಾರ್ಹ ಸಂಗತಿಯಾಗಿದೆ.

ಜಿಲ್ಲೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದವರು ಬಹುಸಂಖ್ಯಾತರಾಗಿರುವ ಕಾರಣ ಡಿಸಿಸಿ ಅಧ್ಯಕ್ಷ ಸ್ಥಾನ ಆ ಸಮುದಾಯಕ್ಕೇ ಪ್ರಾತಿನಿಧ್ಯತೆ ಮೇರೆಗೆ ನೀಡಲಾಗುತ್ತಿತ್ತು.

ಆದರೆ ಈ ಬಾರಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಉಪ್ಪಾರ ಸಮುದಾಯದವರಾದ ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದ ಜೆ.ಯೋಗೇಶ್ ಅವರನ್ನು ನೇಮಕ ಮಾಡಿ ಹೊಸ ಬದಲಾವಣೆಗೆ ಮುನ್ನುಡಿ ಬರೆದಿದೆ. ವಿಧಾನ ಪರಿಷತ್ ಮಾಜಿ ಸದಸ್ಯರಾದ ದಿ. ವೈ. ಎಸ್.ಜವರಾಯಶೆಟ್ಟಿ ಅವರ ಪುತ್ರರಾದ ಯೋಗೇಶ್ ಅವರು ಎರಡು ಬಾರಿ ಯಳಂದೂರು ಕಸಬಾ ಕ್ಷೇತ್ರದಿಂದ ಜಿಪಂ ಸದಸ್ಯರಾಗಿದ್ದರು. ಜಿಪಂ ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿರುವ ಅನುಭವ ಅವರಿಗಿದೆ.

ಜಿಪಂ ಉಪಾಧ್ಯಕ್ಷರಾಗಿದ್ದ ಸಿ.ಪುಟ್ಟರಂಗಶೆಟ್ಟಿ ಅವರು ಪ್ರಥಮಬಾರಿಗೆ ಚಾ.ನಗರ ವಿಧಾನಸಭೆಯಿಂದ ಸ್ಪರ್ಧೆ ಮಾಡುವ ಸಲುವಾಗಿ ೨೦೦೮ರಲ್ಲಿ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಯಳಂದೂರು ಕಸಬಾ ಜಿಪಂ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಜೆ.ಯೋಗೇಶ್ ಅವರು ಮೊದಲ ಬಾರಿಗೆ ಆಯ್ಕೆಯಾಗಿದ್ದರು.

ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಸದ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಇದೇ ಸಂದರ್ಭದಲ್ಲಿ ಅವರದೇ ಸಮುದಾಯದವರಾದ ಜೆ.ಯೋಗೇಶ್ ಅವರಿಗೆ ಜಿಲ್ಲೆಯಲ್ಲಿನ ಪಕ್ಷದ ಸಾರಥ್ಯವನ್ನು ವಹಿಸಿರುವುದು ವಿಶೇಷವಾಗಿದೆ. ಈ ಇಬ್ಬರೂ ಯಳಂದೂರು ತಾಲ್ಲೂಕಿನವರು ಎಂಬುದು ಗಮನಾರ್ಹ ಸಂಗತಿಯಾಗಿದೆ.

ಇದುವರೆವಿಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭಾಗ್ಯ ಯಳಂದೂರು ತಾಲ್ಲೂಕಿನವರಿಗೆ ದೊರಕಿರಲಿಲ್ಲ. ಸಚಿವರಾಗಿದ್ದ ಅವಧಿಯಲ್ಲಿಯೇ ಹೈಕಮಾಂಡ್ ಸೂಚನೆ ಮೇರೆಗೆ ದಿ.ಹೆಚ್.ಎಸ್.ಮಹದೇವ ಪ್ರಸಾದ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು.ಆ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ನಂತರ ಕಾರ್ಯದರ್ಶಿಯಾಗಿ ಜೆ.ಯೋಗೇಶ್ ಕೆಲಸ ಮಾಡಿದ್ದರು. ಅವರು ಪ್ರಸ್ತುತ ಯಳಂದೂರು ಟಿಎಪಿಸಿಎಂಎಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಎಲ್ಲೆಡೆ ನಡೆಸಿದ ‘ಸಂಘಟನ ಸೃಜನ ಅಭಿಯಾನ’ದಡಿ ಎಲ್ಲಾ ಕಡೆಯಂತೆಯೇ ಚಾ.ನಗರ ಜಿಲ್ಲೆಗೂ ಎಐಸಿಸಿ ವೀಕ್ಷಕರನ್ನು ನಿಯೋಜಿಸಲಾಗಿತ್ತು. ಅವರು ಸಲ್ಲಿಸಿದ ವರದಿ ಆಧಾರದಲ್ಲಿ ಹಾಗೂ ಜಿಲ್ಲೆಯ ಸಚಿವರು, ಶಾಸಕರು, ಸಂಸದರು ಹಾಗೂ ಹಿರಿಯ ನಾಯಕರೊಂದಿಗೆ ವೈಯಕ್ತಿಕವಾಗಿ ಚರ್ಚಿಸಿ ಬಳಿಕ ಯೋಗೇಶ್ ಅವರ ನೇಮಕವನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಗಟ್ಟಿಗೊಳಿಸಿ ಮುಂಬರುವ ಜಿಪಂ, ತಾಪಂ, ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ತನ್ಮೂಲಕ ೨೦೨೮ ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ೪ ಸ್ಥಾನಗಳನ್ನು ಗೆಲ್ಲುವ ತಯಾರಿ ದೃಷ್ಟಿಯಿಂದ ಒಬಿಸಿ ವರ್ಗಕ್ಕೆ ಸೇರಿದ ಇವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ೩೦ಕ್ಕೂ ಹೆಚ್ಚು ಆಕಾಂಕ್ಷಿಗಳು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ೩೦ಕ್ಕೂ ಅಧಿಕ ಆಕಾಂಕ್ಷಿಗಳು ಅರ್ಜಿ ಹಾಕಿದ್ದರು. ಅಂತಿಮವಾಗಿ ೬ ಜನರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಅದರಲ್ಲಿ ಯೋಗಾ ಯೋಗ ಎಂಬಂತೆ ಯೋಗೇಶ್ ಅವರನ್ನು ಪರಿಗಣಿಸಲಾಗಿದೆ. ಕಾಂಗ್ರೆಸ್ ಪಕ್ಷದ ಸಂವಿಧಾನದ ಪ್ರಕಾರ ಡಿಸಿಸಿ ಅಧ್ಯಕ್ಷರ ಅಧಿಕಾರಾವಧಿ ೩ವರ್ಷಗಳಾಗಿದ್ದು ಕಾಡಾ ಹಾಗೂ ಹಾಲಿ ಡಿಸಿಸಿ ಅಧ್ಯಕ್ಷರಾದ ಪಿ.ಮರಿಸ್ವಾಮಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ೯ ವರ್ಷಗಳನ್ನು ಪೂರೈಸಿದ್ದಾರೆ. ಅಂದರೆ, ಮೂರು ಅವಧಿಯನ್ನು ಮರಿಸ್ವಾಮಿ ಅವರು ಮುಗಿಸಿದಂತಾಗಿದೆ.

