Andolana originals

ಅಪಘಾತ ನಿಯಂತ್ರಣಕ್ಕೆ ಕೆಎಸ್ಆರ್‌ಟಿಸಿ ಹೊಸ ಪ್ರಯೋಗ!

ಪ್ರಶಾಂತ್ ಎಸ್.

ವಿಡಿಯೋ ಪ್ರಾತ್ಯಕ್ಷಿಕೆ ಮೂಲಕ ಸಾರಿಗೆ ಬಸ್ ಚಾಲಕರಿಗೆ ತರಬೇತಿ 

ಮೈಸೂರು: ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತ ಪ್ರಕರಣಗಳಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳ ಜೀವ ಹಾನಿಯಾಗುತ್ತಿದ್ದು, ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಕೆಎಸ್‌ಆರ್‌ಟಿಸಿ ಮುಂದಾಗಿದೆ. ಅಂತೆಯೇ ತನ್ನ ಚಾಲಕರಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿಯನ್ನು ನೀಡಲೂ ಕ್ರಮ ಕೈಗೊಂಡಿದೆ.

ಕೆಎಸ್‌ಆರ್‌ಟಿಸಿ ಚಾಲಕರನ್ನು ಸಂಚಾರ ನಿರ್ವಹಣೆ ಕೇಂದ್ರಕ್ಕೆಆಹ್ವಾನಿಸುತ್ತಿರುವ ಅಽಕಾರಿಗಳು, ಸಂಚಾರ ಮತ್ತು ಚಾಲನಾ ಪರಿಣತರಿಂದ ತರಬೇತಿ ಕೊಡಿಸುತ್ತಿದ್ದಾರೆ. ರಸ್ತೆ ಗುಂಡಿಗಳಿದ್ದಾಗ ಯಾವ ರೀತಿ ಚಾಲನೆ ಮಾಡಬೇಕು, ಸಂಚಾರ ನಿಯಮ ಪಾಲಿಸುವುದರಿಂದ ಯಾವ ರೀತಿ ಅಪಘಾತ ತಪ್ಪಿಸಬಹುದು, ವೇಗದ ಚಾಲನೆಯಿಂದಾಗುವ ಅನಾಹುತ, ಓವರ್ ಟೇಕ್‌ನಿಂದಾಗುವ ಸಮಸ್ಯೆ ಏನು ಎಂಬುದೂ ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ವಿಡಿಯೋ ಪ್ರಾತ್ಯಕ್ಷಿಕೆ ಸಮೇತ ಚಾಲಕರಿಗೆ ತರಬೇತಿ ನೀಡಲು ಮುಂದಾಗಿದೆ.

ಅಪಘಾತದ ವಿಡಿಯೋ ಪ್ರದರ್ಶನ: ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಬಸ್ ಅಪಘಾತಗಳ ದೃಶ್ಯಗಳನ್ನು ಒಟ್ಟುಗೂಡಿಸಿ ವಿಡಿಯೋ ಸಿದ್ಧಪಡಿಸಲಾಗಿದ್ದು, ಇದನ್ನೇ ಚಾಲಕರಿಗೆ ಪ್ರದರ್ಶಿಸಲಾಗುತ್ತಿದೆ. ಆ ಮೂಲಕ ಅಪಘಾತಕ್ಕೆ ಕಾರಣವಾದ ಅಂಶಗಳನ್ನು ಮನದಟ್ಟು ಮಾಡಲಾಗುತ್ತಿದೆ. ವೃದ್ಧರು, ಮಹಿಳೆಯರು, ಮಕ್ಕಳು ರಸ್ತೆ ದಾಟುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಚಾಲಕರಿಗೆ ತರಬೇತಿ ನೀಡುವುದರ ಜೊತೆಗೆ ಸಂಚಾರ ನಿಯಮಗಳ ಪಾಲನೆ, ರಸ್ತೆ ಸುರಕ್ಷತಾ ಕ್ರಮಗಳ ಜಾರಿ, ಸಾರ್ವಜನಿಕರ ಬಗ್ಗೆ ಕಾಳಜಿ ಹಾಗೂ ಇತರೆ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಪ್ರತಿ ತಿಂಗಳು ಜಾಗೃತಿ: ಪ್ರತಿವರ್ಷ ಬಸ್‌ಗಳಿಂದ ನಡೆಯುವ ರಸ್ತೆ ಅಪಘಾತಗಳ ಬಗ್ಗೆ ಪ್ರತ್ಯೇಕವಾಗಿ ತನಿಖೆ ನಡೆಸುವ ಅಧಿಕಾರಿಗಳು, ಯಾವ ಕಾರಣಕ್ಕೆ ಅಪಘಾತ ನಡೆದಿದೆ, ಅಪಘಾತಕ್ಕೆ ಯಾರ ನಿರ್ಲಕ್ಷ್ಯ ಕಾರಣ ಎಂಬುದನ್ನು ಪತ್ತೆ ಹಚ್ಚಿ ಮುಂದೆ ಇಂತಹ ಅಪಫಾತಗಳು ಸಂಭವಿಸದಂತೆ ಚಾಲಕರಿಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರತಿ ತಿಂಗಳು ಮಾಡುತ್ತಿದ್ದಾರೆ.

