೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ
ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮ ಲಕ್ಷ ರೂ. ಮೌಲ್ಯದ ೨೬೨ ಗ್ರಾಂ ಚಿನ್ನಾಭರಣಗಳನ್ನು ಖದೀಮರು ಲಪಟಾಯಿಸಿರುವ ಘಟನೆ ನಡೆದಿದೆ.
ರಾಮಕೃಷ್ಣ ನಗರ ನಿವಾಸಿ ಹೇಮ ಲತಾ ಚಿನ್ನಾಭರಣ ಕಳೆದುಕೊಂಡವರು. ನಗರದ ಅಶೋಕ ವೃತ್ತದ ಬಳಿ ಇರುವ ಕೆನರಾ ಬ್ಯಾಂಕ್‌ನ ಲಾಕರ್ ನಲ್ಲಿ ಇಟ್ಟಿದ್ದ ಚಿನ್ನಾಭರಣಗಳನ್ನು ಅವರು ವಾಪಸ್ ಪಡೆದಿದ್ದಾರೆ.
ನಂತರ ಮಧ್ಯಾಹ್ನ ೨.೩೦ರ ವೇಳೆಯಲ್ಲಿ ಅಶೋಕ ವೃತ್ತದ ಬಸ್ ತಂಗುದಾಣದಿಂದ ರಾಮಕೃಷ್ಣನಗರಕ್ಕೆ ತೆರಳಲು ನಗರ ಸಾರಿಗೆ ಬಸ್ ಹತ್ತಿದ್ದಾರೆ. ಈ ಸಮಯದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.
ಬ್ಯಾಗ್‌ನಲ್ಲಿದ್ದ ಆಭರಣಗಳನ್ನು ಲಪಟಾಯಿಸಿದ್ದಾರೆ. ಬಸ್‌ನಿಂದ ಇಳಿದ ನಂತರ ಹೇಮಲತಾ ಅವರು ಬ್ಯಾಗ್ ಪರಿಶೀಲಿಸಿದಾಗ ಆಭರಣಗಳು ಕಳವಾಗಿರುವುದು ಅರಿವಾಗಿದೆ. ಈ ಸಂಬಂಧ ಅವರು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
” ರಾಮಕೃಷ್ಣ ನಗರ ನಿವಾಸಿ ಹೇಮಲತಾ ಚಿನ್ನಾಭರಣ ಕಳೆದುಕೊಂಡವರು. ಅವರು ನಗರದ ಅಶೋಕ ವೃತ್ತದ ಬಳಿ ಇರುವ ಕೆನರಾ ಬ್ಯಾಂಕ್‌ನ ಲಾಕರ್‌ನಲ್ಲಿ ಇಟ್ಟಿದ್ದ ಚಿನ್ನಾಭರಣಗಳನ್ನು ವಾಪಸ್ ಪಡೆದು ಮನೆಗೆ ಹಿಂದಿರುಗುತ್ತಿದ್ದಾಗ ಕಳವು.”
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…