ಕಳೆದ ಕೆಲ ತಿಂಗಳುಗಳಿಂದ ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತಿರುವ ‘ಕಗ್ಗದ ದೀವಟಿಕೆ ಅಂಕಣವು ಡಿ.ವಿ.ಗುಂಡಪ್ಪನವರ ಕಗ್ಗಗಳನ್ನು ವಿವರಣೆ ಸಹಿತ ತಿಳಿಸಿಕೊಡುತ್ತಿದೆ.
ವಿದ್ವಾನ್ ಕೃ.ಪಾ.ಮಂಜುನಾಥ್‌ರವರು ತಮ್ಮ ಬರಹದಲ್ಲಿ ಅಚ್ಚುಕಟ್ಟಾಗಿ ವಿವರಣೆ ನೀಡುತ್ತಿದ್ದು, ಇದನ್ನೇ ಸ್ಫೂರ್ತಿಯಾಗಿಸಿಕೊಂಡು ನಮ್ಮ ಸ್ನೇಹಿತರೆಲ್ಲ ಸೇರಿ ಒಂದು ತಂಡವನ್ನು ಕಟ್ಟಿಕೊಂಡು ವಾರಕ್ಕೊಮ್ಮೆ ಒಂದೆಡೆ ಸೇರಿ ‘ಮಂಕು ತಿಮ್ಮನ ತರಗತಿ’ಯನ್ನು ನಡೆಸುತ್ತಿದ್ದೇವೆ. ಈ ತಂಡದಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಎಲ್‌ಐಸಿ ಅಧಿಕಾರಿಗಳು, ಲೇಖಕರು ಹಾಗೂ ಗೃಹಿಣಿಯರು ಸೇರಿದಂತೆ ಒಟ್ಟು ಹದಿನೈದು ಮಂದಿ ಇದ್ದು, ಕಳೆದ 6 ತಿಂಗಳುಗಳಿಂದ ಮಂಕುತಿಮ್ಮನ ಪದ್ಯವನ್ನು ಓದಿ ಭಾವಾರ್ಥವನ್ನು ತಿಳಿದುಕೊಳ್ಳುತ್ತಿದ್ದೇವೆ. ಇವು ನಮಗೆ ಜೀವನದ ಮೌಲ್ಯವನ್ನು ಬೋಧಿಸುತ್ತಿವೆ. ಇದರೊಟ್ಟಿಗೆ ನಿವೃತ್ತ ಪ್ರಾಂಶುಪಾಲ ವಂಕಟೇಶ ಮೂರ್ತಿಯವರು ಮಂಕುತಿಮ್ಮನ ಕಗ್ಗಗಳ ಕುರಿತು ಅಪಾರ ಜ್ಞಾನವನ್ನು ಹೊಂದಿದ್ದು, ಅವರಿಂದಲೂ ಅನೇಕ ವಿಚಾರಗಳು ತಿಳಿಯುತ್ತಿವೆ.
-ಎಂ.ಎಸ್.ಉಷಾ ಪ್ರಕಾಶ್, ಎಸ್‌ಬಿಎಂ ಕಾಲೋನಿ, ಮೈಸೂರು,
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…
ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ…
ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್‌ನ ಹೊರ್ಮುಜ್…
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…