ಜನಾರ್ಧನ್, ಯೋಗಿರಾಜ್, ಡಾ.ಸತ್ಯನಾರಾಯಣ, ಲಲಿತಾ ರಾವ್, ರಾಮು, ಡಾ.ಪದ್ಮಾ ಶೇಖರ್, ಪುಟೀರಮ್ಮ, ರಾಜಗೋಪಾಲ್‌ಗೆ ಪ್ರಶಸ್ತಿ
ಬೆಂಗಳೂರು: ಸಾಹಿತ್ಯ, ಇತಿಹಾಸ, ಕಲೆ, ಕ್ರೀಡೆ, ಪತ್ರಿಕೋದ್ಯಮ, ಚಲನಚಿತ್ರ, ಕೃಷಿ, ನಾಡು, ನುಡಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 69 ಸಾಧಕರಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.
ಮೈಸೂರಿನ ಎಚ್.ಜನಾರ್ಧನ್ (ಜನ್ನಿ) (ರಂಗ ಭೂಮಿ), ಅರುಣ್ ಯೋಗಿರಾಜ್ (ಶಿಲ್ಪಕಲೆ), ಲಲಿತಾ ರಾವ್ (ನೃತ್ಯ), ಡಿ.ರಾಮು (ಸಂಗೀತ), ಡಾ.ಸತ್ಯನಾರಾಯಣ (ವೈದ್ಯಕೀಯ), ಮಂಡ್ಯದ ಪಿ.ರಾಜಗೋಪಾಲ್(ಸಂಗೀತ), ಕೊಡಗಿನ ಡಾ. ಪದ್ಮಾ ಶೇಖರ್ (ಶಿಕ್ಷಣ ಕ್ಷೇತ್ರ), ಚಾಮರಾಜ ನಗರದ ಪುಟ್ಟರಮ್ಮ (ಕೃಷಿ ಕ್ಷೇತ್ರ) ರಾಜ್ಯೋತ್ಸವ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಪ್ರಶಸ್ತಿಯು ಐದು ಲಕ್ಷ ರೂ. ಮೊತ್ತ ಹಾಗೂ 25 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಕರ್ನಾಟಕ ಸಂಭ್ರಮ -50 ಸುವರ್ಣ ಮಹೋತ್ಸವ ಪ್ರಶಸ್ತಿಯು 50,000 ರೂ, ಹಾಗೂ ಪ್ರಶಸ್ತಿ ಫಲಕ ಹೊಂದಿದೆ.
ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತಿತರರು ಸಾಧಕರಿಗೆ ಪ್ರಶಸ್ತಿ ಪ್ರದಾ ಮಾಡಿ ಗೌರವಿಸಲಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿದರು. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ 50 ಸದಸ್ಯರಿರುವ ಆಯ್ಕೆ ಸಲಹಾ ಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿತ್ತು. ಒಟ್ಟು 1,575 ಭೌತಿಕ ಅರ್ಜಿಗಳು ಬಂದಿದ್ದವು. 7,438 ಇದಲ್ಲದೇ ಸೇವಾ ಸಿಂಧು ಮೂಲಕ 1,309 ಅರ್ಜಿಗಳು, ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕಷವಾಗಿ ಪರಿಶೀಲನೆ ಮಾಡಿ ಅರ್ಹರನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಪ್ರತಿಯೊಂದು ಜಿಲ್ಲೆಗೂ ಪ್ರಾತಿನಿಧ್ಯ ನೀಡಲಾಗಿದೆ ಹಾಗೂ ಸಾಮಾಜಿಕ ನ್ಯಾಯವನ್ನು ಕಾಪಾಡಿಕೊಳ್ಳಲಾಗಿದೆ. ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಕರ್ನಾಟಕ ಸಂಭ್ರಮ -50 ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು 50 ಸಾಧಕ ಮಹಿಳೆ ಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69 + 100 ಸೇರಿ ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ತಂಗಡಗಿ ತಿಳಿಸಿದರು.
ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ. ಬಯಲಾಟ ಕ್ಷೇತ್ರದಲ್ಲಿ ಹೆಸರು ಮಾಡಿರುವ ವಿಜಯನಗರ ಜಿಲ್ಲೆಯ 92 ವರ್ಷದ ನಾರಾಯಣಪ್ಪ ಶಿಳ್ಳೇಕ್ಯಾತ, ಜಾನಪದ ಕ್ಷೇತ್ರದಲ್ಲಿ ಅಂಧ ಕಲಾವಿದರಾದ ಬೀದರ್ ಜಿಲ್ಲೆಯ ನರಸಿಂಹಲು ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ. ಇದರಲ್ಲಿ 13 ಮಹಿಳೆಯರು ಇದ್ದಾರೆ ಎಂದರು.
ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದ ಸಲಹಾ ಸಮಿತಿ
ಸಚಿವ ಶಿವರಾಜ ತಂಗಡಗಿ ನೇತೃತ್ವದ 50 ಮಂದಿಯ ಸಲಹಾ ಸಮಿತಿ 36 ಸದಸ್ಯರು ಮತ್ತು 13 ಪದನಿಮಿತ್ತ ಸದಸ್ಯರನ್ನು ಒಳಗೊಂಡಿತ್ತು. ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿರುವವರನ್ನು ಈ ಸಲಹಾ ಸಮಿತಿಗೆ ಸದಸ್ಯರನ್ನಾಗಿ ನೇಮಿಸಲಾಗಿತ್ತು. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ವಕೀಲ ಡಾ.ಸಿ.ಎಸ್.ದ್ವಾರಕಾನಾಥ್, ಬರಹಗಾರ ಮತ್ತು ಪರಿಸರವಾದಿ ನಾಗೇಶ್ ಹೆಗಡೆ, ಸಂಗೀತ ನಿರ್ದೇಶಕ ಹಂಸಲೇಖ, ನಿವೃತ್ತ ಐಎಎಸ್ ಅಧಿಕಾರಿ ರವಿಕುಮಾರ್, ನಟ ರವಿಚಂದ್ರನ್, ಕಲಬುರಗಿಯ ರಂಜಾನ್ ದರ್ಗಾ, ಕೃಷಿ ತಜ್ಞ ಮಲ್ಲಿಕಾರ್ಜುನ ಹೊಸಪಾಳ್ಯ, ಪತ್ರಕರ್ತ ಸಿದ್ದರಾಜು, ರಂಗಕರ್ಮಿ ಸಿ. ಬಸವಲಿಂಗಯ್ಯ, ಧಾರವಾಡದ ಹಿಂದೂಸ್ತಾನಿ ಗಾಯಕ ಪಂ.ಎಂ. ವೆಂಕಟೇಶ್ ಕುಮಾರ್, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಡಾ.ತಿಮ್ಮಪ್ಪ, ಕ್ರೀಡಾ ಪಟು ಎ.ಬಿ.ಸುಬ್ಬಯ್ಯ ಇತರರು ಸಮಿತಿಯಲ್ಲಿದ್ದ ಪ್ರಮುಖರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…