ಮಹದೇಶ್ ಎಂ.ಗೌಡ
ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಕುಸಿತವಾಗಿರುವುದರಿಂದ ಸಾವಿರಾರು ಅಡಿ ಬೋರ್‌ವೆಲ್ ಕೊರೆದು ನೀರನ್ನು ತೆಗೆದು ಬಳಕೆ ಮಾಡುತ್ತಿರುವುದರಿಂದ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿ ೩೪ಕ್ಕೂ ಹೆಚ್ಚು ಜನರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಹತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಅಂತರ್ಜಲ ಮಟ್ಟ ಕುಸಿದಿದ್ದು, ಸಾವಿರಾರು ಅಡಿಗಳ ಆಳದಿಂದ ತೆಗೆಯುತ್ತಿರುವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿರುವುದರಿಂದ ಕುಡಿಯುವ ನೀರು ವಿಷವಾಗಿ ಬದಲಾವಣೆಯಾಗುತ್ತಿದೆ. ಇದರಿಂದ ಯುವಕರು, ಯುವತಿಯರು, ವೃದ್ಧರು ಕಿಡ್ನಿ ವೈಫಲ್ಯದಿಂದ ನರಳುತ್ತಿದ್ದಾರೆ ಎಂದು ದೂರಿದ್ದಾರೆ.
ಟಗರುಕೊಟ್ಟಾಯಿ, ಕಡಬೂರು, ವಡ್ಡರದೊಡ್ಡಿ, ಸುಳ್ವಾಡಿ, ನಾಲ್ ರೋಡ್ ಮತ್ತಿತರ ಗ್ರಾಮಗಳ ವ್ಯಾಪ್ತಿಯಲ್ಲಿನ ಜನರು ಅತಿ ಹೆಚ್ಚು ಫ್ಲೋರೈಡ್ ಮಿಶ್ರಿತ ನೀರು ಬಳಕೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
೨೮ ಜನರಿಗೆ ಡಯಾಲಿಸಿಸ್: ಮಾರ್ಟಳ್ಳಿ, ಮೀಣ್ಯಂ, ಹೂಗ್ಯಂ, ರಾಮಾಪುರ, ಮಣಗಳ್ಳಿ ಸೇರಿ ದಂತೆ ವಿವಿಧ ಗ್ರಾಮಗಳ ೨೮ ಜನರಿಗೆ ರಾಮಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರತಿ ವಾರ ಡಯಾಲಿಸಿಸ್ ಮಾಡಲಾಗುತ್ತಿದೆ. ಇದಲ್ಲದೆ ತಾಲ್ಲೂಕಿನ ೬ ಡಯಾಲಿಸಿಸ್ ರೋಗಿಗಳು ಕೊಳ್ಳೇಗಾಲ, ಚಾಮರಾಜನಗರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಉಳಿದಂತೆ ಐದು ರೋಗಿಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ತಾಲೂಕಿನ ಹಲವು ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿದ್ದು ಬಳಕೆ ಮಾಡುತ್ತಿರುವ ನೀರಿನಲ್ಲಿ ಫ್ಲೋರೈಡ್ ಪ್ರಮಾಣ ಹೆಚ್ಚಾಗಿರುವುದ ರಿಂದ ಕಿಡ್ನಿ ವೈಫಲ್ಯ, ಹೈಪರ್ ಟೆನ್ಶನ್, ಥೈರಾಯ್ಡ್, ಸಂಧಿವಾತಗಳಂತಹ ಆರೋಗ್ಯ ಸಮಸ್ಯೆ ಕಾಣಿಸಿಕೊ ಳ್ಳುತ್ತಿದೆ ಎನ್ನುವುದು ಜನರ ಆರೋಪವಾಗಿದೆ.
