Andolana originals

ಯಳಂದೂರಿನಲ್ಲಿ ಕೇರಳ ಲಾಟರಿ ಮಾರಾಟ ದಂಧೆ

ಎಚ್.ಡಿ.ಮಣಿಕಂಠ ನಾಯಕ್

ಅಂಗಡಿಗಳು, ವ್ಯಕ್ತಿಗಳ ಮೂಲಕ ಸುಲಭವಾಗಿ ಸಿಗುತ್ತಿರುವ ಲಾಟರಿಗಳು; ಬಡಜನರಿಗೆ ಸಂಕಷ್ಟ 

ಯಳಂದೂರು: ತಾಲ್ಲೂಕಿನಲ್ಲಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳ ಮಾರಾಟ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು, ಕೂಲಿ ಕಾರ್ಮಿಕರು ಸೇರಿದಂತೆ ದುಡಿಯುವ ವರ್ಗದ ಜನರು ತಮ್ಮ ಕಷ್ಟದ ದುಡಿಮೆಯ ಹಣವನ್ನು ಲಾಟರಿ ಖರೀದಿಸಲು ವ್ಯಯಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕೇರಳ ರಾಜ್ಯದಲ್ಲಿ ನಡೆಯುವ ಲಾಟರಿ ಟಿಕೆಟ್‌ಗಳು ಯಳಂದೂರು ತಾಲ್ಲೂಕಿನ ವಿವಿಧ ಅಂಗಡಿಗಳು ಹಾಗೂ ವ್ಯಕ್ತಿಗಳ ಮೂಲಕ ಸಾರ್ವಜನಿಕರಿಗೆ ಸುಲಭವಾಗಿ ದೊರೆಯುತ್ತಿವೆ. ಕೇರಳದ ಸುಲ್ತಾನ್ ಬತ್ತೇರಿಯಿಂದ ಕೆಲವು ಏಜೆಂಟರು ಹೆಚ್ಚಿನ ಪ್ರಮಾಣದಲ್ಲಿ ಲಾಟರಿ ಟಿಕೆಟ್ಗಳನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಿಸುತ್ತಿದ್ದಾರೆ. ಕೆಲವರಿಗೆ ಹೆಚ್ಚಿನ ಮೊತ್ತದ ಬಹುಮಾನ ಬಂದಿರುವುದು ಮತ್ತಷ್ಟು ಜನರನ್ನು ಲಾಟರಿ ಖರೀದಿಯತ್ತ ಆಕರ್ಷಿಸುತ್ತಿದೆ.

ದಿನವಿಡೀ ದುಡಿದು ಜೀವನ ಸಾಗಿಸುವ ಕೂಲಿ ಕಾರ್ಮಿಕರು ತಮ್ಮ ಆದಾಯದ ಒಂದು ಭಾಗವನ್ನುಲಾಟರಿ ಖರೀದಿಗೆ ಮೀಸಲಿಡುತ್ತಿದ್ದಾರೆ. ಬಹುಮಾನದ ಆಸೆಯಿಂದ ಪ್ರತಿದಿನ ಹಣ ವ್ಯಯಿಸುತ್ತಿದ್ದು, ಇದರಿಂದ ಕುಟುಂಬದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರುತ್ತಿದೆ. ಲಾಟರಿ ಚಟಕ್ಕೆ ಒಳಗಾಗುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಜನರ ಹಿತದೃಷ್ಟಿಯಿಂದ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಳ್ಳಬೇಕಿದೆ.

ರಾಜ್ಯದಲ್ಲಿ ಲಾಟರಿ ಮಾರಾಟ ನಿಷೇಧವಿದ್ದರೂ ತಾಲ್ಲೂಕಿನಲ್ಲಿ ಇಷ್ಟೊಂದು ಬಹಿರಂಗವಾಗಿ ಕೇರಳ ಲಾಟರಿ ಮಾರಾಟ ನಡೆಯುತ್ತಿರುವುದು ಹೇಗೆ? ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ಈ ವಿಚಾರ ಬಂದಿಲ್ಲವೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿವೆ.

” ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿ ಅಕ್ರಮ ಮಾರಾಟ ತಡೆಗಟ್ಟಬೇಕು. ಕೆಲ ಕೆಳಹಂತದ ಅಧಿಕಾರಿಗಳು ಮೇಲಧಿಕಾರಿಗಳ ಗಮನಕ್ಕೆ ಬಾರದಂತೆ ಇಂತಹ ಚಟುವಟಿಕೆಗಳಿಗೆ ಪೋಷಣೆ ನೀಡುತ್ತಿರುವ ಅನುಮಾನಗಳಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.”