ಮಾಜಿ ಶಾಸಕರಾದ ದಿವಂಗತ ಎಸ್.ಪುಟ್ಟಸ್ವಾಮಿ, ಹೆಚ್.ಎನ್.ನಾಗರಾಜ ಮೂರ್ತಿ, ಮಾಜಿ ಸಂಸದ ಎ. ಸಿದ್ದರಾಜು, ಮಾಜಿ ಶಾಸಕ ಸಿ.ಗುರುಸ್ವಾಮಿ, ಮಾಜಿ ಸಚಿವ ಹೆಚ್.ಎಸ್.ಮಹದೇವ ಪ್ರಸಾದ್,ಕಾಗಲವಾಡಿ ಸದಾಶಿವಮೂರ್ತಿ, ಪಿ.ಮರಿಸ್ವಾಮಿ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಪ್ರಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಎಂಟು ಬ್ಲಾಕ್ ಕಾಂಗ್ರೆಸ್ ಸಮಿತಿಗಳಿದ್ದು ಬ್ಲಾಕ್ ಅಧ್ಯಕ್ಷರ ಬದಲಾವಣೆಯೂ ಸದ್ಯದಲ್ಲೇ ಆಗಲಿದೆ.

” ಜಿಲ್ಲೆಯ ಜನರ ಪ್ರೀತಿ ವಿಶ್ವಾಸ ಗಳಿಸಿ ಪಕ್ಷದ ಸಂಘಟನೆಗೆ ಒತ್ತು ನೀಡಲಾಗುವುದು. ಜಿಲ್ಲೆಯ ಸಚಿವರು, ಶಾಸಕರು, ಸಂಸದರ ಜೊತೆ ಚರ್ಚಿಸಿ ಸೂಕ್ತ ದಿನದಂದು ಪದಗ್ರಹಣ ಮಾಡಲಾಗುವುದು.”

-ಜೆ.ಯೋಗೇಶ್, ನೂತನ ಅಧ್ಯಕ್ಷರು, ಚಾಮರಾಜನಗರ ಜಿಲ್ಲಾ ಕಾಂಗ್ರೆಸ್

” ಎಐಸಿಸಿ ವೀಕ್ಷಕರ ವರದಿ ಅನ್ವಯ ಜೆ.ಯೋಗೇಶ್ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಾಮಾಜಿಕ ನ್ಯಾಯದಡಿ ಈ ಬಾರಿ ಒಬಿಸಿ ವರ್ಗಕ್ಕೆ ಅವಕಾಶ ನೀಡಲಾಗಿದೆ.”

-ಎಚ್.ವಿ.ಚಂದ್ರು, ಅಧ್ಯಕ್ಷರು, ಯಳಂದೂರು ಬ್ಲಾಕ್ ಕಾಂಗ್ರೆಸ್

” ಹಿರಿತನ,ಅನುಭವದ ಹಿನ್ನೆಲೆಯಲ್ಲಿ ಯೋಗೇಶ್ ಅವರನ್ನು ನೇಮಕ ಮಾಡಲಾಗಿದೆ. ಬದಲಾವಣೆ ತರಲು ಒಬಿಸಿ ವರ್ಗವನ್ನು ಪರಿಗಣಿಸಲಾಗಿದೆ.”

-ಎ.ಎಸ್. ಗುರುಸ್ವಾಮಿ,ಅಧ್ಯಕ್ಷರು, ಚಾ.ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ (ಗ್ರಾ)

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

24 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

26 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

28 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

30 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

37 mins ago