ಮಂಜು ಕೋಟೆ
ಒಂದೂವರೆ ತಿಂಗಳಿಂದ ಮುಖ್ಯಾಧಿಕಾರಿ, ೧೫ ದಿನಗಳಿಂದ ಆಡಳಿತಾಧಿಕಾರಿ ಹುದ್ದೆ ಖಾಲಿ; ಜನರ ಕೆಲಸಗಳಿಗೆ ಅಡಚಣೆ
ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯಲ್ಲಿ ಆಡಳಿತ ನಡೆಸುವ ಮುಖ್ಯಾಧಿಕಾರಿ ಮತ್ತು ಆಡಳಿತಾಧಿಕಾರಿಗಳೇ ಇಲ್ಲದೆ ಸಾರ್ವಜನಿಕರು ಮತ್ತು ನಿವಾಸಿಗಳು ಮೂಲಸೌಕರ್ಯಕ್ಕೆ, ಕೆಲಸ ಕಾರ್ಯಗಳಿಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ.
ಪುರಸಭೆಯ ಮುಖ್ಯಾಧಿಕಾರಿಯ ಹುದ್ದೆ ಒಂದೂವರೆ ತಿಂಗಳಿನಿಂದ ಖಾಲಿಯಾಗಿದ್ದು, ೧೫ ದಿನಗಳ ಹಿಂದೆ ಚುನಾಯಿತ ಪ್ರತಿನಿಧಿಗಳ ಆಡಳಿತ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಯೂ ಇಲ್ಲದೆ ಪಟ್ಟಣದ ಜನತೆ ಪ್ರತಿನಿತ್ಯ ನರಕಯಾತನೆಪಡುತ್ತಿದ್ದಾರೆ.
ಈಗಾಗಲೇ ಅನೇಕ ಭ್ರಷ್ಟಾಚಾರ, ಅವ್ಯವಹಾರಗಳಿಂದ ಕುಖ್ಯಾತಿಗೆ ಒಳಗಾಗಿರುವ ಪುರಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಯಿಂದಾಗಿ ಅನೇಕ ವಾರ್ಡುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಚರಂಡಿಗಳಲ್ಲಿ ಸ್ವಚ್ಛತೆ ಇಲ್ಲದೆ ಅನೈರ್ಮಲ್ಯ, ಚರಂಡಿಯ ನೀರು ರಸ್ತೆಗಳಲ್ಲಿ ಹರಿಯುತ್ತಿರುವುದು, ಬೀದಿ ದೀಪಗಳು ನಿರ್ವಹಣೆಯಿಲ್ಲದೆ ಕೆಟ್ಟುನಿಂತಿರುವುದರಿಂದ ಹಲವೆಡೆ ಕಗ್ಗತ್ತಲು ಆವರಿಸಿದೆ. ಬೀದಿ ನಾಯಿಗಳು, ಕೋತಿಗಳ ಹಾವಳಿಯಿಂದ ನಿವಾಸಿಗಳು ತತ್ತರಿಸಿ ಹೋಗಿದ್ದಾರೆ.
ಜತೆಗೆ ಸಾರ್ವಜನಿಕರು ತಮ್ಮ ಮನೆ, ನಿವೇಶನ, ಇನ್ನಿತರ ಕೆಲಸ ಕಾರ್ಯಗಳಿಗೆ ನಿತ್ಯವೂ ಕಚೇರಿಗೆ ಅಲೆದಾಡಿದರೂ ಯಾವುದೇ ಕೆಲಸಗಳು ಆಗದೆ ನಿರಾಸೆಯಿಂದ ಹಿಂತಿರುಗುವಂತಾಗಿದೆ. ಹೀಗಾಗಿ ಅಧಿಕಾರಿಗಳು, ಶಾಸಕರು, ಸಂಸದರು, ಸಚಿವರು, ಜಿಲ್ಲಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.
ಪುರಸಭೆಯಲ್ಲಿ ಮುಖ್ಯಾಧಿಕಾರಿಗಳು, ಜನಪ್ರತಿನಿಧಿಗಳು ಇದ್ದಾಗಲೇ ಜನರ ಕೆಲಸಗಳು ಸುಲಭವಾಗಿ ನಡೆಯುವುದಿಲ್ಲ. ಈಗ ಮುಖ್ಯಾಧಿಕಾರಿ, ಆಡಳಿತಾಧಿಕಾರಿಯೇ ಇಲ್ಲದಿರುವುದರಿಂದ ಹೇಳುವವರು, ಕೇಳುವವರೇ ಇಲ್ಲದಂತಾಗಿದ್ದಾರೆ. ಆದ್ದರಿಂದ ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಇನ್ನಿತರರು ಪುರಸಭೆ ಮುಖ್ಯಾಧಿಕಾರಿ ಮತ್ತು ಆಡಳಿತ ಅಧಿಕಾರಿಯನ್ನು ಶೀಘ್ರದಲ್ಲಿ ನೇಮಕ ಮಾಡಿ ಸಾರ್ವಜನಿಕರಿಗೆ ಉತ್ತಮ ಆಡಳಿತ ನೀಡಲು ಮುಂದಾಗಬೇಕಾಗಿದೆ.
” ನಾನು ಎರಡು ದಿನಗಳ ಹಿಂದಷ್ಟೇ ಹುಣಸೂರಿನ ಉಪ ವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಪುರಸಭೆ ಚುನಾಯಿತ ಪ್ರತಿನಿಧಿಗಳ ಆಡಳಿತ ಅವಧಿ ಪೂರ್ಣಗೊಂಡಿರುವುದರಿಂದ ಪುರಸಭೆಯ ಆಡಳಿತ ಅಧಿಕಾರಿಯಾಗಿ ಶೀಘ್ರವೇ ಅಧಿಕಾರ ಸ್ವೀಕರಿಸಲಿದ್ದೇನೆ. ಅಲ್ಲಿ ಆಗಬೇಕಾಗಿ ರುವ ಕೆಲಸ ಕಾರ್ಯಗಳಿಗೆ ಹೆಚ್ಚು ಒತ್ತು ನೀಡುತ್ತೇನೆ.”
-ಮಂಜುನಾಥ್, ಉಪವಿಭಾಗಾಧಿಕಾರಿ, ಹುಣಸೂರು
” ಕೋಟೆ ಪುರಸಭೆ ವ್ಯಾಪ್ತಿಯಲ್ಲಿ ವರ್ಷಗಳಿಂದ ಆಡಳಿತ ಸಂಪೂರ್ಣ ಕುಸಿತವಾಗಿದೆ. ಸಾರ್ವಜನಿಕರಿಗೆ ಮೂಲಸೌಕರ್ಯವಿಲ್ಲದೆ ನಿತ್ಯ ಪರದಾಡುತ್ತಿದ್ದರೂ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಖಾಲಿಯಾಗಿರುವ ಮುಖ್ಯ ಅಧಿಕಾರಿ ಮತ್ತು ಆಡಳಿತ ಅಧಿಕಾರಿಯನ್ನು ನೇಮಕ ಮಾಡಿಲ್ಲ.
-ಲಾರಿ ಪ್ರಕಾಶ್, ಪಟ್ಟಣದ ನಿವಾಸಿ
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…