Andolana originals

ಇಂದಿನಿಂದ ಮಾ.13ರವರೆಗೆ ಕಪ್ಪಡಿ ಕ್ಷೇತ್ರದ ಜಾತ್ರೆ

• ರಾಜ್ಯದ ವಿವಿಧ ಕಡೆಗಳಿಂದ ಜನರ ಆಗಮನ • ಒಂದು ತಿಂಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್

ಕೆ.ಆರ್.ನಗರ : ತಾಲ್ಲೂಕಿನ ಕಪ್ಪಡಿ ಕ್ಷೇತ್ರದ ಜಾತ್ರಾ ಮಹೋತ್ಸವವು ಫೆ.15ರಿಂದ ಮಾ.13 ರವರೆಗೆ ಒಂದು ತಿಂಗಳ ಕಾಲ ನಡೆಯಲಿದೆ.

ಘರ್ಷಣೆ, ಕಲಹ, ಒಡಕು ಮತ್ತು ಪರಸರ ಭಿನ್ನಾಭಿಪ್ರಾಯಗಳು ಕಂಡು ಬಂದರೆ ಇಂದಿಗೂ ಯಾವುದೇ ಕುಲ, ಜಾತಿ, ಧರ್ಮ, ಸಮುದಾಯದ ಭೇದವಿಲ್ಲದೆ ಕಪ್ಪಡಿಗೆ ಬಂದು ಸತ್ಯ ಮಾಡು ಎಂದು ಹೇಳುವುದು ವಾಡಿಕೆಯಾಗಿದೆ.

ಕಪ್ಪಡಿ ಕ್ಷೇತ್ರವು ಜಾನಪದ ಕಾವ್ಯ ಹಾಗೂ ಧಾರ್ಮಿಕ ಆಚರಣೆಯ ಪ್ರಮುಖ ಕೇಂದ್ರ ಬಿಂದುವಾಗಿದ್ದು, ಇಲ್ಲಿ ಪ್ರತಿ ವರ್ಷ ನಡೆಯುವ ವಾರ್ಷಿಕ ಜಾತ್ರೆಯು ವಿಶಿಷ್ಟವಾದುದ್ದಾಗಿ, ಮಹಾ ಶಿವರಾತ್ರಿಯಂದು ಆರಂಭವಾಗಿ ಯುಗಾದಿ ಹಬ್ಬದವರೆಗೂ ಒಂದು ತಿಂಗಳ ನಿರಂತರವಾಗಿ ನಡೆಯಲಿದೆ. ಇಲ್ಲಿಗೆ ಕೇರಳ ರಾಜ್ಯದ ಗಡಿಭಾಗ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಮತ್ತು ಉತ್ತರ ಕರ್ನಾಟಕದ ನಾನಾ ಭಾಗಗಳಿಂದಲೂ ಭಕ್ತ ಸಾಗರ ಹರಿದು ಬರುತ್ತದೆ.

ಕ್ಷೇತ್ರದಲ್ಲಿ ಮೂರ್ತಿ ಇಲ್ಲ : ಇಲ್ಲಿ ಯಾವುದೇ ರೀತಿಯ ಮೂರ್ತಿ, ವಿಗ್ರಹ ಇರುವುದಿಲ್ಲ. ಇಲ್ಲಿರುವ ಉರಿಗಣ್ಣು ರಾಚಪ್ಪಾಜಿಯವರ ಗದ್ದುಗೆಯೇ ಸಮಸ್ತ ಪೂಜೆಯ ಕೇಂದ್ರ ಬಿಂದುವಾಗಿದೆ. ಅದಕ್ಕೆ ಪೂಜೆ-ಪುನಸ್ಕಾರಗಳು ನಡೆಯುತ್ತವೆ. ಆದರೆ ಇಲ್ಲಿಗೆ ಭಕ್ತರು ಪೂಜೆಗೆ ತರುವ ತೆಂಗಿನಕಾಯಿಯನ್ನು ಒಡೆಯುವುದಿಲ್ಲ, ಭಕ್ತರಿಗೂ ಹಿಂದಿರುಗಿಸುವುದಿಲ್ಲ. ಇದು ಈ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ.

