Andolana originals

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್

೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ 

ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ ಕಾರಿಗನಹಳ್ಳಿ ಅಣೆಕಟ್ಟೆಯು ಸಂಪೂರ್ಣ ಬತ್ತಿ ಹೋಗಿದೆ. ಸುತ್ತಮುತ್ತಲಿನ ಸುಮಾರು ೪ ಸಾವಿರ ಕೊಳವೆ ಬಾವಿಗಳಲ್ಲಿ ಅಂತರ್ಜಲ ಕುಸಿದಿದ್ದು, ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.

೧೦೦ ವರ್ಷಗಳ ಹಿಂದೆ ಮೈಸೂರು ಮಹಾರಾಜರು ನಿರ್ಮಿಸಿದ್ದ ಅಣೆಕಟ್ಟೆ: ಸುಮಾರು ೧೦೦ ವರ್ಷಗಳ ಹಿಂದೆ ಮೈಸೂರು ಮಹಾರಾಜರು ನಿರ್ಮಿಸಿಕೊಟ್ಟ ಈ ಕಾರಿಗನಹಗಳ್ಳಿ ಅಣೆಕಟ್ಟೆಯು ಸುಮಾರು ೨೦ ಅಡಿ ಎತ್ತರ, ಸುಮಾರು ೧೫೦ ಮೀಟರ್ ಉದ್ದವಿದೆ. ಸುಮಾರು ೨ ಟಿಎಂಸಿ ನೀರು ತುಂಬುವ ಸಾಮರ್ಥ್ಯವನ್ನು ಹೊಂದಿದೆ. ಈ ಅಣೆಕಟ್ಟೆಯಿಂದ ಎರಡೂ ಬದಿಯಲ್ಲೂ ಕಾಲುವೆಗಳನ್ನು ನಿರ್ಮಿಸಲಾಗಿದೆ. ಎರಡೂ ಕಾಲುವೆಗಳಲ್ಲಿ ಒಟ್ಟು ೪೦೦ ಎಕರೆ ಜಮೀನಿಗೆ ನೀರುಣಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಅಣೆಕಟ್ಟೆಯಲ್ಲಿ ನೀರಿಲ್ಲದೇ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿದ್ದು, ಸುಮಾರು ೧೦೦೦ ಅಡಿ ಕೊರೆದರೂ ಕೊಳವೆ ಬಾವಿಗಳಲ್ಲಿ ನೀರು ಬರುತ್ತಿಲ್ಲ. ಕೂಡಲೇ ಈ ಅಣೆಕಟ್ಟೆಗೆ ಹೇಮಾವತಿ ಜಲಾಶಯದಿಂದ ನೀರನ್ನು ತುಂಬಿಸಿದಲ್ಲಿ ಅಂತರ್ಜಲ ಮರುಪೂರಣವಾಗಿ ಕಾರಿಗನಹಳ್ಳಿ, ಬೀಚೇನಹಳ್ಳಿ, ರಾಮನಹಳ್ಳಿ, ಮಾಣಿಕ್ಯನಹಳ್ಳಿ, ಲಿಂಗಾಪುರ ಮತ್ತಿತರ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ.

” ಕಾರಿಗನಹಳ್ಳಿ, ಬೀಚೇನಹಳ್ಳಿ, ರಾಮನಹಳ್ಳಿ, ಮಾಣಿಕ್ಯನಹಳ್ಳಿ, ಲಿಂಗಾಪುರ ಸೇರಿದಂತೆ ಹಲವು ಗ್ರಾಮಗಳ ಜನ ಜಾನುವಾರುಗಳಿಗೂ ಜೀವನಾಧಾರವಾಗಿದ್ದ ಅಣೆಕಟ್ಟೆ ಬರಿದಾಗಿರುವ ಕಾರಣ ತೀವ್ರ ಸಂಕಷ್ಟ ಎದುರಾಗಿದೆ. ಕೂಡಲೇ ಹೇಮಾವತಿ ನೀರಾವರಿ ಅಧಿಕಾರಿಗಳು ಈ ಅಣೆಕಟ್ಟೆಗೆ ಹೇಮಾವತಿ ಕಾಲುವೆಯಿಂದ ನೀರು ತುಂಬಿಸುವ ಮೂಲಕ ಈ ಭಾಗದ ರೈತರಿಗೆ, ಜನ-ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು.”

ಕಾರಿಗನಹಳ್ಳಿ ಕುಮಾರ್, ಅಧ್ಯಕ್ಷರು, ತಾಲ್ಲೂಕು ಕಬ್ಬು ಬೆಳೆಗಾರರ ಸಂಘ

” ಕಾರಿಗನಹಳ್ಳಿ ಬಳಿ ೧೯೨೬ರಲ್ಲಿ ಹೇಮಾವತಿ ನದಿಯ ಉಪ ನದಿಯಾಗಿರುವ ಕೇತಕಾನದಿಗೆ ಅಡ್ಡಲಾಗಿ ಮೈಸೂರು ಮಹಾರಾಜರು ಕಾರಿಗನಹಳ್ಳಿ ಅಣೆಕಟ್ಟೆ ನಿರ್ಮಿಸುವ ಮೂಲಕ ಈ ಭಾಗದ ಏಳೆಂಟು ಗ್ರಾಮಗಳ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಸುಮಾರು ೨ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಕಾರಿಗನಹಳ್ಳಿ ಕಿರು ಜಲಾಶಯ ಸುಮಾರು ೫೦ ವರ್ಷಗಳ ನಂತರ ಬತ್ತಿ ಹೋಗಿದೆ. ಸಂಬಂಧಪಟ್ಟವರು ಕೂಡಲೇ ಹೇಮಾವತಿ ಜಲಾಶಯದ ಮೂಲಕ ಕಾರಿಗನಹಳ್ಳಿ ಅಣೆಕಟ್ಟೆಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು.”

ರಂಗಸ್ವಾಮಿ, ಶಿಕ್ಷಕರು ಹಾಗೂ ಹವ್ಯಾಸಿ ಇತಿಹಾಸ ಸಂಶೋಧಕ

 

 

 

ಆಂದೋಲನ ಡೆಸ್ಕ್

Recent Posts

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

26 seconds ago

ಗೌರಿ-ಗಣೇಶ ಹಬ್ಬಕ್ಕೆ ಕಂಗೊಳಿಸುತ್ತಿರುವ ಗೌರಿ ಹೂವು

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ಕಾಡುಗಳಲ್ಲಿ ಅರಳಿರುವ ವಿಶಿಷ್ಟ ಗೌರಿ ಹೂವು ಮತ್ತಷ್ಟು ಮೆರುಗು ನೀಡುತ್ತಿದೆ.…

11 mins ago

ಕೋಟೆಯಲ್ಲಿ ಗೌರಿ-ಗಣೇಶ ಹಬ್ಬದ ಆಚರಣೆಗೆ ಸಜ್ಜು

ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…

19 mins ago

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

18 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

22 hours ago