Andolana originals

ಮೂಲಸೌಕರ್ಯಗಳಿಲ್ಲದ ಜಯನಗರ ಸ್ಮಶಾನ

ಪ್ರಶಾಂತ್ ಎಸ್.

ಶವ ಸಂಸ್ಕಾರ ಸ್ಥಾವರದ ಸಾಮಗ್ರಿಗಳು ಕಳ್ಳರ ಪಾಲು

ಬೆಳಕಿನ ವ್ಯವಸ್ಥೆ ಇಲ್ಲದೇ ಕತ್ತಲಿನಲ್ಲಿಯೇ ಹೂಳಬೇಕಾದ ಸ್ಥಿತಿ ನಿರ್ಮಾಣ 

ಕುಡಿಯಲು ನೀರಿಲ್ಲ, ಆಳೆತ್ತರಕ್ಕೆ ಬೆಳೆದ ಗಿಡಗಂಟಿಗಳು

ಮೈಸೂರು: ಮಳೆ ಬಂದರೆ ಜಲಾವೃತವಾಗುವ ಸ್ಮಶಾನ.., ನಿಲ್ಲಲು ಸೂಕ್ತ ನೆರಳಿನ ವ್ಯವಸ್ಥೆ ಇಲ್ಲ.., ಸುಸ್ತಾದರೂ ಕುಡಿಯಲು ಗುಟುಕು ನೀರಿಲ್ಲ.., ರಾತ್ರಿ ಸಮಯದಲ್ಲಿ ಬೆಳಕಿನ ವ್ಯವಸ್ಥೆ ಇಲ್ಲವೇ ಇಲ್ಲ.., ಎಲ್ಲೆಂದರಲ್ಲಿ ಬಿದ್ದಿರುವ ಕಸ-ಕಡ್ಡಿಗಳು, ಕಲ್ಲು-ಮುಳ್ಳುಗಳು…

ಇದು ಜಯನಗರ-ಮಳಲವಾಡಿ ರುದ್ರಭೂಮಿಯ ಸ್ಥಿತಿ. ಈ ರುದ್ರಭೂಮಿಯು ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಸೂಕ್ತ ರೀತಿಯ ಸೌಕರ್ಯಗಳನ್ನು ವ್ಯವಸ್ಥೆ ಮಾಡಿಕೊಡದ ಕಾರಣ ಶವ ಸಂಸ್ಕಾರ ಮಾಡಲು ಬರುವ ಸಾರ್ವಜನಿಕರು ಪರದಾಡುವಂತಾಗಿದೆ.

ಅಂತ್ಯಸಂಸ್ಕಾರಕ್ಕೆ ತೊಂದರೆ ಜಯನಗರ ಮಳಲವಾಡಿ ರುದ್ರಭೂಮಿಗೆ ನಗರಪಾಲಿಕೆ ಅಗತ್ಯ ಮೂಲ ಸೌಲಭ್ಯ ಒದಗಿಸಿಲ್ಲ. ಯಾರಾದರೂ ಮೃತಪಟ್ಟರೆ ಅಂತ್ಯಸಂಸ್ಕಾರಕ್ಕೆ ತೊಂದರೆಯಾಗುತ್ತಿದೆ. ಸ್ಮಶಾನದಲ್ಲಿ ಬೆಳಕಿನ ವ್ಯವಸ್ಥೆ ಇಲ್ಲದೇ ಕತ್ತಲಲ್ಲಿ ಜನರು ಅಂತ್ಯಕ್ರಿಯೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಅಭಿವೃದ್ಧಿ ಮರೀಚಿಕೆ: ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದ ರುದ್ರಭೂಮಿಗೆ ಇತ್ತೀಚೆಗಷ್ಟೆ ಕಾಂಪೌಂಡ್ ನಿರ್ಮಿಸಲಾಗಿದೆ. ಮುಳ್ಳು ಗಂಟಿಗಳಿಂದ ಕೂಡಿರುವ ಸ್ಥಳದಲ್ಲಿ ಶವಗಳನ್ನು ಹೂಳಬೇಕಾಗಿದೆ. ಮಳೆಗಾಲದಲ್ಲಿ ಜನರು ಇನ್ನಷ್ಟು ತೊಂದರೆ ಪಡಬೇಕಾಗುತ್ತದೆ. ಅಂತ್ಯಕ್ರಿಯೆಗೆ ಬರುವ ವಯೋವೃದ್ಧರು ಭಯದೊಂದಿಗೆ ಸ್ಮಶಾನದಲ್ಲಿ ತೆರಳುವಂತಾಗಿದೆ.