ಧರೆಗೆ ದೊಡ್ಡವರೆಂದೇ ಹೆಸರುವಾಸಿಯಾಗಿರುವ ರಾಚಪ್ಪಾಜಿ, ಚನ್ನಾಜಮ್ಮ ಆ ಕಾಲದ ಆರ್ಥಿಕ, ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿದ್ದವರು. ಮೈಸೂರು ಅರಸರಿಂದ ಪೂಜೆ ಸ್ವೀಕರಿಸಿ ಎಡತೊರೆ, ಚಂದಗಾಲು ಮಾರ್ಗವಾಗಿ ಸಾಗಿ ದಟ್ಟ ಕಾಡಿನಿಂದ ಆವೃತವಾದ ಕಪ್ಪಡಿ ಕ್ಷೇತ್ರದಲ್ಲಿ ನೆಲೆ ನಿಂತರೆಂದು ಇತಿಹಾಸ ತಿಳಿಸುತ್ತದೆ.

ಉರಿಗದ್ದುಗೆ ಮಹಿಮೆ ಅಪಾರ : ಒಮ್ಮೆ ಎಡತೊರೆಯ ಉಪ್ಪಲಗಶೆಟ್ಟಿ ಎಂಬಾತನ ಕನಸಿನಲ್ಲಿ ಕಾಣಿಸಿಕೊಂಡ ರಾಚಪ್ಪಾಜಿಯವರು ತಮಗೆ ಶಿವಯೋಗ ಮಂದಿರವನ್ನು ನಿರ್ಮಾಣ ಮಾಡಿಕೊಡುವಂತೆ ಪ್ರೇರಣೆ ನೀಡಿದರು. ಗುರುವಿನ ಆಣತಿಯಂತೆ ಜಲ ಬಾವಿಯನ್ನು ತೋಡಿ ನಂದಾ ದೀವಿಗೆ ಗೂಡನ್ನು ಕೊರೆದ ಆತ ವರವೊಂದನ್ನು ಬೇಡುತ್ತಾನೆ. ಉಪ್ಪಲಗಶೆಟ್ಟಿಯ ತನ್ನ ಬಯಕೆಯಂತೆ ಉರಿ ಗದ್ದುಗೆಯ ಮೇಲೆ ಇರುವ ರುಮಾಲು ಪಡೆಯಬೇಕೆಂದು ಆರತಿ ಇಡುತ್ತಾನೆ. ಆದರೆ ಅದು ಸಾಧ್ಯವಾಗುವುದಿಲ್ಲ. ಅದಕ್ಕೆ ಕಾರಣ ಹೆಸರಿನಂತೆಯೇ ಬಹಳ ಶಕ್ತಿಶಾಲಿ, ಉರಿ ಉರಿ ಗದ್ದುಗೆಯಾಗಿದ್ದು, ಈಗಲೂ ಈ ಗದ್ದುಗೆ ಮೇಲಕ್ಕೆ ಜೋಳವನ್ನು ಎಸೆದರೆ ಪುರಿಯಾಗಿ ಸಿಡಿಯುತ್ತವೆ. ಈ ನರರ ಹಂಗು ನಮಗಿನ್ನು ಬೇಡವೆಂದು ರಾಚಪ್ಪಾಜಿ ತನ್ನ ಸಹೋದರಿ ಚನ್ನಾಜಮ್ಮನವರೊಡನೆಬಾವಿಗಿಳಿದು ಶಾಶ್ವತಶಿವಯೋಗದಲ್ಲಿ ನೆಲೆಸಿದ್ದಾರೆ ಎಂಬುದನ್ನು ಪುರಾಣದಿಂದ ತಿಳಿಯಬಹುದು.

ಅ೦ದಿನಿಂದಲೂ ಕಪ್ಪಡಿ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಮೈಸೂರು ಅರಸರಿಂದ ಪೂಜಾ ಕೈಂಕರ್ಯಗಳು ನಡೆದು ಬಂದಿವೆ. ನೀಲಗಾರರು, ಕಂಸಾಳೆಯವರು ಹಾಡುವ ಮಂಟೇಸ್ವಾಮಿ ಕಾವ್ಯದಲ್ಲಿ ಕಪ್ಪಡಿ ರಾಚಪ್ಪಾಜಿಯ ಮಹಿಮೆ ಮತ್ತು ಪವಾಡಗಳ ದರ್ಶನವಾಗುತ್ತದೆ.