ಅಮಾನತ್ತು ಶಿಕ್ಷೆ: ನಿರ್ಲಕ್ಷ್ಯ ಮತ್ತು ಅಸಡ್ಡೆಯಿಂದ ವಾಹನ ಚಾಲನೆ ಮಾಡಿ ರಸ್ತೆ ಅಪಘಾತಕ್ಕೆ ಕಾರಣವಾದರೆ ಅಂತಹ ಬಸ್ ಚಾಲಕರನ್ನು ಆರು ತಿಂಗಳು ಅಮಾನತ್ತು ಮಾಡುವ ಮೂಲಕ ಅವರಿಗೆ ಸಿಗಬೇಕಾದ ಸವಲತ್ತುಗಳನ್ನು ಕಡಿತಗೊಳಿಸಲಾಗುತ್ತದೆ. ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಚಾಲಕರನ್ನು ವಜಾ ಮಾಡಲಾಗುತ್ತದೆ.

” ಎಸ್‌ಆರ್‌ಟಿಸಿಯ ಕೆಲವು ಬಸ್ ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸಿಬ್ಬಂದಿಗೆ ತಿಂಗಳಿಗೊಮ್ಮೆ ತರಬೇತಿ ನೀಡಲಾಗುತ್ತಿತ್ತು. ಆದರೆ, ಈ ಬಾರಿ ವಿನೂತನವಾಗಿ ವಿಡಿಯೋ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.”

-ಶ್ರೀನಿವಾಸ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ

” ಎಸ್‌ಆರ್‌ಟಿಸಿಯ ಕೆಲವು ಚಾಲಕರ ನಿರ್ಲಕ್ಷ್ಯದಿಂದ ಹಾಗೂ ವಾಹನಗಳು ಹೆಚ್ಚು ಇದ್ದಂತಹ ಸಂದರ್ಭದಲ್ಲಿ ಆಗಾಗ್ಗೆ ಅಪಘಾತಗಳು ಆಗುತ್ತಿವೆ. ಇದನ್ನು ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯಲಿ ರುವ ತರಬೇತಿ ಕೇಂದ್ರಗಳಲ್ಲಿ ಚಾಲಕರಿಗೆ ಪ್ರತಿ ತಿಂಗಳು ವಿಡಿಯೋ ಪ್ರಾತ್ಯಕ್ಷಿಕೆಯ ಮೂಲಕ ತರಬೇತಿ ನೀಡಲಾಗುತ್ತಿದೆ.”

-ಅಕ್ರಂಪಾಷ, ವ್ಯವಸ್ಥಾಪಕ ನಿರ್ದೇಶಕರು, ಕೆಎಸ್‌ಆರ್‌ಟಿಸಿ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

23 mins ago

ಅಧಿಕಾರ ಹಂಚಿಕೆ ಗೊಂದಲ; ಬಿಜೆಪಿ, ಜಾ.ದಳದಲ್ಲಿ ಆತ್ಮವಿಶ್ವಾಸ ಹೆಚ್ಚಳ

ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…

39 mins ago

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

54 mins ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

1 hour ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

4 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

4 hours ago