Andolana originals

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ

ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ

ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು ನೌಕರರು, ಅಧಿಕಾರಿಗಳಿಗೆ ಕಳೆದ ೪-೫ ತಿಂಗಳುಗಳಿಂದ ವೇತನ ಪಾವತಿಯಾಗದೆ ಜೀವನ ನಡೆಸಲು ಪರದಾಡುತ್ತಿದ್ದರೂ ಮೇಲಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಒಂದು ತಿಂಗಳು ಸಂಬಳವಾಗದಿದ್ದರೇ ಜೀವನ ನಡೆಸುವುದು ಕಷ್ಟ ಎಂಬ ಈ ದಿನಮಾನದಲ್ಲಿ ೪-೫ ತಿಂಗಳುಗಳಿಂದ ಪುರಸಭೆಯಲ್ಲಿ ಕೆಲಸ ನಿರ್ವಹಿಸುವ ಯಾರಿಗೂ ವೇತನ ಆಗಿಲ್ಲ. ಅಧಿಕಾರಿ ವರ್ಗದವರಿಗೆ ಎರಡು ಮೂರು ತಿಂಗಳು ಪಾವತಿ ಆಗದಿದ್ದರೂ ಕಚೇರಿಯಲ್ಲಿ ಆಗುವ ಅನುಕೂಲದಿಂದ ಸ್ವಲ್ಪ ಮಟ್ಟಿಗಾದರೂ ಜೀವನ ನಡೆಸಬಹುದು. ಆದರೆ, ಉಳಿದ ಐವತ್ತಕ್ಕೂ ಹೆಚ್ಚು ಜನ ಪೌರಕಾರ್ಮಿಕರು ಮತ್ತು ನೌಕರರು ಪ್ರತಿನಿತ್ಯ ಮೇಲಧಿಕಾರಿಗಳ ಬಳಿಗೆ ವೇತನಕ್ಕಾಗಿ ಅಲೆದಾಡುತ್ತಿದ್ದಾರೆ.

ಪುರಸಭೆಯಲ್ಲಿ ಒಟ್ಟು ೫೬ ಮಂದಿ ಅಧಿಕಾರಿಗಳು, ನೌಕರರು, ಪೌರಕಾರ್ಮಿಕರು ಸೇರಿದ್ದು, ೧೫ ಮಂದಿ ಪೌರಕಾರ್ಮಿಕರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಖಾಯಂ ನೌಕರರಿಗೆ ೩ ತಿಂಗಳುಗಳಿಂದ ವೇತನ ನೀಡಿಲ್ಲ. ೧೫ ಮಂದಿ ಪೌರಕಾರ್ಮಿಕರಿಗೆ ೫ ತಿಂಗಳುಗಳಿಂದ ವೇತನ ನೀಡಿಲ್ಲ. ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ೧೫ ಜನ ಪೌರಕಾರ್ಮಿಕರ ಗುತ್ತಿಗೆ ಅವಧಿ ಪೂರ್ಣಗೊಂಡು ಐದು ತಿಂಗಳಾಗಿವೆ. ಅವರಿಂದ ಸ್ವಚ್ಛತಾ ಕೆಲಸ ಮಾಡಿಸಿಕೊಳ್ಳುತ್ತಿದ್ದರೂ ಟೆಂಡರ್ ಪ್ರಕ್ರಿಯೆ ಮೂಲಕ ಅವರಿಗೂ ವೇತನ ನೀಡಿಲ್ಲ.

