Andolana originals

ಕಂಜನ್‌ ಪಟ್ಟದ ಆನೆ, ಭೀಮ ನಿಶಾನೆ ಆನೆ!

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನವರಾತ್ರಿ ವೇಳೆ ಅರಮನೆಯಲ್ಲಿ ರಾಜವಂಶಸ್ಥರಿಂದ ನಡೆಯುವ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್ ಹಾಗೂ ಪಟ್ಟದ ನಿಶಾನೆಯಾಗಿ ಭೀಮ ಆನೆ ಆಯ್ಕೆಯಾಗಿವೆ. ಅ. ೩ರಿಂದ ಅ. ೧೨ರವರೆಗೆ ನವರಾತ್ರಿ ಮಹೋತ್ಸವ ನಡೆಯಲಿದ್ದು, ರಾಜವಂಶಸ್ಥರು ನಡೆಸುವ ಧಾರ್ಮಿಕ ಕಾರ್ಯದಲ್ಲಿ ಪಟ್ಟದ ಆನೆ, ಪಟ್ಟದ ಹಸು, ಒಂಟೆ, ಕಳಸ ಹೊತ್ತ ಮಹಿಳೆಯರೊಂದಿಗೆ ಕೋಡಿ ಸೋಮೇಶ್ವರ ದೇವಾಲಯದ ಮುಂಭಾಗದಿಂದ ಅರಮನೆಯ ಕನ್ನಡಿ ತೊಟ್ಟಿಯವರೆಗೂ ದೇವತಾ ಮೂರ್ತಿಯನ್ನು ತೆಗೆದುಕೊಂಡು ಹೋಗುವ ಪದ್ಧತಿಯಿದೆ.

ಈ ಹಿನ್ನೆಲೆಯಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಭಾನುವಾರ ಪಟ್ಟದ ಆನೆ ಆಯ್ಕೆ ಮಾಡುವ ಪ್ರಕ್ರಿಯೆ ನಡೆಸಿದರು. ರಾಜವಂಶಸ್ಥರ ಕೋರಿಕೆ ಮೇರೆಗೆ ದಸರಾ ಗಜಪಡೆಯ ಗಂಡಾನೆಗಳಾದ ಭೀಮ, ಕಂಜನ್, ಸುಗ್ರೀವ, ಗೋಪಿ, ಏಕಲವ್ಯ ಹಾಗೂ ಹೆಣ್ಣಾನೆಗಳಾದ ಲಕ್ಷಿ ಮತ್ತು ಹಿರಣ್ಯ ಆನೆಗಳನ್ನು ಅರಮನೆಯ ಕನ್ನಡಿ ತೊಟ್ಟಿ ಬಳಿ ಕರೆದೊಯ್ಯಲಾಗಿತ್ತು. ೫ ಗಂಡಾನೆಗಳನ್ನು ಪರಿಶೀಲಿಸಿದ ಪ್ರಮೋದಾ ದೇವಿ ಒಡೆಯರ್ ಅವರು ಕಂಜನ್ ಆನೆಯನ್ನು ಪಟ್ಟದ ಆನೆಯಾಗಿಯೂ, ಭೀಮಾ ಆನೆಯನ್ನು ಪಟ್ಟದ ನಿಶಾನೆಯಾಗಿಯೂ ಆಯ್ಕೆ ಮಾಡಿದರು.

ಪಟ್ಟದ ಆನೆ, ಪಟ್ಟದ ನಿಶಾನೆ ಆನೆ ಆಯ್ಕೆ ನಡೆದಿದೆ. ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರು ೫ ಗಂಡಾನೆ, ೨ ಹೆಣ್ಣಾನೆಗಳನ್ನು ಇಂದು ಪರಿಶೀಲಿಸಿದರು. ಅದರಲ್ಲಿ ಪಟ್ಟದ ಆನೆಯಾಗಿ ಕಂಜನ್ ಆನೆಯನ್ನು ಹಾಗೂ ಪಟ್ಟದ ನಿಶಾನೆಯಾಗಿ ಭೀಮ ಆನೆಯನ್ನು ಆಯ್ಕೆ ಮಾಡಿದ್ದಾರೆ. -ಡಾ. ಐ. ಬಿ. ಪ್ರಭುಗೌಡ, ಡಿಸಿಎಫ್, ವನ್ಯಜೀವಿ ವಿಭಾಗ.

andolana

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

6 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

6 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

6 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

7 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

7 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

13 hours ago