Andolana originals

ಸಂಕಷ್ಟಕ್ಕೆ ಸಿಲುಕಿದ ಸರ್ಕಾರಕ್ಕೆ ವರದಾನವಾದ ಕಬಿನಿ

ಮಂಜು ಕೋಟೆ

ಕಬಿನಿ ಜಲಾಶಯ ಭರ್ತಿ; ೧೦ ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ

ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಬರದ ನಡುವೆಯೂ  ಕೇರಳದ ವಯನಾಡು ಮತ್ತು ಕೊಡಗಿನಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಕಬಿನಿ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ ೪ ಗೇಟ್‌ಗಳ ಮೂಲಕ ೧೦,೦೦೦ ಕ್ಯೂಸೆಕ್ಸ್ ನೀರನ್ನು ನದಿಯ ಮೂಲಕ ತಮಿಳುನಾಡಿಗೆ ಬಿಡಲಾಗಿದೆ.

ಕಬಿನಿ ಜಲಾಶಯ ೧ ತಿಂಗಳ ಹಿಂದೆ ೫೨ ಅಡಿಗಳಿಗೆ ಕುಸಿತ ಕಂಡಿದ್ದು, ರೈತರು, ಸಾರ್ವಜನಿಕರಲ್ಲಿ ಆತಂಕ ಉಂಟಾಗಿತ್ತು. ಜುಲೈ ತಿಂಗಳಿನಲ್ಲಿ ಕೇರಳದ ವಯನಾಡು ಮತ್ತು ಕೊಡಗು ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಲಾಶಯಕ್ಕೆ ಈಗ ೧೫,೦೦೦ ಕ್ಯೂಸೆಕ್ಸ್‌ವರೆಗೂ ಒಳಹರಿವು ಇದೆ.

ಇದರಿಂದಾಗಿ ಜಲಾಶಯದ ನೀರಿನ ಮಟ್ಟ ೮೨ ಅಡಿಗಳಿಗೆ ಏರಿಕೆಯಾಗಿದೆ. ಜಲಾಶಯದ ಗರಿಷ್ಟ ಮಟ್ಟ ೮೪ ಅಡಿಗಳು. ಜಲಾಶಯದ ಸುರಕ್ಷತೆ ದೃಷ್ಟಿಯಿಂದಾಗಿ ೮೨ ಅಡಿಗಳಿಗೆ ಮಾತ್ರ ನೀರು ಶೇಖರಣೆ ಮಾಡಿಕೊಂಡು ಒಳಹರಿವಿನ ನೀರನ್ನು ೪ ಕ್ರಸ್ಟ್‌ಗೇಟ್‌ಗಳ ಮೂಲಕ ಶನಿವಾರ ಮಧ್ಯಾಹ್ನ ೩ ಗಂಟೆಯಲ್ಲಿ ಅಧಿಕಾರಿಗಳಾದ ರಂಗಯ್ಯ ಮತ್ತು ಗಣೇಶ್ ಅವರು ನದಿ ಪಾತ್ರದ ಜನರಿಗೆ ಸೈರನ್ ಮೂಲಕ ವಿಚಾರ ತಿಳಿಸಿ ನದಿಗೆ ಬಿಟ್ಟಿದ್ದಾರೆ.

ಒಂದೇ ತಿಂಗಳಿನಲ್ಲಿ ೩೨ ಅಡಿಗಳಷ್ಟು ನೀರು ಶೇಖರಣೆಗೊಂಡಿದ್ದು, ೧೫ ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ಈ ಬಾರಿ ತಮಿಳುನಾಡಿಗೆ ನೀರು ಹರಿಸಬೇಕೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಕಬಿನಿ ಜಲಾಶಯದಿಂದ ನೀರು ಹರಿಸುವ ಮೂಲಕ ಪಾಲನೆ ಮಾಡುವುದು ಖಚಿತವಾಗಿದೆ. ಪ್ರತಿನಿತ್ಯ ತಮಿಳುನಾಡಿಗೆ ಮೂರೂವರೆ ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಆದೇಶವಿದ್ದು, ಈಗ ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸುಮಾರು ೧೦ ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗುತ್ತಿರುವುದರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅಽಕಾರಿಗಳಿಗೆ ಕಬಿನಿ ಜಲಾಶಯ ವರದಾನವಾಗಿದೆ.

