ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು
ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ ಅಭಯಾರಣ್ಯಗಳನ್ನು ತಾಲ್ಲೂಕು ಹಂಚಿಕೊಂಡಿರುವುದರಿಂದ ರೆಸಾರ್ಟ್‌ಗಳು, ಹೋಂಸ್ಟೇಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣ ಗೊಂಡಿದ್ದು, ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.
ತಾಲ್ಲೂಕು ಸಮೀಪದ ಕೊಡಗಿನ ಹೋಂಸ್ಟೇ, ರೆಸಾರ್ಟ್ ಒಂದರಲ್ಲಿ ಪ್ರವಾಸಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣವಾದ ಬಳಿಕ ತಾಲ್ಲೂಕಿನ ರೆಸಾರ್ಟ್‌ಗಳಲ್ಲಿ, ಹೋಂಸ್ಟೇ ಗಳಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡು ಜಾಗೃತರಾಗುತ್ತಿದ್ದಾರೆ.
ತಾಲ್ಲೂಕಿನಲ್ಲಿ ೧೪ ರೆಸಾರ್ಟ್‌ಗಳು ಮತ್ತು ೮ ಹೋಂ ಸ್ಟೇಗಳಿದ್ದು ಪ್ರತಿನಿತ್ಯವೂ ರಾಜ್ಯ, ಹೊರರಾಜ್ಯ, ವಿದೇಶಗಳಿಂದ ಬರುವ ಪ್ರವಾಸಿಗರು ವಾಸ್ತವ್ಯ ಮಾಡುತ್ತಾರೆ.
ಪ್ರತಿಷ್ಠಿತ ರೆಸಾರ್ಟ್ ಮತ್ತು ಹೋಂ ಸ್ಟೇಗಳಲ್ಲಿ ಸರ್ಕಾರದ ನಿಯಮಗಳು ಪಾಲನೆ ಆಗುತ್ತಿದ್ದರೆ, ಅನೇಕ ಕಡೆ ಕೆಲವೊಂದು ನಿಯಮಗಳು ಬೇಕಾಬಿಟ್ಟಿ ಪಾಲನೆ ಆಗುತ್ತಿವೆ. ವಿದೇಶಿ ಮಹಿಳೆಯ ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಉಲ್ಲಂಘಿಸುವ ಹೋಂ ಸ್ಟೇ, ರೆಸಾರ್ಟ್‌ಗಳ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ.
ಈ ಭಾಗದಲ್ಲಿ ಅನೇಕ ರೆಸಾರ್ಟ್ ಮತ್ತು ಹೋಂ ಸ್ಟೇಗಳಲ್ಲಿ ವಾಸ್ತವ್ಯ ಮಾಡಿದ್ದೇವೆ. ಸರ್ಕಾರದ ನಿಯಮಗಳನ್ನು ಪಾಲಿಸಿ ಪ್ರವಾಸಿಗರನ್ನು ನಿಯಮಾನುಸಾರ ನೋಡಿಕೊಳ್ಳುತ್ತಿದ್ದಾರೆ. -ಹೋಂಡಾ ಜಯರಾಮ್ ಗೌಡ, ಪ್ರವಾಸಿಗ
ಸರ್ಕಾರದ ಮತ್ತು ರೆಸಾರ್ಟ್‌ಗಳ ಎಸ್‌ಒಪಿ ಮತ್ತು ಜೆಡಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ರೆಸಾರ್ಟ್‌ಗಳು ಮತ್ತು ಹೋಂ ಸ್ಟೇಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಲು ಸಾಧ್ಯವಿಲ್ಲ. ಒಂದುವೇಳೆ ನಡೆದರೂ ತಪ್ಪಿತಸ್ಥರನ್ನು ಕ್ಷಣದಲ್ಲೇ ಪತ್ತೆ ಹಚ್ಚಬಹುದು. ರೆಸಾರ್ಟ್ ಮತ್ತು ಹೋಂ ಸ್ಟೇ ಹೋಟೆಲ್‌ನವರಿಗೆ ಪ್ರವಾಸಿಗರೇ ಅನ್ನದಾತರಾಗಿದ್ದು, ಅಂತಹವರ ಮೇಲೆ ಕುಕೃತ್ಯ ಎಸಗುವುದು ಖಂಡನೀಯ. ನಾವು ಸರ್ಕಾರದ ಎಲ್ಲ ನಿಯಮಗಳನ್ನೂ ಪಾಲಿಸುತ್ತಿದ್ದೇವೆ. -ಸಂದೇಶ್, ಮಾಲೀಕರು, ಕಬಿನಿ ರಿವರ್ ಎಡ್ಜ್ ರೆಸಾರ್ಟ್
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…