ಪ್ರತಿ ವರ್ಷ ಶಿವರಾತ್ರಿಯಿಂದ ಯುಗಾದಿಯವರೆಗೆ ನಡೆಯುವ ಕಪ್ಪಡಿ ಜಾತ್ರೆಯಲ್ಲಿ ಭಕ್ತಾದಿಗಳು ಗುಮ್ಮಿ ನಿರ್ಮಿಸಿಕೊಂಡು ವಾರಗಟ್ಟಲೆ ಉಳಿದುಕೊಂಡು ಸಂಬಂಧಿಕರು, ನೆಟ್ಟರಿಷ್ಟರನ್ನು ಕರೆದು ದೇವರಿಗೆ ನೈವೇದ್ಯ ರೂಪದಲ್ಲಿ ಪೂಜೆ ಸಲ್ಲಿಸುತ್ತಾರೆ. ಸಿದ್ದಪ್ಪಾಜಿ ಗುಡ್ಡರು ಪೂಜೆ ಸಲ್ಲಿಸಿದ ನಂತರ ಊಟ ಬಡಿಸಲಾಗುತ್ತದೆ.

ಮಳವಳ್ಳಿ ಹಾಗೂ ಬೊಪ್ಪಗೌಡನಪುರದ ಗುರು ಮನೆತನದವರು ಪ್ರತಿ ವರ್ಷ ಸರದಿಯಂತೆ ಜಾತ್ರೆ ಪ್ರಾರಂಭವಾದಾಗಿನಿಂದ ಮುಗಿಯುವವರೆಗೂ ಇಲ್ಲಿಯೇ ಇದ್ದು, ಪೂಜಾ ಕೈಂಕರ್ಯಗಳನ್ನು ನಡೆಸಿಕೊಡುತ್ತಾರೆ. ಈ ಬಾರಿ ಮಳವಳ್ಳಿ ತಾಲ್ಲೂಕಿನ ಆದಿ ಹೊನ್ನನಾಯಕನಹಳ್ಳಿ ಮಂಟೇಸ್ವಾಮಿ ಮತ್ತು ಕಪ್ಪಡಿ ಮಠದ ಎಂ.ಎಲ್.ವರ್ಚಸ್ವಿ ಶ್ರೀಕಂಠ ಸಿದ್ಧಲಿಂಗ ರಾಜೇ ಅರಸ್ ಅವರ ಉಸ್ತುವಾರಿಯಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಲಿವೆ.

ಮೈಸೂರು ಜಿಲ್ಲೆಯಲ್ಲಿ ತಿಂಗಳ ಕಾಲ ನಡೆಯುವ ಜಾತ್ರೆ ಇದ್ದರೆ ಅದು ಕಪ್ಪಡಿ ಕ್ಷೇತ್ರದ ಮಂಟೇಸ್ವಾಮಿ ಜಾತ್ರೆ. ರಾಜಕೀಯ ಘರ್ಷಣೆ, ಕಲಹ, ಒಡಕು ಮತ್ತು ಪರಸ್ಪರ ಭಿನ್ನಾಭಿ ಪ್ರಾಯಗಳು ಕಂಡು ಬಂದರೆ ಇಂದಿಗೂ ಯಾವುದೇ ಕುಲ, ಜಾತಿ, ಧರ್ಮ, ಸಮುದಾಯದ ಭೇದವಿಲ್ಲದೆ ಕಪ್ಪಡಿಗೆ ಬಂದು ಸತ್ಯ ಮಾಡು ಎಂದು ಹೇಳುವುದು ವಾಡಿಕೆ ಯಾಗಿ ದೆ. ಇಲ್ಲಿ ಯಾವುದೇ ಬಲಿ ಪೀಠವಿಲ್ಲ ರಾಚಪ್ಪಾಜಿ, ಚನ್ನಾಜಮ್ಮ ಗದ್ದುಗೆ ಮಾತ್ರ, ಭಕ್ತರು ಮಾಂಸಾಹಾರಿ ಮತ್ತು ಸಸ್ಯಾಹಾರಿ ಅಡುಗೆ ಮಾಡಿ ಬಂದಂತಹ ಬಂದು ಮಿತ್ರರಿಗೆ ಉಣ ಬಡಿಸುತ್ತಾರೆ.
ಕಪ್ಪಡಿ ಮಧು, ಮಠದ ಭಕ್ತ.

ಆಂದೋಲನ ಡೆಸ್ಕ್

Recent Posts

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

7 mins ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

33 mins ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

1 hour ago

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…

2 hours ago

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

3 hours ago

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

6 hours ago