ತಾಲ್ಲೂಕಿನಲ್ಲಿರುವ ಕಬಿನಿ, ನುಗು ಜಲಾಶಯಗಳು ಸ್ಥಳೀಯರು ಮತ್ತು ರೈತರಿಗಿಂತ ಹೊರಗಿನವರಿಗೆ ಉಪಯುಕ್ತ  ಎಂಬುದು ಸಾಬೀತಾಗುತ್ತಿದೆ. ತಾಲ್ಲೂಕಿನ ಬಹುತೇಕ ಕೆರೆಕಟ್ಟೆಗಳು ಮಳೆ ಇಲ್ಲದೆ ಬರಿದಾಗಿವೆ. ಈಗಲಾದರೂ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಹಾಗೂ ತಾರಕ ಜಲಾಶಯಕ್ಕೆ ಏತ ನೀರಾವರಿ ಮೂಲಕ ನೀರು ತುಂಬಿಸುವ ಕೆಲಸ ಮಾಡಲು ಶಾಸಕ ಅನಿಲ್ ಚಿಕ್ಕಮಾದು, ನೀರಾವರಿ ಇಲಾಖೆಯ ಅಧಿಕಾರಿಗಳಾದ ರಘುಪತಿ, ಮಹೇಶ್, ಗಣೇಶ್ ಅವರು ಮುಂದಾಗಿ ಈ ಭಾಗದ ರೈತರ ಹಿತ ಕಾಪಾಡಬೇಕಿದೆ.

” ಜಲಾಶಯದ ಗರಿಷ್ಟ ಮಟ್ಟ ೮೪ ಅಡಿ ತಲುಪಲು ಎರಡು ಅಡಿ ಮಾತ್ರ ಇದೆ. ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ೪ ಗೇಟ್‌ಗಳ ಮೂಲಕ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುತ್ತಿದ್ದು, ಈಗ ೧೦,೦೦೦ ಕ್ಯೂಸೆಕ್ಸ್ ನೀರು ಬಿಡುತ್ತಿದ್ದು, ರಾತ್ರಿ ಆಗುತ್ತಿದ್ದಂತೆ ನೀರಿನ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಗಳಿದೆ.”

ರಂಗಯ್ಯ, ಇಇ, ಕಬಿನಿ ಜಲಾಶಯ

” ಕಬಿನಿ ಜಲಾಶಯ ತುಂಬಿರುವುದು ಸಂತಸ ತಂದಿದೆ. ಈ ಭಾಗದ ರೈತರು, ಸಾರ್ವಜನಿಕರು ಹಾಗೂ ಕೆರೆಕಟ್ಟೆಗಳಿಗೆ, ಕುಡಿಯುವ ನೀರಿಗೆ ಸಮಸ್ಯೆ ನಿವಾರಣೆಯಾಗಲಿದೆ. ಜಲಾಶಯಕ್ಕೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜೊತೆ ಮಾತನಾಡಿದ್ದೇನೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಸರ್ಕಾರ ಕಬಿನಿ ಜಲಾಶಯ ಭರ್ತಿಯಾಗಿರುವುದರಿಂದ ನಿರಾಳವಾದಂತಾಗಿದೆ. ಈ ಭಾಗದ ನೀರಾವರಿ ಪ್ರದೇಶ ಮತ್ತು ತಾಲ್ಲೂಕಿನ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದ್ದೇನೆ.”

ಅನಿಲ್ ಚಿಕ್ಕಮಾದು, ಶಾಸಕರು

 

 

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

2 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

9 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

9 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

9 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

9 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

9 hours ago