Andolana originals

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ

ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ

ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ ಪ್ರಮುಖವಾದ ಸಾಂಪ್ರದಾಯಿಕ ಸುಗ್ಗಿ ಉತ್ಸವಗಳು ಉತ್ತರ ಕೊಡಗಿನ ಪುಷ್ಪಗಿರಿ ಪರ್ವತ ಶ್ರೇಣಿ ಗ್ರಾಮಗಳಲ್ಲಿ ನಡೆಯುತ್ತಿದ್ದು, ಸಮೀಪದ ನಗರಳ್ಳಿ ಗ್ರಾಮದಲ್ಲಿ ನಡೆದ ಕೂತಿನಾಡು ಸುಗ್ಗಿ ಉತ್ಸವವು ಸಾಂಪ್ರದಾಯಿಕ ಸೊಡಗನ್ನು ಸಾಕ್ಷೀಕರಿಸಿತು.

ಕೂತಿನಾಡಿಗೆ ಸೇರಿದ ೧೮ ಗ್ರಾಮಗಳ ನಿವಾಸಿಗಳು ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಗ್ರಾಮದೇವತೆ ಸಬ್ಬಮ್ಮ ದೇವಿಗೆ ೧೫ ದಿನಗಳ ಕಾಲ ವಿಶೇಷ ಪೂಜೆಗಳನ್ನು ಸಲ್ಲಿಸಿ, ಗ್ರಾಮ ಸುಭಿಕ್ಷೆ, ಮಳೆ, ಬೆಳೆ ಸಮೃದ್ಧಿಗಾಗಿ ಪ್ರಾರ್ಥನೆ ಮಾಡುವುದೇ ಸುಗ್ಗಿ ಉತ್ಸವದ ವಿಶೇಷ.

೪೦೦ ವರ್ಷಗಳ ಇತಿಹಾಸ: ಸುಮಾರು ೪೦೦ ವರ್ಷಗಳ ಇತಿಹಾಸವಿರುವ ಸುಗ್ಗಿ ಉತ್ಸವವನ್ನು ಈಗಲೂ ಕ್ರಮಬದ್ಧವಾಗಿ ಆಚರಿಸಿಕೊಂಡು ಬರುತ್ತಿರುವುದು ವಿಶೇಷ. ಗ್ರಾಮದ ನಿವಾಸಿಗಳು, ಮಹಿಳೆಯರು, ಮಕ್ಕಳು, ಹಿರಿಯರು ಉತ್ಸವದಲ್ಲಿ ಭಾಗವಹಿಸಿ ಗ್ರಾಮದೇವತೆಗೆ ಇಷ್ಟಾರ್ಥಗಳ ಈಡೇರಿಕೆಗಾಗಿ ಪ್ರಾರ್ಥಿಸಿದರು. ಗ್ರಾಮದ ಹೆಣ್ಣುಮಕ್ಕಳು ಕುಟುಂಬ ಸಮೇತ ತವರಿನ ಸುಗ್ಗಿಯಲ್ಲಿ ಭಾಗವಹಿಸುವುದು ವಿಶೇಷ.

ಸುಗ್ಗಿ ಉತ್ಸವದ ಕೊನೆಯ ದಿನವಾದ ಸೋಮವಾರ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ ೪ ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ಯಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ತೆರೆ ಬಿದ್ದಿತು.

ಆಕರ್ಷಕ ಜಾನಪದ ನೃತ್ಯ: 

ಬಿಳಿ ಕುಪ್ಪಸ ದಟ್ಟಿಯನ್ನು ಧರಿಸಿದ್ದ ಗ್ರಾಮದ ಹಿರಿಯರು, ಬಿಲ್ಲರಂಗದಲ್ಲಿ ಪ್ರದರ್ಶನ ಹಾಕುತ್ತ, ಮಲೆನಾಡು ಸುಗ್ಗಿ ಇತಿಹಾಸವನ್ನು ನೆರೆದಿದ್ದವರಿಗೆ ಮನವರಿಕೆ ಮಾಡಿದರು. ಸುಗ್ಗಿ ಕುಣಿತ, ಸುಗ್ಗಿಹಾಡುವುದು, ಬಿಲ್ಲು ತೂಗುವುದು ಸೇರಿದಂತೆ ವಿವಿಧ ಜಾನ ಪದ ನೃತ್ಯಗಳ ಪ್ರದರ್ಶನ ಆಕರ್ಷಕವಾಗಿತ್ತು.

