ಲಕ್ಷ್ಮೀಕಾಂತ್ ಕೋಮಾರಪ್ಪ
ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ
ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ ಪ್ರಮುಖವಾದ ಸಾಂಪ್ರದಾಯಿಕ ಸುಗ್ಗಿ ಉತ್ಸವಗಳು ಉತ್ತರ ಕೊಡಗಿನ ಪುಷ್ಪಗಿರಿ ಪರ್ವತ ಶ್ರೇಣಿ ಗ್ರಾಮಗಳಲ್ಲಿ ನಡೆಯುತ್ತಿದ್ದು, ಸಮೀಪದ ನಗರಳ್ಳಿ ಗ್ರಾಮದಲ್ಲಿ ನಡೆದ ಕೂತಿನಾಡು ಸುಗ್ಗಿ ಉತ್ಸವವು ಸಾಂಪ್ರದಾಯಿಕ ಸೊಡಗನ್ನು ಸಾಕ್ಷೀಕರಿಸಿತು.
ಕೂತಿನಾಡಿಗೆ ಸೇರಿದ ೧೮ ಗ್ರಾಮಗಳ ನಿವಾಸಿಗಳು ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಗ್ರಾಮದೇವತೆ ಸಬ್ಬಮ್ಮ ದೇವಿಗೆ ೧೫ ದಿನಗಳ ಕಾಲ ವಿಶೇಷ ಪೂಜೆಗಳನ್ನು ಸಲ್ಲಿಸಿ, ಗ್ರಾಮ ಸುಭಿಕ್ಷೆ, ಮಳೆ, ಬೆಳೆ ಸಮೃದ್ಧಿಗಾಗಿ ಪ್ರಾರ್ಥನೆ ಮಾಡುವುದೇ ಸುಗ್ಗಿ ಉತ್ಸವದ ವಿಶೇಷ.
೪೦೦ ವರ್ಷಗಳ ಇತಿಹಾಸ: ಸುಮಾರು ೪೦೦ ವರ್ಷಗಳ ಇತಿಹಾಸವಿರುವ ಸುಗ್ಗಿ ಉತ್ಸವವನ್ನು ಈಗಲೂ ಕ್ರಮಬದ್ಧವಾಗಿ ಆಚರಿಸಿಕೊಂಡು ಬರುತ್ತಿರುವುದು ವಿಶೇಷ. ಗ್ರಾಮದ ನಿವಾಸಿಗಳು, ಮಹಿಳೆಯರು, ಮಕ್ಕಳು, ಹಿರಿಯರು ಉತ್ಸವದಲ್ಲಿ ಭಾಗವಹಿಸಿ ಗ್ರಾಮದೇವತೆಗೆ ಇಷ್ಟಾರ್ಥಗಳ ಈಡೇರಿಕೆಗಾಗಿ ಪ್ರಾರ್ಥಿಸಿದರು. ಗ್ರಾಮದ ಹೆಣ್ಣುಮಕ್ಕಳು ಕುಟುಂಬ ಸಮೇತ ತವರಿನ ಸುಗ್ಗಿಯಲ್ಲಿ ಭಾಗವಹಿಸುವುದು ವಿಶೇಷ.
ಸುಗ್ಗಿ ಉತ್ಸವದ ಕೊನೆಯ ದಿನವಾದ ಸೋಮವಾರ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ ೪ ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ಯಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ತೆರೆ ಬಿದ್ದಿತು.
ಆಕರ್ಷಕ ಜಾನಪದ ನೃತ್ಯ:
ಬಿಳಿ ಕುಪ್ಪಸ ದಟ್ಟಿಯನ್ನು ಧರಿಸಿದ್ದ ಗ್ರಾಮದ ಹಿರಿಯರು, ಬಿಲ್ಲರಂಗದಲ್ಲಿ ಪ್ರದರ್ಶನ ಹಾಕುತ್ತ, ಮಲೆನಾಡು ಸುಗ್ಗಿ ಇತಿಹಾಸವನ್ನು ನೆರೆದಿದ್ದವರಿಗೆ ಮನವರಿಕೆ ಮಾಡಿದರು. ಸುಗ್ಗಿ ಕುಣಿತ, ಸುಗ್ಗಿಹಾಡುವುದು, ಬಿಲ್ಲು ತೂಗುವುದು ಸೇರಿದಂತೆ ವಿವಿಧ ಜಾನ ಪದ ನೃತ್ಯಗಳ ಪ್ರದರ್ಶನ ಆಕರ್ಷಕವಾಗಿತ್ತು.
ದೇವರ ಒಡೆಕಾರರಾಗಿ ಸಂದೀಪ್ ನಗರಳ್ಳಿ, ಶ್ರವಣ್ ನಗರಳ್ಳಿ, ಲಚನ್ ಹಳ್ಳಿಯೂರು, ಗಗನ್ ಜಕ್ಕನಳ್ಳಿ, ಶಶಿಕುಮಾರ್ ಕಾರ್ಯನಿರ್ವಹಿಸಿದರು. ರಮೇಶ್, ಪ್ರಕಾಶ್, ಪ್ರಸನ್ನ, ಕುಶಾಲಪ್ಪ, ಲೋಹಿತ್ ದೇವರ ಕಾರ್ಯದಲ್ಲಿ ಭಾಗವಹಿಸಿದ್ದರು. ೧೮ ಗ್ರಾಮಗಳ ನವ ದಂಪತಿಗಳು ಮದುವೆ ಕಾಣಿಕೆಯನ್ನು ಸಲ್ಲಿಸಿದರು. ಹರಕೆ ತೀರಿಸುವುದು ಮತ್ತು ಹರಕೆ ಮಾಡಿಕೊಳ್ಳುವ ಕಾರ್ಯಗಳು ನಡೆದವು. ಕೂತಿ ನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡಳ್ಳಿ, ತಡ್ಡಿಕೊಪ್ಪ, ಓಡಳ್ಳಿ ಗ್ರಾಮಗಳ ಮುಖ್ಯಸ್ಥರು ಗ್ರಾಮದೇವತೆಗೆ ಪಟ್ಟ ಒಪ್ಪಿಸಿ, ಸಾಮೂಹಿಕ ಪೂಜೆ ನೆರವೇರಿಸಿದರು.
ಸುಗ್ಗಿಕಟ್ಟೆಯ ಮುಖ್ಯ ರಂಗದಲ್ಲಿ ಇಡುಗಾಯಿ ಒಡೆಯಲಾಯಿತು. ಭಕ್ತಾದಿಗಳಿಗೆ ಅನ್ನಸಂರ್ಪಣೆ ನಡೆಯಿತು. ಉತ್ಸವದಲ್ಲಿ ಶಾಸಕ ಡಾ.ಮಂಥರ್‌ಗೌಡ, ಮಾಜಿ ಸಚಿವ ಅಪ್ಪಚ್ಚು ರಂಜನ್, ಚಲನಚಿತ್ರ ನಟ ಹಾಗೂ ಉದ್ಯಮಿ ಅರುಗೌಡ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಕುಮಾರಲಿಂಗೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಂ.ಲೋಕೇಶ್, ಕೂತಿ ಗ್ರಾಮಾಧ್ಯಕ್ಷ ಹೆಚ್.ಎಂ.ಜಯರಾಮ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು. ಕೂತಿನಾಡು ಶ್ರೀ ಸಬ್ಬಮ್ಮ ದೇವರ ಸಮಿತಿ ಅಧ್ಯಕ್ಷ ಕೆ.ಬಿ. ಜಗದೀಶ್, ಉಪಾಧ್ಯಕ್ಷ ಬೋಪಯ್ಯ ಕೂತಿ, ಕಾರ್ಯದರ್ಶಿ ಕೆ.ಯು. ಜಗದೀಶ್, ಖಜಾಂಚಿ ಎನ್.ಬಿ.ಸುರೇಶ್, ಬಿ.ಪಿ.ಪ್ರದೀಪ್ ಕುಮಾರ್, ಅಶ್ವತ್, ಕೌಶಿಕ್, ಪ್ರಸನ್ನ ಕುಂದಳ್ಳಿ, ರಜಿತ್ ಸುಗ್ಗಿಯ ಉಸ್ತುವಾರಿ ವಹಿಸಿದ್ದರು
ಮನ ರಂಜಿಸಿದ ಕಡವೆ ಬೇಟೆ ಪ್ರಸಂಗ:
ಸೋಮವಾರಪೇಟೆ: ಸೋಮವಾರ ಬೆಳಿಗ್ಗೆ ಸುಗ್ಗಿ ರಂಗದಲ್ಲಿ ಪೂರ್ವಜರ ಜೀವನ ಪದ್ಧತಿಯಾಗಿದ್ದ ಕಡವೆ ಬೇಟೆಯಾಡುವ ಅಭಿನಯ ನೆರೆದಿದ್ದವರನ್ನು ನಗೆಗಡಲಲ್ಲಿ ತೆಲುವಂತೆ ಮಾಡಿತು. ಕಡವೆಯ ಪಾತ್ರದಾರಿಯನ್ನು ಅಟ್ಟಿಸಿಕೊಂಡು ಹೋಗುವ ಬೇಟೆಗಾರರ ತಂಡದ ಸದಸ್ಯರಿಗೆ ಕಡವೆ ಒದೆಯುವ ದೃಶ್ಯ ಮನ ಮೋಹಕ ವಾಗಿತ್ತು. ಒದೆ ತಿಂದವರು ನೆಲಕ್ಕುರುಳಿದ ಘಟನೆಯೂ ನಡೆಯಿತು. ಕೊನೆಯಲ್ಲಿ ಕಡವೆ ಕಾಡು ಸೇರುವ ಮೂಲಕ, ಬೇಟೆಗಾರರಿಂದ ಬಚಾವಾಯಿತು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…