Andolana originals

ಇಂದಿನ ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಜಿಲ್ಲೆ ಸಜ್ಜು

ನವೀನ್ ಡಿಸೋಜ

ನಾನಾ ಕಾರ್ಯಕ್ರಮ ಆಯೋಜನೆ; ಯೋಗ ಕುರಿತು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಸ್ಪರ್ಧೆ

ಮಡಿಕೇರಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಕೊಡಗು ಸಜ್ಜಾಗಿದ್ದು, ಜಿಲ್ಲಾಮಟ್ಟದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಯುಷ್ ಇಲಾಖೆಯಿಂದ ಭರ್ಜರಿ ಸಿದ್ಧತೆ ನಡೆದಿದೆ.

ಜಿಲ್ಲಾ ಆಯುಷ್ ಇಲಾಖೆ ಶನಿವಾರ ೧೧ನೇ ಅಂತಾರಾಷ್ಟ್ರಿಯ ಯೋಗ ದಿನವನ್ನು ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಘೋಷವಾಕ್ಯದಡಿ ಆಚರಿಸಲು ಸಿದ್ಧತೆ ಕೈಗೊಂಡಿದೆ. ಯೋಗ ದಿನದ ಅಂಗವಾಗಿ ನಾನಾ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡಿದ್ದು, ಈಗಾಗಲೇ ಅಗತ್ಯ ಪೂರ್ವತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಾದ್ಯಂತ ಯೋಗ ದಿನಾಚರಣೆಗೆ ಸಿದ್ಧತೆ ನಡೆಸಲಾಗಿದ್ದು, ಆಯುಷ್ ಆರೋಗ್ಯ ಮಂದಿರಗಳಲ್ಲಿ ಯೋಗಾಭ್ಯಾಸ ಮಾಡಿಸಲಾಗಿದೆ.

ಈಗಾಗಲೇ  ಮಡಿಕೇರಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಗಿದೆ. ಗಾಂಧಿ ಮೈದಾನದಲ್ಲಿ ಹಸಿರು ಯೋಗ ಹರಿತ್ ಯೋಗ ಕಾರ್ಯಕ್ರಮ ನಡೆದಿದೆ. ನಗರದ ಗಾಂಧಿ ಭವನದವರೆಗೆ ಸ್ವಚ್ಛತಾ ಜಾಥಾ ನಡೆಸಲಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಸರ್ಕಾರಿ, ಸರ್ಕಾರೇತರ ಸಂಸ್ಥೆಗಳು, ಸಹಕಾರ ಸಂಘಗಳ ಕಚೇರಿಗಳು, ಪಂಚಾಯಿತಿಗಳಲ್ಲಿನ ಸಿಬ್ಬಂದಿಗೆ ಒತ್ತಡ ನಿವಾರಣೆಗೆ ಯೋಗಾಭ್ಯಾಸದ ಅವಶ್ಯ ಕುರಿತು ಮನವರಿಕೆ ಮಾಡಿ ಕೊಡುವ ನಿಟ್ಟಿನಲ್ಲಿ ಯೋಗ ಬ್ರೇಕ್ (ವೈ-ಬ್ರೇಕ್) ಎನ್ನುವ ವಿನೂತನ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಮೂಲಕ ನಾನಾ ಕಚೇರಿಗಳಿಗೆ ಯೋಗ ಶಿಕ್ಷಕರ ನೇತೃತ್ವದಲ್ಲಿ ಅಲ್ಲಿನ ಸಿಬ್ಬಂದಿಗೆ ೧೦ರಿಂದ ೧೫ ನಿಮಿಷಗಳ ಕಾಲ ಯೋಗಾಭ್ಯಾಸ ಮಾಡಿಸಲಾಗಿದೆ. ಈ ಕಾರ್ಯಕ್ರಮ ಈಗಾಗಲೇ ಜಿಲ್ಲೆಯ ನಾನಾ ಕಚೇರಿಗಳಲ್ಲಿ ನಡೆದಿದೆ.

ಯುವ ಜನತೆಯಲ್ಲಿ ಯೋಗ ಕುರಿತು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆ ಹೊಸ ಕಾರ್ಯಕ್ರಮ ಹಮ್ಮಿಕೊಂಡಿದೆ. ಯೋಗ ಅನ್ ಪ್ಲಗ್ಸ್ ಎಂಬ ರೀಲ್ಸ್ ಮತ್ತು ಜಿಂಗಲ್ಸ್‌ನಲ್ಲಿ ಆಸಕ್ತಿ ಹೊಂದಿರುವ ಯುವಕ, ಯುವತಿಯರು, ಹಿರಿಯರು, ಮಕ್ಕಳಾದಿಯಾಗಿ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು.

ಯೋಗ ಸಂಬಂಧ ತಾವು ನಿರ್ಮಿಸಿದ ರೀಲ್ಸ್ ಅಥವಾ ಜಿಂಗಲ್ಸ್‌ಅನ್ನು ವೆಬ್‌ಸೈಟ್‌ಗೆ ಅಪ್ಲೋಡ್ ಮಾಡಿದರೆ ಆಯ್ಕೆಯಾದ ರೀಲ್ಸ್ ಮತ್ತು ಜಿಂಗಲ್ಸ್‌ಗೆ ಸೂಕ್ತ ಬಹುಮಾನ ನೀಡಲಾಗುವುದು

ಇಂದು ಯೋಗ ದಿನಾಚರಣೆ: 

ಕೊಡಗು ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೀಮಾ ಕೊಡಗು ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ಶನಿವಾರ ೧೧ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಘೋಷವಾಕ್ಯದಡಿ ನಗರದ ಕೆಳಗಿನ ಗೌಡ ಸಮಾಜದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ೬.೪೫ಕ್ಕೆ ಉದ್ಘಾಟನೆ ನಡೆಯಲಿದ್ದು, ೭ರಿಂದ ೮ ಗಂಟೆಯವರೆಗೆ ಯೋಗ ಪ್ರಾತ್ಯಕ್ಷಿಕೆ ನಡೆಯಲಿದೆ.

ಡಿಂಬಾಸನ ಯೋಗ: 

ಕೊಡಗು ಪತ್ರಕರ್ತರ ಸಂಘ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಕೊಡಗಿನ ಯುವ ಯೋಗಪಟು ಮದೆನಾಡಿನ ಸಿಂಚನಾಳ ಯೋಗ ಪ್ರದರ್ಶನವನ್ನು ಗಿನ್ನಿಸ್ ವಿಶ್ವದಾಖಲೆಗೆ ಸೇರ್ಪಡೆ ಮಾಡುವ ಕಾರ್ಯಕ್ರಮವನ್ನು ಶನಿವಾರ ಮಡಿಕೇರಿಯಲ್ಲಿ ಆಯೋಜಿಸಲಾಗಿದೆ. ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ಶನಿವಾರ ಸಂಜೆ ೬ ಗಂಟೆಗೆ ಮದೆನಾಡಿನ ಬಿಜಿಎಸ್ ಪಬ್ಲಿಕ್ ಶಾಲೆಯ ೬ನೇ ತರಗತಿ ವಿದ್ಯಾರ್ಥಿನಿ ಸಿಂಚನಾಳಿಂದ ಡಿಂಬಾಸನ ಯೋಗ ಆಯೋಜಿಸಲಾಗಿದೆ.

” ಗ್ರಾಮೀಣ ಪ್ರದೇಶದಲ್ಲಿ ಆಯುಷ್ ಇಲಾಖೆಯಿಂದ ಉಚಿತ ಯೋಗಾಭ್ಯಾಸ ತರಗತಿಗಳು ನಡೆಯುತ್ತಿವೆ. ಆದರೆ ನಗರ ಪ್ರದೇಶಗಳಲ್ಲಿ ಇದಕ್ಕೆ ಹೆಚ್ಚು ಬೇಡಿಕೆ ಇದೆ. ನಗರಗಳಲ್ಲಿ ಹೆಚ್ಚು ಆಸಕ್ತರು ಇರುವುದರಿಂದ ಇಲ್ಲಿ ತರಗತಿಗಳನ್ನು ಆರಂಭಿಸುವ ಬಗ್ಗೆ ಇಲಾಖೆಯ ಗಮನಕ್ಕೆ ತರಲಾಗಿದೆ.”

-ಡಾ.ಜಿ.ಶೈಲಜಾ, ಜಿಲ್ಲಾ ಆಯುಷ್ ಅಧಿಕಾರಿ

” ಗ್ರಾಮಸಭೆ, ನ್ಯಾಯಾಲಯ, ಸರ್ಕಾರಿ ಕಚೇರಿ, ಸರ್ಕಾರೇತರ ಸಂಸ್ಥೆಗಳಲ್ಲಿ ೧೦-೧೫ ನಿಮಿಷ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಇದರೊಂದಿಗೆ ಯೋಗ ಕುರಿತು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಯೋಗ ರಿಲ್ಸ್, ಯೋಗ ಜಿಂಗಲ್ಸ್ ರಚನೆ ಹಾಗೂ ಇನ್ನಿತರೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.”

-ಶುಭಾ, ವೈದ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ವಿಶ್ವಕಪ್‌ ಗೆದ್ದ ಬಳಿಕ ರೈಲು ಹತ್ತಿ ಬಂದ ಶಿವಂ ದುಬೆ!

ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್‌ನ್ನು 96 ರನ್‌ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್‌ನಲ್ಲಿ…

2 mins ago

ಫಾರುಕ್ ಹತ್ಯೆ ಯತ್ನ : ಆರೋಪಿ ಕಮಲ್‌ ಸಿಂಗ್‌ ಹೇಳಿದ್ದೇನು?

ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…

20 mins ago

ಅಡುಗೆ ಅನಿಲ ಕೊರತೆ ; ಸಂಸದರು ಬಾಯಿ ಬಿಡಬೇಕು ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…

46 mins ago

ಫಲ ನೀಡಿದ ಮಾತುಕತೆ : ಹಾರ್ಮುಜ್ ಜಲಸಂಧಿ ದಾಟಿದ ತೈಲ ಟ್ಯಾಂಕರ್‌

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…

1 hour ago

ವೈರಲ್‌ ಹುಡುಗಿ ʻಮೊನಾಲಿಸಾʼ ಮದುವೆಗೆ ತಂದೆ ವಿರೋಧಿಸಿದ್ದೇಕೆ….. ಯಾರಿ ಈ ಹುಡುಗ?

ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…

2 hours ago

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

2 hours ago