ಪಟ್ಟಣದ ಪುರಸಭೆಯಲ್ಲಿ ಆಡಳಿತ ವ್ಯವಸ್ಥೆ ತೀವ್ರ ಕುಸಿತ ಕಂಡಿರುವುದರಿಂದ ಒಂದೆಡೆ ಪೌರನೌಕರರು ವೇತನವಿಲ್ಲದೆ ಸಂಕಷ್ಟದಲ್ಲಿದ್ದರೆ ಇನ್ನೊಂದು ಕಡೆ ಜನಸಾಮಾನ್ಯರಿಗೆ ಕಚೇರಿ ಕೆಲಸ ಕಾರ್ಯಗಳು ಆಗುತ್ತಿಲ್ಲ. ಪ್ರತಿನಿತ್ಯ ಕಚೇರಿಗೆ ಅಲೆದಾಡಿ ಮೇಲಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಎರಡು ತಿಂಗಳುಗಳು ಕಳೆದರೂ ಪುರಸಭೆಗೆ ಖಾಯಂ ಮುಖ್ಯಾಧಿಕಾರಿ ಮತ್ತು ಆಡಳಿತಾಧಿಕಾರಿಯನ್ನು ನೇಮಕ ಮಾಡದೇ ಇರುವುದರಿಂದ ಹಿಂದುಳಿದಿರುವ ಪುರಸಭೆ ಮತ್ತಷ್ಟು ಹಿಂದುಳಿದು ಅನೇಕ ಭ್ರಷ್ಟಾಚಾರ ಮತ್ತು ಅವ್ಯವಹಾರಗಳಿಗೆ ದಾರಿ ಮಾಡಿಕೊಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಅನೇಕ ಯೋಜನೆ ಮತ್ತು ಸವಲತ್ತುಗಳು, ಅನುದಾನವನ್ನು ಪುರಸಭೆ ವ್ಯಾಪ್ತಿಯ ಅಭಿವೃದ್ಧಿಗೆ ನೀಡಲಾಗುತ್ತಿದ್ದರೂ ಅದನ್ನು ಸಮರ್ಪಕವಾಗಿ ನಿರ್ವಹಿಸುವ ಅಧಿಕಾರಿಗಳೇ ಇಲ್ಲದೆ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಮತ್ತು ಪೌರಕಾರ್ಮಿಕರು ನೌಕರರು, ಅಧಿಕಾರಿಗಳಿಗೆ ಸಂಬಳ ನೀಡದೆ ಸಮಸ್ಯೆ ಎದುರಾಗಿದೆ. ಈಗಲಾದರೂ ಜಿಲ್ಲಾಽಕಾರಿಗಳು, ಶಾಸಕರು, ಸಂಸದರು, ಸಚಿವರು ಇತ್ತ ಗಮನಹರಿಸಬೇಕಾಗಿದೆ.

” ಪೌರಕಾರ್ಮಿಕರಾಗಿ ಪಟ್ಟಣದ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡು, ಇಲ್ಲಿ ನೀಡುವ ಸಂಬಳವನ್ನೇ ನಂಬಿ ಜೀವನ ಮಾಡುತ್ತಿದ್ದೇವೆ. ಐದು ತಿಂಗಳುಗಳಿಂದ ಸಂಬಳವೇ ಆಗಿಲ್ಲ. ನಿತ್ಯವೂ ಜೀವನ ನಡೆಸುವುದೇ ಕಷ್ಟವಾಗಿದೆ. ನಮ್ಮ ಕಷ್ಟದ ಕೂಗು ಜನಪ್ರತಿನಿಽಗಳಿಗೆ ಮತ್ತು ಅಽಕಾರಿಗಳಿಗೆ ತಲುಪುತ್ತಿಲ್ಲ.”

-ನೊಂದ ಪೌರಕಾರ್ಮಿಕ

” ಅನುದಾನದ ಕೊರತೆಯಿಂದ ೩ ತಿಂಗಳುಗಳಿಂದ ಖಾಯಂ ನೌಕರರಿಗೆ ವೇತನ ಪಾವತಿಯಾಗಿರಲಿಲ್ಲ. ಖಾಯಂ ಪೌರಕಾರ್ಮಿಕರು, ನೌಕರರು ಮತ್ತು ಅಧಿಕಾರಿಗಳಿಗೆ ಎರಡು ತಿಂಗಳುಗಳ ಸಂಬಳವನ್ನು ನೀಡಲು ಕ್ರಮಕೈಗೊಂಡಿದ್ದೇನೆ. ೫ ತಿಂಗಳುಗಳಿಂದ ಪುರಸಭೆಯ ಗುತ್ತಿಗೆ ಪೌರಕಾರ್ಮಿಕರಿಗೆ ಸಂಬಳ ನೀಡಲಾಗಿಲ್ಲ. ಹೀಗಾಗಿ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆ ಪೌರಕಾರ್ಮಿಕರಿಗೆ ಐದು ತಿಂಗಳುಗಳ ಸಂಬಳ ನೀಡಲು ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿದ್ದೇನೆ. ನಾನು ಪ್ರಭಾರ ಮುಖ್ಯಾಧಿಕಾರಿಯಾಗಿರುವುದರಿಂದ ನನ್ನ ವ್ಯಾಪ್ತಿಗೆ ಬರುವಷ್ಟೇ ಕೆಲಸವನ್ನು ಮಾತ್ರ ನಿರ್ವಹಿಸಲು ಸಾಧ್ಯ.”

-ಸಂತೋಷ್, ಪುರಸಭೆ ಪ್ರಭಾರ ಮುಖ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

29 mins ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

3 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

5 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

5 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

5 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

5 hours ago