ದೇವರ ಒಡೆಕಾರರಾಗಿ ಸಂದೀಪ್ ನಗರಳ್ಳಿ, ಶ್ರವಣ್ ನಗರಳ್ಳಿ, ಲಚನ್ ಹಳ್ಳಿಯೂರು, ಗಗನ್ ಜಕ್ಕನಳ್ಳಿ, ಶಶಿಕುಮಾರ್ ಕಾರ್ಯನಿರ್ವಹಿಸಿದರು. ರಮೇಶ್, ಪ್ರಕಾಶ್, ಪ್ರಸನ್ನ, ಕುಶಾಲಪ್ಪ, ಲೋಹಿತ್ ದೇವರ ಕಾರ್ಯದಲ್ಲಿ ಭಾಗವಹಿಸಿದ್ದರು. ೧೮ ಗ್ರಾಮಗಳ ನವ ದಂಪತಿಗಳು ಮದುವೆ ಕಾಣಿಕೆಯನ್ನು ಸಲ್ಲಿಸಿದರು. ಹರಕೆ ತೀರಿಸುವುದು ಮತ್ತು ಹರಕೆ ಮಾಡಿಕೊಳ್ಳುವ ಕಾರ್ಯಗಳು ನಡೆದವು. ಕೂತಿ ನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡಳ್ಳಿ, ತಡ್ಡಿಕೊಪ್ಪ, ಓಡಳ್ಳಿ ಗ್ರಾಮಗಳ ಮುಖ್ಯಸ್ಥರು ಗ್ರಾಮದೇವತೆಗೆ ಪಟ್ಟ ಒಪ್ಪಿಸಿ, ಸಾಮೂಹಿಕ ಪೂಜೆ ನೆರವೇರಿಸಿದರು.

ಸುಗ್ಗಿಕಟ್ಟೆಯ ಮುಖ್ಯ ರಂಗದಲ್ಲಿ ಇಡುಗಾಯಿ ಒಡೆಯಲಾಯಿತು. ಭಕ್ತಾದಿಗಳಿಗೆ ಅನ್ನಸಂರ್ಪಣೆ ನಡೆಯಿತು. ಉತ್ಸವದಲ್ಲಿ ಶಾಸಕ ಡಾ.ಮಂಥರ್‌ಗೌಡ, ಮಾಜಿ ಸಚಿವ ಅಪ್ಪಚ್ಚು ರಂಜನ್, ಚಲನಚಿತ್ರ ನಟ ಹಾಗೂ ಉದ್ಯಮಿ ಅರುಗೌಡ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಕುಮಾರಲಿಂಗೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಂ.ಲೋಕೇಶ್, ಕೂತಿ ಗ್ರಾಮಾಧ್ಯಕ್ಷ ಹೆಚ್.ಎಂ.ಜಯರಾಮ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು. ಕೂತಿನಾಡು ಶ್ರೀ ಸಬ್ಬಮ್ಮ ದೇವರ ಸಮಿತಿ ಅಧ್ಯಕ್ಷ ಕೆ.ಬಿ. ಜಗದೀಶ್, ಉಪಾಧ್ಯಕ್ಷ ಬೋಪಯ್ಯ ಕೂತಿ, ಕಾರ್ಯದರ್ಶಿ ಕೆ.ಯು. ಜಗದೀಶ್, ಖಜಾಂಚಿ ಎನ್.ಬಿ.ಸುರೇಶ್, ಬಿ.ಪಿ.ಪ್ರದೀಪ್ ಕುಮಾರ್, ಅಶ್ವತ್, ಕೌಶಿಕ್, ಪ್ರಸನ್ನ ಕುಂದಳ್ಳಿ, ರಜಿತ್ ಸುಗ್ಗಿಯ ಉಸ್ತುವಾರಿ ವಹಿಸಿದ್ದರು

ಮನ ರಂಜಿಸಿದ ಕಡವೆ ಬೇಟೆ ಪ್ರಸಂಗ: 

ಸೋಮವಾರಪೇಟೆ: ಸೋಮವಾರ ಬೆಳಿಗ್ಗೆ ಸುಗ್ಗಿ ರಂಗದಲ್ಲಿ ಪೂರ್ವಜರ ಜೀವನ ಪದ್ಧತಿಯಾಗಿದ್ದ ಕಡವೆ ಬೇಟೆಯಾಡುವ ಅಭಿನಯ ನೆರೆದಿದ್ದವರನ್ನು ನಗೆಗಡಲಲ್ಲಿ ತೆಲುವಂತೆ ಮಾಡಿತು. ಕಡವೆಯ ಪಾತ್ರದಾರಿಯನ್ನು ಅಟ್ಟಿಸಿಕೊಂಡು ಹೋಗುವ ಬೇಟೆಗಾರರ ತಂಡದ ಸದಸ್ಯರಿಗೆ ಕಡವೆ ಒದೆಯುವ ದೃಶ್ಯ ಮನ ಮೋಹಕ ವಾಗಿತ್ತು. ಒದೆ ತಿಂದವರು ನೆಲಕ್ಕುರುಳಿದ ಘಟನೆಯೂ ನಡೆಯಿತು. ಕೊನೆಯಲ್ಲಿ ಕಡವೆ ಕಾಡು ಸೇರುವ ಮೂಲಕ, ಬೇಟೆಗಾರರಿಂದ ಬಚಾವಾಯಿತು.

 

 

ಆಂದೋಲನ ಡೆಸ್ಕ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

16 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

48 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

1 hour ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago