Mysore
24
haze

Social Media

ಶುಕ್ರವಾರ, 30 ಜನವರಿ 2026
Light
Dark

ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಚುರುಕು

Jal Jeevan Mission
  • ೨೩,೨೧೮ ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ
  • ಮೂರು ಹಂತಗಳಲ್ಲಿ ಪೈಪ್‌ಲೈನ್ ಅಳವಡಿಕೆ ಕಾರ್ಯ

ಮಡಿಕೇರಿ: ಪ್ರತೀ ಮನೆಗೂ ಕುಡಿಯುವ ನೀರಿನ ನಲ್ಲಿ ಸಂಪರ್ಕ ಕಲ್ಪಿಸುವ ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷೆಯ ಜಲಜೀವನ್ ಮಿಷನ್ ಯೋಜನೆ ಚುರುಕುಗೊಂಡಿದ್ದು, ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸಲು ಪ್ರಯತ್ನಿಸಲಾಗುತ್ತಿದೆ.

ದೇಶವನ್ನು ಕಾಡುತ್ತಿರುವ ಬಹುದೊಡ್ಡ ಸಮಸ್ಯೆಗಳಲ್ಲಿ ನೀರಿನ ಸಮಸ್ಯೆಯೂ ಒಂದು. ಅದರಲ್ಲೂ ಗ್ರಾಮೀಣ ಭಾಗಗಳ ಹಲವು ಕಡೆಗಳಲ್ಲಿ ಶುದ್ಧವಾದ ಕುಡಿಯುವ ನೀರನ್ನು ಪಡೆಯಲು ಪರದಾಡುವಂತಹ ಪರಿಸ್ಥಿತಿ ಇದೆ. ಈ ಸಮಸ್ಯೆಯಿಂದ ಜನರನ್ನು ಹೊರತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಯೋಜನೆಯೇ ಜಲ ಜೀವನ್ ಮಿಷನ್. ಪ್ರತಿ ಯೊಬ್ಬರಿಗೂ ಶುದ್ಧ, ಸುರಕ್ಷಿತ ಕುಡಿಯುವ ನೀರು ಒದಗಿ ಸುವ ನಿಟ್ಟಿನಲ್ಲಿ ಜಾರಿಗೆ ತಂದ ಈ ಯೋಜನೆಯ ಕಾಮಗಾರಿ ಕೊಡಗು ಜಿಲ್ಲೆಯಲ್ಲಿಯೂ ಚುರುಕು ಗೊಂಡಿದೆ.

ಕೊಡಗು ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಸುಮಾರು ೧೩,೫೧೭ ಲಕ್ಷ ರೂ. ಅಂದಾಜು ವೆಚ್ಚದಲ್ಲಿ ೧೮೮ ಕಾಮ ಗಾರಿಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ೧೮೫ ಕಾಮಗಾರಿ ಗಳು ಪೂರ್ಣಗೊಂಡಿವೆ. ಎರಡನೇ ಹಂತದಲ್ಲಿ ೧೨೯ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ೮೫ ಕಾಮಗಾರಿಗಳು ಪೂರ್ಣಗೊಂಡಿವೆ. ಇದಕ್ಕಾಗಿ ಸುಮಾರು ೯,೦೯೨ ಲಕ್ಷ ರೂ. ಅಂದಾಜು ವೆಚ್ಚ ಮಾಡಲಾಗಿದೆ.

ಮೂರನೇ ಹಂತದಲ್ಲಿ ೪೫೭ ಕಾಮಗಾರಿಗಳನ್ನು ಕೈಗೆತ್ತಿ ಕೊಳ್ಳಲಾಗಿದ್ದು, ೩೪೮ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ೧೦೭ ಕಾಮಗಾರಿಗಳು ಪ್ರಗತಿಯಲ್ಲಿವೆ. ಒಟ್ಟಾರೆ ಸುಮಾರು ೩೫,೮೬೯ ಲಕ್ಷ ರೂ. ಅಂದಾಜಿನಲ್ಲಿ ಒಟ್ಟು ೨೩,೨೧೮ ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಭಾಸ್ಕರ್ ಮಾಹಿತಿ ನೀಡಿದ್ದಾರೆ.

ಉಳಿದ ಕಾಮಗಾರಿಯನ್ನು ಚುರುಕುಗೊಳಿಸಲಾಗು ತ್ತಿದ್ದು, ನಲ್ಲಿ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ.

ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಇತ್ತೀಚೆಗೆ ನಡೆದ ಸಭೆಯಲ್ಲಿ ಸಂಸದರು ಸೂಚನೆ ನೀಡಿದ್ದಾರೆ. ಅದರಂತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ.

ಜಲಜೀವನ್ ಮಿಷನ್ ಯೋಜನೆಯು ಕೇಂದ್ರ ಸರ್ಕಾ ರದ ಮಹತ್ವಾ ಕಾಂಕ್ಷೆಯ ಯೋಜನೆಯಾಗಿದ್ದು, ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸಲು ಆದ್ಯತೆ ನೀಡಬೇಕು. ಈ ಯೋಜನೆಯಡಿ ಕೈಗೊಳ್ಳಲಾಗಿ ರುವ ಕಾಮಗಾರಿಯನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. -ಯದುವೀರ್, ಸಂಸದರು

ಚೆಂಬೆಬೆಳ್ಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಜಲಜೀವನ್ ಮಿಷನ್ ಯೋಜನೆ ಪೂರ್ಣ ಗೊಳಿಸಿ, ಶುದ್ಧ ಕುಡಿಯುವ ನೀರು ಒದಗಿಸಬೇಕು. ಜೆಜೆಎಂ ಬಗ್ಗೆ ಸಭೆಗಳಲ್ಲಿ ಹಲವು ಬಾರಿ ಪ್ರಸ್ತಾಪಿಸಲಾಗಿದೆ. ಆದರೂ ಪರಿಪೂರ್ಣವಾಗಿ ಕಾಮಗಾರಿ ಆಗದಿ ರುವುದು ಬೇಸರ ತರಿಸಿದೆ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು.
-ಎಂ. ಪಿ. ಸುಜಾ ಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರು

ಕೊಡಗು ಜಿಲ್ಲೆಯಲ್ಲಿ ಮೂರು ಹಂತಗಳಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಮೊದಲ ಹಂತದಲ್ಲಿ ೧೮೮, ಎರಡನೇ ಹಂತದಲ್ಲಿ ೧೨೯, ಮೂರನೇ ಹಂತದಲ್ಲಿ ೪೫೭ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳ ಲಾಗಿದೆ. ಸುಮಾರು ೩೫,೮೬೯ ಲಕ್ಷ ರೂ. ಅಂದಾಜಿನಲ್ಲಿ ಒಟ್ಟು ೨೩,೨೧೮ ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ.
-ಭಾಸ್ಕರ್, ಕಾರ್ಯಪಾಲಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ

Tags:
error: Content is protected !!