Andolana originals

ಬಸ್‌ನಲ್ಲಿ ಚಿನ್ನಾಭರಣ ಕಳವು

೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ

ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮ ಲಕ್ಷ ರೂ. ಮೌಲ್ಯದ ೨೬೨ ಗ್ರಾಂ ಚಿನ್ನಾಭರಣಗಳನ್ನು ಖದೀಮರು ಲಪಟಾಯಿಸಿರುವ ಘಟನೆ ನಡೆದಿದೆ.

ರಾಮಕೃಷ್ಣ ನಗರ ನಿವಾಸಿ ಹೇಮ ಲತಾ ಚಿನ್ನಾಭರಣ ಕಳೆದುಕೊಂಡವರು. ನಗರದ ಅಶೋಕ ವೃತ್ತದ ಬಳಿ ಇರುವ ಕೆನರಾ ಬ್ಯಾಂಕ್‌ನ ಲಾಕರ್ ನಲ್ಲಿ ಇಟ್ಟಿದ್ದ ಚಿನ್ನಾಭರಣಗಳನ್ನು ಅವರು ವಾಪಸ್ ಪಡೆದಿದ್ದಾರೆ.

ನಂತರ ಮಧ್ಯಾಹ್ನ ೨.೩೦ರ ವೇಳೆಯಲ್ಲಿ ಅಶೋಕ ವೃತ್ತದ ಬಸ್ ತಂಗುದಾಣದಿಂದ ರಾಮಕೃಷ್ಣನಗರಕ್ಕೆ ತೆರಳಲು ನಗರ ಸಾರಿಗೆ ಬಸ್ ಹತ್ತಿದ್ದಾರೆ. ಈ ಸಮಯದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.

ಬ್ಯಾಗ್‌ನಲ್ಲಿದ್ದ ಆಭರಣಗಳನ್ನು ಲಪಟಾಯಿಸಿದ್ದಾರೆ. ಬಸ್‌ನಿಂದ ಇಳಿದ ನಂತರ ಹೇಮಲತಾ ಅವರು ಬ್ಯಾಗ್ ಪರಿಶೀಲಿಸಿದಾಗ ಆಭರಣಗಳು ಕಳವಾಗಿರುವುದು ಅರಿವಾಗಿದೆ. ಈ ಸಂಬಂಧ ಅವರು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

” ರಾಮಕೃಷ್ಣ ನಗರ ನಿವಾಸಿ ಹೇಮಲತಾ ಚಿನ್ನಾಭರಣ ಕಳೆದುಕೊಂಡವರು. ಅವರು ನಗರದ ಅಶೋಕ ವೃತ್ತದ ಬಳಿ ಇರುವ ಕೆನರಾ ಬ್ಯಾಂಕ್‌ನ ಲಾಕರ್‌ನಲ್ಲಿ ಇಟ್ಟಿದ್ದ ಚಿನ್ನಾಭರಣಗಳನ್ನು ವಾಪಸ್ ಪಡೆದು ಮನೆಗೆ ಹಿಂದಿರುಗುತ್ತಿದ್ದಾಗ ಕಳವು.”

 

 

ಆಂದೋಲನ ಡೆಸ್ಕ್

Recent Posts

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

1 hour ago

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…

2 hours ago

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…

2 hours ago

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

2 hours ago

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

14 hours ago