Andolana originals

ಕಾರ್ಕಹಳ್ಳಿ ಬಸವೇಶ್ವರ ಜಾತ್ರೆ: ಇಂದು ಕೊಂಡೋತ್ಸವ

ಅಣ್ಣೂರು ಸತೀಶ್

ನಾಳೆ ಸಂಜೆ ವಿಜೃಂಭಣೆಯ ರಥೋತ್ಸವ,ಅನ್ನಸಂತರ್ಪಣೆ 

ಭಾರತೀನಗರ: ಕಾರ್ಕಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೩ರ ಮಂಗಳವಾರ ಕೊಂಡೋತ್ಸವ ನಡೆಯಲಿದ್ದು, ಮಾ.೪ರ ಬುಧವಾರ ವಿಜೃಂಭಣೆಯ ರಥೋತ್ಸವ ಜರುಗಲಿದೆ.

ಪ್ರತಿ ವರ್ಷ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲ ಗ್ರಾಮಗಳ ಜನರಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಭಕ್ತರು ರಥೋತ್ಸವಕ್ಕೆ ಆಗಮಿಸುತ್ತಾರೆ.

ಸಾವಿರಾರು ಭಕ್ತರ ಘೋಷಗಳ ನಡುವೆ ರಥೋತ್ಸವ ಅತ್ಯಂತ ಸಡಗರ, ಸಂಭ್ರಮದಿಂದ ಜರುಗುತ್ತದೆ. ರಥೋತ್ಸವದ ಅಂಗವಾಗಿ ಭಾವ-ಮೈದುನರಾಗಿರುವ ಶ್ರೀ ಕಾಲ ಭೈರವೇಶ್ವರ ಬಸವ, ಚಿಕ್ಕರಸಿನಕೆರೆ ಬಸವಗಳು ಜೋಡಿ ಬಸವೇಶ್ವರ ಜಾತ್ರೆಗೆ ಮೆರುಗು ತರಲಿವೆ.

ಜಾತ್ರೆ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ದೇವಸ್ಥಾನವನ್ನು ಸುಣ್ಣ- ಬಣ್ಣಗಳಿಂದ ಸಿಂಗರಿಸಲಾಗಿದೆ.ಮಾ.೨ರ ಸೋಮವಾರ ಬಂಡಿ ಉತ್ಸವ ಜರುಗಿತು. ಜತೆಗೆ ರಾತ್ರಿ ಅಗ್ನಿಕೊಂಡ, ಕರಗ, ಬಾಯಿ ಬೀಗ ಹಾಗೂ ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರ ಸ್ವಾಮಿ, ತೊರೆಬೊಮ್ಮನಹಳ್ಳಿ ಪಟ್ಟಲದಮ್ಮ ದೇವರು ಮತ್ತು ಕಾರ್ಕಹಳ್ಳಿ ಶ್ರೀಬಸವೇಶ್ವರ ಸ್ವಾಮಿ ದೇವರ ಉತ್ಸವ ಜರುಗಿತು.

ಮಾ.೩ ರ ಮಂಗಳವಾರ ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೩ ಗಂಟೆಯವರೆಗೆ ಅನ್ನಸಂತರ್ಪಣೆ ಹಾಗೂ ಪೂಜಾಕಾರ್ಯ ಕ್ರಮಗಳು ನಡೆಯಲಿವೆ. ಮಾ.೪ರ ಬುಧವಾರ ಸಂಜೆ ೪ ಗಂಟೆಗೆ ರಥೋತ್ಸವ ಜರುಗಲಿದೆ. ಮಾ.೫ರ ಗುರುವಾರ ದೇವೇಗೌಡನದೊಡ್ಡಿ ಗ್ರಾಮದಲ್ಲಿ ಕಾರ್ಕಹಳ್ಳಿ ಶ್ರೀ ಬಸವೇಶ್ವರ ಉತ್ಸವ ಹಾಗೂ ಮಾ.೬ರ ಶುಕ್ರವಾರ ಶ್ರೀ ಮುತ್ತುರಾಯಸ್ವಾಮಿ ಸೇವೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