-ವರದರಾಜು, ಕರ್ನಾಟಕ ಕಾವಲು ಪಡೆ ಅಧ್ಯಕ್ಷ 

” ತಾಲ್ಲೂಕಿನಲ್ಲಿ ಅಕ್ರಮ ಲಾಟರಿ ಮಾರಾಟ ನಡೆಯುತ್ತಿರುವ ಬಗ್ಗೆ ದೂರು ಅಥವಾ ಮಾಹಿತಿ ಬಂದರೆ ಪರಿಶೀಲನೆ ನಡೆಸಿ, ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ನಾನು ನೂತನವಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಅಕ್ರಮ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಬೇಕು.”

-ಮಾರುತಿ, ಪಿಎಸ್‌ಐ 

 

 

ಆಂದೋಲನ ಡೆಸ್ಕ್

Recent Posts

ಹಾಸನದಲ್ಲಿ ‘ಲಂಚದ ಚಾಟ್’ ಸಂಚಲನ: ಡಿಸಿ–ಸಚಿವರ ವಿರುದ್ಧ ಕುಮಾರಸ್ವಾಮಿ ಆರೋಪ!

ಹಾಸನ: ಹಾಸನದಲ್ಲಿ ಸರ್ಕಾರಿ ಕಡತಗಳ ವಿಲೇವಾರಿಗೆ ಲಕ್ಷಾಂತರ ರೂಪಾಯಿ ಹಣದ ಬೇಡಿಕೆ ಇಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ…

6 hours ago

ಜಪಾನ್‌ನಲ್ಲಿ 5.7 ತೀವ್ರತೆಯ ಭೂಕಂಪ

ಟೋಕಿಯೋ: ಜಪಾನ್‌ನಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೂಕಂಪಕ್ಕೆ ಕನಿಷ್ಠ 22 ಮಂದಿ ಗಾಯಗೊಂಡಿದ್ದಾರೆ. ಅಂಗಡಿಗಳ ಕಿಟಕಿ ಗಾಜುಗಳು ಪುಡಿಯಾಗಿದ್ದು, ಭಯಭೀತರಾದ…

6 hours ago

ಹಾಸನಾಂಬೆ ದರ್ಶನ ಪಡೆದ ಸಿಎಂ ಡಿ.ಕೆ.ಶಿವಕುಮಾರ್‌

ಹಾಸನ: ಕುಟುಂಬ ಸಮೇತರಾಗಿ ಹಾಸನಾಂಬ ದೇವಿಯ ದರ್ಶನ ಪಡೆದ ಡಿ.ಕೆ. ಶಿವಕುಮಾರ್, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ನರಕ ಚತುರ್ದಶಿ ಹಿನ್ನೆಲೆಯಲ್ಲಿ…

6 hours ago

ಬಸ್ತಾರ್‌ನಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಬಸ್ತಾರ್: ಬೆಳಕಿನ ಹಬ್ಬ ದೀಪಾವಳಿಯನ್ನು ಭದ್ರತಾ ಸಿಬ್ಬಂದಿಯೊಂದಿಗೆ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ, ‘ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು’ ಎಂದು…

7 hours ago

ಓದುಗರ ಪತ್ರ: ರಸ್ತೆ ಅಗಲೀಕರಣದ ಜತೆ ಡಾಂಬರು ಹಾಕಲಿ

ನಂಜನಗೂಡು ತಾಲ್ಲೂಕು ಕೂಡ್ಲಾಪುರ ಗ್ರಾಮದ ರಸ್ತೆಯು ತೀರ ಹದಗೆಟ್ಟಿರುತ್ತದೆ. ಡಾಂಬರು ಇಲ್ಲದೆ ಕಲ್ಲುಮಣ್ಣುಗಳಿಂದ ಕೂಡಿದ್ದು ಸಂಚಾರ ದುರ್ಲಭವೆನಿಸಿದೆ. ಕಚ್ಚಾ ರಸ್ತೆಯಂತಿರುವ…

9 hours ago

ಓದುಗರ ಪತ್ರ: ಕಾವೇರಿ ನೀರು: ಪೆಟ್ಟಿನ ಮೇಲೆ ಪೆಟ್ಟು!

ತಮಿಳುನಾಡಿಗೆ ಪ್ರತಿನಿತ್ಯ ಮೂರು ಸಾವಿರ ಕ್ಯೂಸೆಕ್ ನೀರನ್ನು ಹರಿಸಲು ರಾಜ್ಯಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಶಿಫಾರಸು ಮಾಡಿರುವುದು ಘೋರ…

10 hours ago