‘ಶುದ್ಧ ಕುಡಿಯುವ ನೀರು ಪೂರೈಸಿ: ಹನೂರು ತಾಲ್ಲೂಕಿನ ರಾಮಾಪುರ ಹೋಬಳಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಕುಸಿದು ಲವಣಾಂಶ ಮತ್ತು ಫ್ಲೋರೈಡ್ ಅಂಶವಿರುವ ನೀರನ್ನು ಕುಡಿಯುತ್ತಿರುವುದರಿಂದ ಈ ಭಾಗದ ಜನರು ಹಲವು ಕಾಯಿಲೆಗಳಿಗೆ ತುತ್ತಾಗಿದ್ದಾರೆ. ಹತ್ತಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳ ಪ್ರತಿ ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿನ ಘಟಕ ತೆರೆದು ನಿವಾಸಿಗಳಿಗೆ ಶುದ್ಧ ನೀರು ಪೂರೈಕೆ ಮಾಡಿದರೆ ರೋಗವನ್ನು ಹತೋಟಿಗೆ ತರಬಹುದು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಜನರು ಕಾಯಿಲೆಗೆ ತುತ್ತಾದರೂ ಆಶ್ಚರ್ಯವೇನಿಲ್ಲ ಎನ್ನುವುದು ಈ ಭಾಗದ ಜನರ ಅಭಿಪ್ರಾಯ.
” ಕುಡಿಯುವ ನೀರಿನಿಂದಲೇ ಕಿಡ್ನಿ ವೈಫಲ್ಯವಾಗುವುದಿಲ್ಲ. ಅಂತಹ ಪ್ರಕರಣಗಳು ನಮ್ಮಲ್ಲಿ ಯಾವುದೂ ವರದಿಯಾಗಿಲ್ಲ. ಕೆಲವರಿಗೆ ಹುಟ್ಟಿನಿಂದಲೇ ಕಿಡ್ನಿ ಸಮಸ್ಯೆ ಇರುತ್ತದೆ. ಇನ್ನೂ ಕೆಲವರಿಗೆ ಡ್ರಗ್ಸ್ ಸೇವನೆ ಹಾಗೂ ಇನ್ನಿತರ ಚಟಗಳಿಂದ ಕಿಡ್ನಿ ವೈಫಲ್ಯವಾಗಿದೆ. ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಒಟ್ಟಾರೆ ೩೫ಕ್ಕೂ ಹೆಚ್ಚು ಮಂದಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿದ್ದಾರೆ.”
-ಡಾ.ಚಿದಂಬರಂ, ಡಿಎಚ್‌ಒ, ಚಾಮರಾಜನಗರ
ನೀರು ಕುಡಿಯಲು ಯೋಗ್ಯವಲ್ಲ: ಅಧಿಕಾರಿಗಳಿಂದ ವರದಿ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತೋಣಿಯಾರ್ ಕೋಯಿಲ್ ಗ್ರಾಮದಲ್ಲಿ ಕುಡಿಯುತ್ತಿರುವ ನೀರಿನಲ್ಲಿ ಗಡಸುತನ ಹೆಚ್ಚಾಗಿರುವ ಬಗ್ಗೆ ಸ್ಥಳೀಯರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳು ಬಳಕೆ ಮಾಡುತ್ತಿರುವ ನೀರನ್ನು ಪರಿಶೀಲನೆ ನಡೆಸಿದಾಗ ನೀರಿನಲ್ಲಿ ಗಡಸುತನ ಅಂಶವು ಹೆಚ್ಚಾಗಿರುವುದರಿಂದ ಈ ನೀರು ಬಳಕೆಗೆ ಯೋಗ್ಯವಿಲ್ಲ. ಈ ಬೋರ್‌ವೆಲ್ ಮುಚ್ಚಿಸಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಪಿಡಿಒ ಅವರಿಗೆ ಕಳೆದ ನವೆಂಬರ್ ತಿಂಗಳಿನಲ್ಲಿಯೇ ವರದಿ ನೀಡಿದ್ದಾರೆ. ಆದರೂ ನೀರಿನ ಸಮಸ್ಯೆ ಇರುವುದರಿಂದ ಸ್ಥಳೀಯ ನಿವಾಸಿಗಳು ಈ ಬೋನೀರನ್ನೇ ಬಳಕೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…