ಮನವಿಗೆ ಸಿಗದ ಸ್ಪಂದನೆ: ನೆರಳಿಲ್ಲ, ಕುಡಿಯಲು ನೀರಿಲ್ಲ, ರಾತ್ರಿ ಸಮಯದಲ್ಲಿ ಬೆಳಕಿನ ವ್ಯವಸ್ಥೆ ಇಲ್ಲ. ಮೂಲಸೌಕರ್ಯ ಒದಗಿಸುವಂತೆ ಅನೇಕ ಬಾರಿ ಸ್ಥಳೀಯ ನಗರಪಾಲಿಕೆ ಸದಸ್ಯರು, ಪಾಲಿಕೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಆದರೂ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಾರೆ

” ಕುಡಿಯುವ ನೀರು, ನೆರಳು, ಸ್ವಚ್ಛತೆ ಇಲ್ಲದಂತಾಗಿದೆ. ಅಂತ್ಯಕ್ರಿಯೆ ವೇಳೆ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಽಕಾರಿಗಳು ಇತ್ತ ಗಮನಹರಿಸಬೇಕು. ರುದ್ರಭೂಮಿಯ ಅಭಿವೃದ್ಧಿಗೆ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು.”

ಮಹದೇವು, ಜಯನಗರ ನಿವಾಸಿ (ಕೆ.ಶಿವರಾಂ ಬಡಾವಣೆ)

” ಜಯನಗರ-ಮಳಲವಾಡಿ ಸ್ಮಶಾನದಲ್ಲಿ ಮೂಲ ಸೌಕರ್ಯಗಳ ಕೊರತೆ ಇರುವುದರ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಸ್ಥಳ ಪರಿಶೀಲನೆ ನಡೆಸಿ ಸದ್ಯದಲ್ಲಿಯೇ ಕ್ರಮ ಕೈಗೊಳ್ಳುತ್ತೇನೆ.”

ಶೇಕ್ ತನ್ವೀರ್ ಆಸಿಫ್, ಆಯುಕ್ತರು, ನಗರಪಾಲಿಕೆ

” ಅಭಿವೃದ್ಧಿ ಕಾಣದ ಸ್ಮಶಾನಗಳಲ್ಲಿ ರಾತ್ರಿ ವೇಳೆ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಕಾಂಪೌಂಡ್ ಇಲ್ಲದ ರುದ್ರಭೂಮಿ ಜಾಗ ಕೆಲ ಕಡೆಗಳಲ್ಲಿ ಒತ್ತುವರಿಯಾಗಿದೆ. ಆದ್ದರಿಂದ ನಗರಪಾಲಿಕೆ ಅಧಿಕಾರಿಗಳು ರುದ್ರಭೂಮಿ ಅಭಿವೃದ್ಧಿಗೆ ಮುಂದಾಬೇಕು.”

ಮೋಹನ್, ಜಯನಗರ (ಕೆ.ಶಿವರಾಂ ಬಡಾವಣೆ)

” ಶವ ಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ಬರುವವರಿಗೆ ನೀರು, ವಿದ್ಯುತ್ ವ್ಯವಸ್ಥೆ ಇರಲಿ, ಕನಿಷ್ಠ ಸ್ವಚ್ಛತೆ ಕಡೆಗೂ ಅಧಿಕಾರಿಗಳು ಗಮನಹರಿಸುತ್ತಿಲ್ಲ. ಮೂಲ ಸೌಲಭ್ಯಗಳೇ ಇಲ್ಲದಿರುವಾಗ ಇಲ್ಲಿ ಶವಸಂಸ್ಕಾರ ನಡೆಸುವುದಾದರೂ ಹೇಗೆ?.”

ಈಶ್ವರ್ ಚಕ್ಕಡಿ, ಕಾಂಗ್ರೆಸ್ ಮುಖಂಡ 

ಆಂದೋಲನ ಡೆಸ್ಕ್

Recent Posts

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 mins ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

7 mins ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

11 mins ago

ಈ ದಿನ ಮೈಸೂರು ಅರಮನೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಮೈಸೂರು : ಸಾಂಸ್ಕೃತಿಕ ನಗರಿಯ ಅರಮನೆಗೆ ಡಿ.20ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಅರಮನೆ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿಗಳ…

29 mins ago

ಹೈಕಮಾಂಡ್‌ ನನ್ನ ಪರವಾಗಿದೆ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಎರಡುವರೆ ವರ್ಷಗಳಿಗೆ ಮಾತ್ರ ಮುಖ್ಯಮಂತ್ರಿ ಹುದ್ದೆ ಎಂದು ತೀರ್ಮಾನವಾಗಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು ತೀರ್ಮಾನ ಮಾಡಿದರೆ ಮುಂದೆಯೂ…

52 mins ago

ಹೆಮ್ಮಿಗೆಯಲ್ಲಿ ಹುಲಿ ದಾಳಿಗೆ ಹಸು ಬಲಿ: ರೈತರಲ್ಲಿ ಆತಂಕ

ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು…

2 hours ago