Andolana originals

2 ತಿಂಗಳಾದರೂ ಕೋಟೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ

ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ 

ಮಂಜು ಕೋಟೆ

ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ ಖಾಲಿಯಾಗಿ ಎರಡು ತಿಂಗಳು ಕಳೆಯುತ್ತಿದ್ದರೂ ಅಧ್ಯಕ್ಷರನ್ನು ನೇಮಕ ಮಾಡದ ವರಿಷ್ಠರ ನಡೆಯ ಬಗ್ಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕು  ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದ ಶಂಭುಗೌಡ ತಮ್ಮ ಸ್ಥಾನಕ್ಕೆ ಕಾರಣಾಂತರಗಳಿಂದ ೨ ತಿಂಗಳ ಹಿಂದೆ ಜಿಲ್ಲಾಧ್ಯಕ್ಷರಾದ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ತೆರವಾದ ಸ್ಥಾನವನ್ನು ಅಲಂಕರಿಸಲು ಜಿಲ್ಲಾ ರೈತ ಮೋರ್ಚಾದ ಕಾರ್ಯದರ್ಶಿ ಅಣ್ಣೂರು ಟಿ.ವೆಂಕಟೇಶ್, ಟಿಎಪಿಸಿ ಎಂಎಸ್ ಅಧ್ಯಕ್ಷ ಮೊತ್ತ ಬಸವರಾಜಪ್ಪ, ನಂಜನಾಯಕ್, ಗುರುಸ್ವಾಮಿ, ಸೋಮಾಚಾರಿ, ಶಿವಸ್ವಾಮಿ, ಚಂದ್ರ ಮೌಳಿ, ಈಶ್ವರ್, ರಿಯಲ್ ಎಸ್ಟೇಟ್ ನಂದೀಶ್, ಯೋಗೇಶ, ಕೆಂಡಗಣ್ಣ ಇನ್ನಿತರ ಮುಖಂಡರು ಪೈಪೋಟಿ ನಡೆಸುತ್ತಿದ್ದು, ಅಧ್ಯಕ್ಷರಾಗುವ ನಿಟ್ಟಿನಲ್ಲಿ ಕಾರ್ಯತಂತ್ರದಲ್ಲಿ ತೊಡಗಿದ್ದಾರೆ.

ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ವಿರೋಧಪಕ್ಷವೇ ಕೆಲಸ ನಿರ್ವಹಿ ಸದಂತಹ ಪರಿಸ್ಥಿತಿ ಹಲವು ವರ್ಷಗಳಿಂದ ನಿರ್ಮಾಣಗೊಂಡಿರುವುದರಿಂದ ತಾಲ್ಲೂಕಿನಲ್ಲಿ ವಿರೋಧ ಪಕ್ಷಗಳು, ಮುಖಂಡರು, ಕಾರ್ಯಕರ್ತರು ಸಕ್ರಿಯವಾಗಬೇಕಾದರೆ ಪಕ್ಷದ ಅಧ್ಯಕ್ಷರ ನೇಮಕ ಅಗತ್ಯವಾಗಿದೆ. ಆದ್ದರಿಂದ ಜಿಲ್ಲಾ ವರಿಷ್ಠರು ಇದರ ಬಗ್ಗೆ ಗಮನ ಹರಿಸಬೇಕಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಕೆ.ಎಂ. ಕೃಷ್ಣನಾಯಕ ಎರಡನೇ ಸ್ಥಾನ ಪಡೆದು, ಕಳೆದ ವರ್ಷ ಜಾ.ದಳಕ್ಕೆ ಸೇರ್ಪಡೆಗೊಂಡಿರುವುದರಿಂದ ಆ ಸ್ಥಾನವೂ ತೆರವಾಗಿದೆ. ಕಳೆದ ಬಾರಿ ವಿಧಾನಸಭೆಯ ಚುನಾವಣೆಯಲ್ಲಿ ಜಾ.ದಳದಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ರಾದ ಬೀಚನಹಳ್ಳಿ ಚಿಕ್ಕಣ್ಣನವರ ಪುತ್ರ ಜಯಪ್ರಕಾಶ್ ಚಿಕ್ಕಣ್ಣರವರು ಬಿಜೆಪಿಯಿಂದ ಸ್ಪರ್ಧಿಸುವ ಕುರಿತು ಪಕ್ಷದ ಜಿಲ್ಲಾ ಮತ್ತು ರಾಜ್ಯದ ನಾಯಕರ ಜೊತೆ ಮಾತುಕತೆ ನಡೆಸಲಾಗಿದ್ದು ಕಾರಣಾಂತರಗಳಿಂದ ಇನ್ನೂ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ.

ಹೀಗಾಗಿ ಪಕ್ಷದ ಪ್ರಮುಖ ಎರಡು ಸ್ಥಾನಗಳು ಖಾಲಿಯಾಗಿರುವುದರಿಂದ ಶೀಘ್ರದಲ್ಲೇ ಇವುಗಳನ್ನು ಭರ್ತಿ ಮಾಡಿ ಪಕ್ಷದ ಸಂಘಟನೆಗೆ ಮುಂದಾಗಬೇಕಿದೆ. ಮತ್ತೆ ವಿರೋಧ ಪಕ್ಷವಾಗಿಯೂ ಸಕ್ರಿಯವಾಗಿ ಕೆಲಸ ನಿರ್ವಹಿಸಬೇಕಿದೆ. ಆಗ ಮಾತ್ರ ಕ್ಷೇತ್ರ ದಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಉಳಿಸಿ ಕೊಂಡು ಮುಂಬರುವ ಚುನಾ ವಣೆಗಳನ್ನು ಎದುರಿಸುವ ಶಕ್ತಿ ಹೊಂದ ಲಿದೆ ಎಂಬ ಆಶಾಭಾವನೆಯಲ್ಲಿ ಕಾರ್ಯಕರ್ತರು, ಮುಖಂಡರು ಕಾಯುತ್ತಿದ್ದಾರೆ.

” ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೇ ಶೀಘ್ರದಲ್ಲೇ ನೇಮಕ ಮಾಡಲಾಗುವುದು. ಈ ಸಂಬಂಧ ಪ್ರಕ್ರಿಯೆ ನಡೆಯುತ್ತಿದ್ದು, ತಾಲ್ಲೂಕು ಕೇಂದ್ರ ಸ್ಥಾನದಲ್ಲೇ ಅಧ್ಯಕ್ಷರ ನೇಮಕ ಮಾಡಲಾಗುವುದು. ಜಯಪ್ರಕಾಶ್ ಚಿಕ್ಕಣ್ಣನವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ರಾಜ್ಯಾಧ್ಯಕ್ಷರು ಸಮಯ ನಿಗದಿ ಮಾಡಿದ ತಕ್ಷಣ ಕಾರ್ಯಕ್ರಮ ರೂಪಿಸಲಾಗುವುದು.”

-ಕುಂಬ್ರಳ್ಳಿ ಸುಬ್ಬಣ್ಣ, ಅಧ್ಯಕ್ಷರು, ಜಿಲ್ಲಾ ಬಿಜೆಪಿ ಘಟಕ 

 

 

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

15 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

16 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

16 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

17 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

17 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

20 hours ago