” ಕಾರ್ಕಹಳ್ಳಿ ಗ್ರಾಮದಲ್ಲಿ ಮೂರ‍್ನಾಲ್ಕು ದಿನಗಳ ಕಾಲ ನಡೆಯುವ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ವನ್ನು ಅಚ್ಚುಕಟ್ಟಾಗಿ ನಡೆಸಲು ತಾಲ್ಲೂಕು ಆಡಳಿತಕ್ಕೆ ಸೂಚನೆ ನೀಡಲಾಗಿದೆ. ಪೂಜಾ ಕೈಂಕರ್ಯಗಳು ಪ್ರಾರಂಭಗೊಂಡಿವೆ. ದೇವಸ್ಥಾನದ ಅಭಿವೃದ್ಧಿಗಾಗಿ ಮುಜರಾಯಿ ಇಲಾಖೆಯಿಂದ ೧೦ ಲಕ್ಷ ರೂ ಬಿಡುಗಡೆಯಾಗಿದೆ. ನನ್ನೊಂದಿಗೆ ಗ್ರಾಮದ ಯಜಮಾನರು ಕೈಜೋಡಿಸಿದ್ದಾರೆ.”

– ಮಧು ಜಿ.ಮಾದೇಗೌಡ, ವಿಧಾನ ಪರಿಷತ್ ಸದಸ್ಯ

” ನಾನು ೧೯೯೯ರಲ್ಲಿ ಚುನಾವಣೆ ಪ್ರಚಾರಕ್ಕೆ ಬಂದಾಗ ಕಾರ್ಕಹಳ್ಳಿ ಬಸವೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಬಸವಪ್ಪನಿಂದ ಆಶೀರ್ವಾದ ಪಡೆದುಕೊಂಡಿದ್ದೆ. ನನಗೆ ಮೊದಲ ಬಾರಿಯ ಚುನಾವಣೆಯಲ್ಲಿ ಜಯ ಸಿಕ್ಕಿತು. ನಂತರದ ದಿನಗಳಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಿದ್ದೇನೆ.”

– ಡಿ.ಸಿ.ತಮ್ಮಣ್ಣ, ಮಾಜಿ ಸಚಿವ

” ಕಾರ್ಕಹಳ್ಳಿ ಬಸವೇಶ್ವರ ಭ್ರಷ್ಟಾಚಾರಿಗಳಿಗೆ, ಕಳ್ಳಕಾಕರಿಗೆ, ಜಮೀನು ಒತ್ತುವರಿದಾರರಿಗೆ ಸಿಂಹಸ್ವಪ್ನವಾಗಿದೆ. ತನ್ನ ಮಹಿಮೆಯನ್ನು ಮೆರೆಯುತ್ತಿರುವ ಬಸವಪ್ಪ ಮಂಡ್ಯಜಿಲ್ಲೆ ಮಾತ್ರವಲ್ಲದೆ ರಾಜ್ಯಾದ್ಯಂತ ಭಕ್ತರನ್ನು ಹೊಂದಿದೆ.”

– ಕಾರ್ಕಹಳ್ಳಿ ಬಸವರಾಜು, ಜಾ.ದಳ ಮುಖಂಡರು

 

 

 

ಆಂದೋಲನ ಡೆಸ್ಕ್

Recent Posts

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

11 mins ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

24 mins ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

51 mins ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

59 mins ago

ಮಾರ್ಚ್.‌10ರಂದು ಡಿಕೆಶಿ ಡಿನ್ನರ್‌ ಪಾರ್ಟಿ: ಸಿದ್ದರಾಮಯ್ಯಗೂ ಆಹ್ವಾನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.10ರಂದು ಡಿನ್ನರ್‌ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌6ರಂದು ಡಿ.ಕೆ.ಶಿವಕುಮಾರ್‌ ಕೆಪಿಸಿಸಿ…

2 hours ago

ಫೋನ್‌ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್‌ ತಿರುಗೇಟು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು…

2 hours ago